ಕಲಬುರಗಿ: ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ನಾಲ್ವರು ಸದಸ್ಯರು ಅಪಹರಣ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ನಾಲ್ವರು ಗ್ರಾಮ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಿರುವ ಆರೋಪ ಕೇಳಿಬಂದಿದೆ.

ಕಲಬುರಗಿ: ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ನಾಲ್ವರು ಸದಸ್ಯರು ಅಪಹರಣ
ನಾಲ್ವರು ಗಾಮ ಪಂಚಾಯಿತಿ ಸದಸ್ಯರ ಅಪಹರಣ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on: Aug 05, 2023 | 11:21 AM

ಕಲಬುರಗಿ: ಚಿಂಚೋಳಿ (Chincholi) ತಾಲೂಕಿನ ಐನೊಳ್ಳಿ ಗ್ರಾಮ ಪಂಚಾಯಿತಿಯ (Gram Panchayat) ಬಿಜೆಪಿ (BJP) ಬೆಂಬಲಿತ ನಾಲ್ವರು ಗ್ರಾಮ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ (Congress) ಕಾರ್ಯಕರ್ತರು ಅಪಹರಿಸಿರುವ ಆರೋಪ ಕೇಳಿಬಂದಿದೆ. ಆ.7 ರಂದು ಐನೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಇದೆ. ಮಹಿಳಾ ಮೀಸಲಾತಿ ಇರುವ ಅಧ್ಯಕ್ಷ ಸ್ಥಾನಕ್ಕೆ ಏರಲು 10 ಸದಸ್ಯರ ಬೆಂಬಲ ಅವಶ್ಯಕತೆ ಇದೆ.

ಈ ನಡುವೆ ಜು.13ರಂದು 18 ಸದಸ್ಯರಲ್ಲಿ 11 ಸದಸ್ಯರು ಮಹಾರಾಷ್ಟ್ರದ ಪುಣೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಅಲ್ಲಿ ಹೋಟೆಲ್​​ವೊಂದರಲ್ಲಿ ವಾಸ್ತವ್ಯವಿದ್ದರು. ಶುಕ್ರವಾರ ಸಿನಿಮಿಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿದ ಕಾಂಗ್ರೆಸ್​ ಕಾರ್ಯಕರ್ತರು ನಾಲ್ವರು ಸದಸ್ಯರನ್ನು ಕರೆದುಕೊಂಡು ಹೋಗಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಸದಸ್ಯರನ್ನು ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಣೆಯ ಚಿಕ್ಲಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಮಹಿಳಾ ಮೀಸಲಾತಿಯ ಅಧ್ಯಕ್ಷ ಸ್ಥಾನಕ್ಕೆ ಏರಲು 10 ಸದಸ್ಯರ ಬೆಂಬಲ ಬೇಕು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪರಿಶಿಷ್ಟ ಜಾತಿಯ (ಬಂಜಾರಾ ಹಾಗೂ ಎಸ್​​ಸಿ ಬಲ) ಮಹಿಳೆಯರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್