AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಕೇದಾರನಾಥ ದರ್ಶನ: ಹಿಮಾಲಯದ ಮಾದರಿ ಪೆಂಡಾಲ್‌ನಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಕಲಬುರಗಿಯಲ್ಲಿ ಗಣೇಶೋತ್ಸವ ಸಂಭ್ರಮ ಮನೆಮಾಡಿದೆ. ಹಿಂದೂ ಮಹಾಗಣಪತಿ ಸಮಿತಿ ಈ ವರ್ಷ ಕೇದಾರನಾಥ ದೇವಾಲಯದ ಮಾದರಿಯಲ್ಲಿ ಪೆಂಡಾಲ್ ನಿರ್ಮಿಸಿದ್ದು, ಭಕ್ತರಿಗೆ ಕೇದಾರನಾಥ ಮತ್ತು 12 ಜ್ಯೋತಿರ್ಲಿಂಗಗಳ ದರ್ಶನದ ಅನುಭವ ನೀಡುತ್ತಿದೆ. ಕಳೆದ ವರ್ಷ ಅಯೋಧ್ಯೆ ರಾಮಮಂದಿರ, ಹಿಂದಿನ ವರ್ಷ ತಿರುಪತಿ ಮಾದರಿ ಮಾಡಿತ್ತು. ಈ ವಿಶಿಷ್ಟ ಪರಿಕಲ್ಪನೆ ಭಕ್ತರನ್ನು ಆಕರ್ಷಿಸುತ್ತಿದೆ, ಆಧ್ಯಾತ್ಮಿಕ ಅನುಭವ ನೀಡುತ್ತಿದೆ.

ಕಲಬುರಗಿಯಲ್ಲಿ ಕೇದಾರನಾಥ ದರ್ಶನ: ಹಿಮಾಲಯದ ಮಾದರಿ ಪೆಂಡಾಲ್‌ನಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
ಕಲಬುರಗಿ ಗಣೇಶImage Credit source: Tv9 kannada
ದತ್ತಾತ್ರೇಯ ಪಾಟೀಲ್​
| Edited By: |

Updated on: Sep 15, 2026 | 7:34 AM

Share

ಕಲಬುರಗಿ, ಸೆ.15: ಬಿಸಿಲನಾಡು ಕಲಬುರಗಿಯಲ್ಲಿ ಗೌರಿ-ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದ್ದು, ನಾಡಿನಾದ್ಯಂತ ವಿಘ್ನನಿವಾರಕ ಎಕದಂತನನ್ನು ಭಕ್ತಿ-ಸಡಗರದಿಂದ ಬರಮಾಡಿಕೊಳ್ಳಲಾಗಿದೆ. ಈ ಬಾರಿ ಕಲಬುರಗಿ ನಗರದ ಕೋಟೆ ಎದುರು ಸ್ಥಾಪಿಸಲಾಗಿರುವ ‘ಹಿಂದೂ ಮಹಾಗಣಪತಿ’ ಭಕ್ತಾದಿಗಳಿಗೆ ಹಿಮಾಲಯದ ಕೇದಾರನಾಥ ಪುಣ್ಯಕ್ಷೇತ್ರದ ಅನುಭೂತಿಯನ್ನು ನೀಡುತ್ತಿದ್ದು, ಸಾರ್ವಜನಿಕರ ಕಣ್ಣುಸೆಳೆಯುತ್ತಿದೆ.

ಪ್ರತಿವರ್ಷವೂ ವಿನೂತನ ಪರಿಕಲ್ಪನೆಯೊಂದಿಗೆ ಗಣೇಶೋತ್ಸವ ಆಚರಿಸುವ ಹಿಂದೂ ಮಹಾಗಣಪತಿ ಸಮಿತಿಯ ಅಭೂತಪೂರ್ವ ಥೀಮ್, ಈ ಬಾರಿಯ ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಕಲಬುರಗಿಯ ಕೋಟೆ ಮುಂಭಾಗದಲ್ಲಿ ಅತ್ಯಂತ ಭವ್ಯವಾಗಿ ನಿರ್ಮಿಸಲಾಗಿರುವ ಪೆಂಡಾಲ್ ಥೇಟ್ ಹಿಮಾಲಯದ ಕೇದಾರನಾಥ ದೇವಾಲಯದ ಮಾದರಿಯಲ್ಲಿದೆ.

ಕೇದಾರನಾಥ ಮಂದಿರದ ಮಾದರಿಯ ಗರ್ಭಗುಡಿಯಲ್ಲಿ ವಿಘ್ನ ವಿನಾಶಕ ಗಣೇಶನ ಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿದೆ. ಕೇದಾರನಾಥ ಶಿವಲಿಂಗದ ಜೊತೆಗೆ ಪೆಂಡಾಲ್‌ನಲ್ಲಿ ಭಕ್ತಾದಿಗಳಿಗಾಗಿ 12 ಜ್ಯೋತಿರ್ಲಿಂಗಗಳ ದರ್ಶನಕ್ಕೂ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಕಲಬುರಗಿಯಲ್ಲೇ ಇದ್ದು ಹಿಮಾಲಯದ ಕೇದಾರನಾಥ ಯಾತ್ರೆ ಮಾಡಿದ ಅನುಭವವನ್ನು ಜನತೆ ಪಡೆಯುತ್ತಿದ್ದಾರೆ.

ಹಿಂದೂ ಮಹಾಗಣಪತಿ ಸಮಿತಿಯ ಸದಸ್ಯ ಬಸವರಾಜ್ ಮಾತನಾಡಿ, ಸಮಿತಿಯು ಪ್ರತಿವರ್ಷ ವಿಶಿಷ್ಟ ಪರಿಕಲ್ಪನೆಯಲ್ಲಿ ಗಣೇಶೋತ್ಸವ ಆಚರಿಸುವ ಸಂಪ್ರದಾಯ ಇಟ್ಟುಕೊಂಡಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಅಯೋಧ್ಯೆಯ ಶ್ರೀರಾಮ ಮಂದಿರದ ಮಾದರಿ ಪೆಂಡಾಲ್. ಅದಕ್ಕೂ ಹಿಂದಿನ ವರ್ಷ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮಾದರಿ ಮಾಡಲಾಗಿತ್ತು. ಈ ಬಾರಿ ಬಿಸಿಲನಾಡಿನ ಜನರಿಗೆ ಹಿಮಾಲಯದ ಅನುಭವ ನೀಡಲು ಕೇದಾರನಾಥ ಮಂದಿರ ಮಾದರಿ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದ ಗಾಳಿಯ ಗುಣಮಟ್ಟ ವರದಿ: ಕರಾವಳಿಯಲ್ಲಿ ಉತ್ತಮ, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾಧಾರಣ

ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಹಾಗಣಪತಿಯನ್ನು ವೈಭವದಿಂದ ಸ್ವಾಗತಿಸಲಾಗಿದ್ದು, ಕೇದಾರನಾಥ ಗಣೇಶನ ದರ್ಶನ ಪಡೆಯಲು ಭಕ್ತರು ತಂಡೋಪತಂಡವಾಗಿ ಹರಿದುಬರುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್