ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ತಂದೆ ರಾಜುಕುಮಾರ್ (45) ಮತ್ತು ಮಗಳು ಸುಮಾ (14) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಇಬ್ಬರ ಸಾವು ದರ್ಗಾ ಪ್ರದೇಶದಲ್ಲಿ ಶೋಕ ಮಡುಗಿಸಿದೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಅಪ್ಪ-ಮಗಳಿಗೆ ಯಮನಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್: ಕಲಬುರಗಿ ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ
ಸಾಂದರ್ಭಿಕ ಚಿತ್ರ
Edited By:

Updated on: Apr 07, 2026 | 7:43 PM

ಕಲಬುರಗಿ, ಏ.7: ಕಲಬುರಗಿ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ (Sayyid Chincholi Cross) ಬಳಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ತಂದೆ ಮತ್ತು ಮಗಳಿಗೆ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಟ್ಯಾಂಕರ್ (Cement Mixer Tanker) ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಟ್ಯಾಂಕರ್‌ನ ಚಕ್ರಗಳ ಅಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿಯ ರಾಣೇಶಪೀರ್ ದರ್ಗಾ ಪ್ರದೇಶದ ನಿವಾಸಿಗಳಾದ ರಾಜುಕುಮಾರ್ (45) ಮತ್ತು ಅವರ 14 ವರ್ಷದ ಮಗಳು ಸುಮಾ ಎಂದು ಗುರುತಿಸಲಾಗಿದೆ. ರಾಜುಕುಮಾರ್ ಅವರು ಮಗಳನ್ನು ಬೈಕ್‌ನಲ್ಲಿ ಕರೆದುಕೊಂಡು ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಒಂದೇ ಕುಟುಂಬದ ಇಬ್ಬರು ಸದಸ್ಯರು ಏಕಾಏಕಿ ಸಾವನ್ನಪ್ಪಿರುವುದು ದರ್ಗಾ ಪ್ರದೇಶದಲ್ಲಿ ಶೋಕದ ಛಾಯೆ ಮೂಡಿಸಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ತ್ರಿಕೋನ ಪ್ರೇಮಕ್ಕೆ ನರ್ಸ್ ಬಲಿ: ಹೈಕೋರ್ಟ್ ತೀರ್ಪಿನಿಂದ ಅನಸ್ತೇಶಿಯಾ ವೈದ್ಯೆಗೆ ಬಿಗ್ ರಿಲೀಫ್!

ಅಪಘಾತದ ಮಾಹಿತಿ ದೊರೆತ ತಕ್ಷಣ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಸಿಮೆಂಟ್ ಮಿಕ್ಸರ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us