ಕಲಬುರಗಿ, ಸೆಪ್ಟೆಂಬರ್ 07: ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ (Honey Trap) ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ.
ಇದನ್ನೂ ಓದಿ: ಹನಿಟ್ರ್ಯಾಪ್ ಮೂಲಕ ಶಾಸಕ ಹರೀಶ್ಗೌಡಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿಗಳ ಬಂಧನ
ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ತಾವು ಟಾರ್ಗೆಟ್ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ ರೆಕಾರ್ಡ್ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ.
ಆರೋಪಿಗಳು, ಹನಿಟ್ರ್ಯಾಪ್ ಮೂಲಕ ಕಮಲಾಪುರ ಪೊಲೀಸ್ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್ ಪೇದೆಗೆ ಬ್ಲ್ಯಾಕ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದರು. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಂತ್ರಸ್ತೆ ಟಿವಿ9 ಡಿಜಿಟಲ್ ಮುಂದೆ ಅಳಲು ತೋಡಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ