ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳು, ಹನಿಟ್ರ್ಯಾಪ್​​​ಗೆ ಬಡ ಕುಟುಂಬದ ಯುವತಿಯರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!
ಸಾಂದರ್ಭಿಕ ಚಿತ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on: Sep 07, 2024 | 10:10 AM

ಕಲಬುರಗಿ, ಸೆಪ್ಟೆಂಬರ್​​ 07: ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ (Honey Trap)​​ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ  ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ.​

ಆರೋಪಿಗಳು, ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದರು. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಂತ್ರಸ್ತೆ ಟಿವಿ9 ಡಿಜಿಟಲ್​ ಮುಂದೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ