AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಅನ್ಯಜಾತಿ ಯುವಕನನ್ನು ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸುಟ್ಟುಹಾಕಿದ ತಂದೆ

ರಾಜ್ಯದಲ್ಲಿ ಮತ್ತೆ ಮರ್ಯಾದೆ ಹತ್ಯೆ ಸದ್ದು ಮಾಡಿದೆ. ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಸ್ವಂತ ಮಗಳನ್ನು ತಂದೆ ಕೊಲೆ ಮಾಡಿ ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ. ಸದ್ಯ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಕೊಲೆಗೆ ಸಾಥ್​ ನೀಡಿದ ಮತ್ತಿಬ್ಬರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಕಲಬುರಗಿ: ಅನ್ಯಜಾತಿ ಯುವಕನನ್ನು ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದು ಸುಟ್ಟುಹಾಕಿದ ತಂದೆ
ಬಂಧಿತ ತಂದೆ, ಮೃತ ಮಗಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Aug 30, 2025 | 7:39 AM

Share

ಕಲಬುರಗಿ, ಆಗಸ್ಟ್​ 30: ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ತಂದೆ (Father) ತನ್ನ ಸ್ವಂತ 18 ವರ್ಷದ ಮಗಳನ್ನು (daughter) ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ‌ನಡೆದಿದೆ. ಆ ಮೂಲಕ ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ತಣ್ಣಗಿದ್ದ ಮರ್ಯಾದೆ ಹತ್ಯೆ ಮತ್ತೆ ಸದ್ದು ಮಾಡಿದೆ. ಕವಿತಾ ಕೊಲೆಯಾದ ಮಗಳು. ಸದ್ಯ ಫರಹತಬಾದ್ ಠಾಣೆ ಪೊಲೀಸರು ತಂದೆ ಶಂಕರ್ ಕೊಳ್ಳುರು ಬಂಧಿಸಿದ್ದಾರೆ. ಕೊಲೆಗೆ ಸಾಥ್ ನೀಡಿದ್ದ ಶರಣು ಮತ್ತು ದತ್ತಪ್ಪ ಬಂಧನಕ್ಕೆ ಬಲೆ ಬಿಸಿದ್ದಾರೆ.

ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮಾಜದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಕಲಬುರಗಿ ನಗರಕ್ಕೆ ಪಿಯುಸಿ ಅಧ್ಯಯನಕ್ಕೆ ಬರುತ್ತಿದ್ದ ವೇಳೆ ಪ್ರೀತಿ ಮಾಡಿದ್ದರು. ಮೂರ್ನಾಲ್ಕು ತಿಂಗಳ ಹಿಂದೆ ಮನೆಯವರಿಗೆ ಪ್ರೀತಿ ವಿಷಯ ತಿಳಿದಿದ್ದು, ಕಾಲೇಜು ಬಿಡಿಸಿದ್ದರು.

ಇದನ್ನೂ ಓದಿ: 50 ಲಕ್ಷ ರೂ. ಖರ್ಚು ಮಾಡಿ ಮದ್ವೆ: ಮೂರೇ ವರ್ಷದಲ್ಲಿ ಮಹಿಳಾ ಟೆಕ್ಕಿ ದುರಂತ ಸಾವು

ಇದನ್ನೂ ಓದಿ
Image
50 ಲಕ್ಷ ರೂ. ಖರ್ಚು ಮಾಡಿ ಮದ್ವೆ: ಮೂರೇ ವರ್ಷದಲ್ಲಿ ಟೆಕ್ಕಿ ದುರಂತ ಸಾವು
Image
ಸಿಬಿಐ ನಿವೃತ್ತ ಎಸ್​ಪಿಯ 97ಲಕ್ಷ ರೂ. ಕದ್ದಾತ ಸಿನಿಮೀಯ ರೀತಿಯಲ್ಲಿ ಬಂಧನ
Image
ವಿವಾಹಿತೆಯನ್ನ ಲಾಡ್ಜ್​ ಗೆ ಕರೆದೊಯ್ದು ಸ್ಫೋಟಿಸಿ ಕೊಂದ ಪ್ರಿಯಕರ
Image
ರಾಗಿ ಮುದ್ದೆಯಲ್ಲಿ‌ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನ ಕೊಲೆ ಮಾಡಿದ ಸೊಸೆ

ಈ ಮಧ್ಯೆ ಕವಿತಾ ಮಾಳಪನನ್ನು ಮದುವೆ ಆಗುತ್ತೇನೆ. ಮದುವೆ ಮಾಡದಿದ್ದರೆ ಓಡಿ ಹೋಗುತ್ತೇನೆ ಎಂದು ಹೇಳಿದ್ದಳು. ಮನೆಯವರು ಅನ್ಯ ಜಾತಿಯ ಯುವಕನನ್ನು ಮದುವೆ ಆಗುವುದನ್ನು ನಿರಾಕರಿಸಿದ್ದು, ಹೆದರಿಸಿದ್ದಾರೆ. ಆದರೂ ಕವಿತಾ ಪಟ್ಟು ಬಿಡದೇ ಮದುವೆ ಆಗುತ್ತೇನೆಂದು ಹಠ ಹಿಡಿದಿದ್ದಳು.

ವಿಷ ಕುಡಿದಿರುವುದಾಗಿ ಕಥೆ ಕಟ್ಟಿದ್ದ ತಂದೆ

ಈ ನಡುವೆ ಮಧ್ಯರಾತ್ರಿ ಯುವತಿ ತಂದೆ ಶಂಕರ್​, ಸಹೋದರ ಶರಣು, ಸಂಬಂಧಿ ದತ್ತು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ, ಕ್ರಿಮಿನಾಶಕ ಸಿಂಪಡಿಸಿ ವಿಷ ಸೇವಿಸಿ, ಮೃತಪಟ್ಟಿದ್ದಾಳೆಂದು ಬಿಂಬಿಸಿದ್ದಾರೆ. ನಂತರ ಬೆಳಗ್ಗೆ 9ಗಂಟೆ ಸುಮಾರಿಗೆ ಗ್ರಾಮದ ಹೊರವಲಯದ ಸಂಬಂಧಿಕರ ಜಮೀನಿನಲ್ಲಿ ದೇಹವನ್ನು ಸುಟ್ಟು ಹಾಕಿದ್ದಾರೆ.

ಹೆತ್ತ ಮಗಳನ್ನು ಕೊಂದು ಮೊದಲು ಆತ್ಮಹತ್ಯೆ ಕುಡಿದುಕೊಂಡಿದ್ದಾಳೆಂದು ಬಿಂಬಿಸಿದ್ದರು. ಆದರೆ ಪೊಲೀಸರ ತನೀಖೆಯ ವೇಳೆ ಈ ಘನಘೋರ ಕೃತ್ಯ ಬಯಲಾಗಿದೆ. ಇಂತಹದೊಂದು ಘೋರ ಕೃತ್ಯಕ್ಕೆ ಇಡೀ ಜಿಲ್ಲೆ ಬೆಚ್ಚಿ ಬಿದಿದ್ದು, ಊರಿಗೆ ಊರೇ ಬೂದಿ ಮುಚ್ಚಿದ ಕೆಂಡದಂತಾಗಿದೆ. ಯಾಕೆಂದರೆ ಇಡೀ ಗ್ರಾಮದಲ್ಲಿ ಯಾರೂ ಕೂಡ ಮಾತನಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ರಾಗಿ ಮುದ್ದೆಯಲ್ಲಿ‌ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನ ಕೊಲೆ ಮಾಡಿದ ಸೊಸೆ

ಸದ್ಯ ಫರಹತಾಬಾದ್ ಪೊಲೀಸ್​ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್​ ಆಯುಕ್ತ ಡಾ.ಶರಣಪ್ಪ ಎಸ್​.ಡಿ., ಪಿಐ ಮಂಜುನಾಥ ಇಕ್ಕಳಕಿ ಸೇರಿದಂತೆ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಒಟ್ಟಿನಲ್ಲಿ ಇಷ್ಟು ದಿನ ರಾಜ್ಯದಲ್ಲಿ ತಣ್ಣಗಾಗಿದ್ದ‌ ಮರ್ಯಾದೆ ಹತ್ಯೆ ಎಂಬ ಕೃತ ಮತ್ತೆ ಮುನ್ನಲೆಗೆ ಬಂದಿದ್ದು ನಿಜಕ್ಕೂ ದುರಂತವೇ ಸರಿ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:38 am, Sat, 30 August 25

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್