AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಸರ್ಕಾರಿ ಹಾಸ್ಟೆಲ್​​ ಬೋರ್​ವೆಲ್​ಗಳಲ್ಲಿ ಬತ್ತಿದ ನೀರು: ಸ್ನಾನಕ್ಕೂ ನೀರಿಲ್ಲದೆ ವಿದ್ಯಾರ್ಥಿನಿಯರ ಪರದಾಟ

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯ ಸರ್ಕಾರಿ ವಸತಿ ನಿಲಯಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಅಂತರ್ಜಲಮಟ್ಟ ಕುಸಿದು ಬೋರ್‌ವೆಲ್‌ಗಳು ಬತ್ತಿರುವುದರಿಂದ ವಿದ್ಯಾರ್ಥಿನಿಯರಿಗೆ ನಿತ್ಯದ ಅಗತ್ಯಗಳಿಗೂ, ಸ್ನಾನಕ್ಕೂ ನೀರು ಸಿಗದಂತಾಗಿದೆ. ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ತರಿಸುತ್ತಿದ್ದರೂ ಕೆಲವೇ ಗಂಟೆಗಳಲ್ಲಿ ನೀರು ಖಾಲಿಯಾಗುತ್ತಿದೆ.

ಕಲಬುರಗಿಯ ಸರ್ಕಾರಿ ಹಾಸ್ಟೆಲ್​​ ಬೋರ್​ವೆಲ್​ಗಳಲ್ಲಿ ಬತ್ತಿದ ನೀರು: ಸ್ನಾನಕ್ಕೂ ನೀರಿಲ್ಲದೆ ವಿದ್ಯಾರ್ಥಿನಿಯರ ಪರದಾಟ
ಕಲಬುರಗಿ: ಸರ್ಕಾರಿ ಹಾಸ್ಟೆಲ್​ಗಳಲ್ಲಿ ನೀರಿಲ್ಲದೆ ವಿದ್ಯಾರ್ಥಿನಿಯರ ಪರದಾಟImage Credit source: tv9
ದತ್ತಾತ್ರೇಯ ಪಾಟೀಲ್​
| Edited By: |

Updated on: Oct 08, 2026 | 8:10 AM

Share

ಮುಖ್ಯಾಂಶಗಳು

  • ಬಹುತೇಕ ಬತ್ತಿದ ಸರ್ಕಾರಿ ಹಾಸ್ಟೆಲ್‌ಗಳ ಬೋರ್‌ವೆಲ್‌ಗಳು
  • ಸ್ನಾನಕ್ಕೂ ನೀರಿಲ್ಲದೆ ವಿದ್ಯಾರ್ಥಿನಿಯರ ಪರದಾಟ
  • ಟ್ಯಾಂಕರ್ ನೀರಿಗೂ ವಿದ್ಯಾರ್ಥಿನಿಯರಿಗೆ ತೀವ್ರ ಸಮಸ್ಯೆ

ಕಲಬುರಗಿ, ಅಕ್ಟೋಬರ್ 8: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೇಸಿಗೆಗೂ ಮುನ್ನವೇ ನೀರಿನ ಸಮಸ್ಯೆ ಎದುರಾಗಿದೆ. ಬಿಸಿಲನಾಡು ಕಲಬುರಗಿಯಲ್ಲಿ ಅಂತರ್ಜಲಮಟ್ಟ ಕುಸಿದು ಬೋರ್‌ವೆಲ್‌ಗಳು ಬತ್ತಿದ್ದು, ಸರ್ಕಾರಿ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 112 ವಸತಿ ನಿಲಯಗಳು, ಬಿಸಿಎಂ ಇಲಾಖೆಯ 138 ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 57 ಹಾಸ್ಟೆಲ್‌ಗಳಿವೆ. ಬಹುತೇಕ ಹಾಸ್ಟೆಲ್‌ಗಳಲ್ಲಿರುವ ಬೋರ್‌ವೆಲ್‌ಗಳು ಬತ್ತಿವೆ.

ನೀರಿನ ಅಭಾವದಿಂದ ವಿದ್ಯಾರ್ಥಿನಿಯರಿಗೆ ನಿತ್ಯದ ಅಗತ್ಯಗಳಿಗೂ ನೀರು ಸಿಗದಂತಾಗಿದೆ. ಅದರಲ್ಲೂ ಸ್ನಾನಕ್ಕೂ ನೀರಿನ ಸಮಸ್ಯೆ ಎದುರಾಗಿದ್ದು, ವಿದ್ಯಾರ್ಥಿನಿಯರು ಪರದಾಡುವಂತಾಗಿದೆ.

ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಿದರೂ ಬಗೆಹರಿಯದ ಸಮಸ್ಯೆ

ನೀರಿನ ಸಮಸ್ಯೆ ನೀಗಿಸಲು ವಾರ್ಡನ್‌ಗಳು ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ತರಿಸುತ್ತಿದ್ದಾರೆ. ಒಂದು ಟ್ಯಾಂಕರ್‌ಗೆ 500 ರೂಪಾಯಿ ಪಾವತಿಸಲಾಗುತ್ತಿದ್ದು, ತರಿಸಲಾಗುವ ನೀರು ಕೆಲವೇ ಗಂಟೆಗಳಲ್ಲಿ ಖಾಲಿಯಾಗುತ್ತಿದೆ. ಇದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿನಿಯರ ಸಂಕಷ್ಟ ಮುಂದುವರಿದಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ: ತೊಗರಿ ಹೊಲದಲ್ಲಿ ಲ್ಯಾಂಡ್ ಮಾಡಿ ಪ್ರಾಣ ಉಳಿಸಿದ ಪೈಲಟ್

ನಗರಕ್ಕೆ ನೀರು ಸರಬರಾಜು ಮಾಡುವ ಎಲ್​&ಟಿ ಕಂಪನಿಗೆ ನೀರು ಪೂರೈಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಆದರೆ ಈವರೆಗೆ ಸಮರ್ಪಕವಾಗಿ ನೀರು ಸರಬರಾಜಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಸರ್ಕಾರಿ ವಸತಿ ನಿಲಯಗಳಿಗೆ ಆಡಳಿತ ಆದಷ್ಟು ಬೇಗ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಿ ಸಮಸ್ಯೆ ಬಗೆಹರಿಸಬೇಕು ಎಂಬ ಆಗ್ರಹ ಜೋರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ