ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೂ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಹಾಗಾದ್ರೆ, ಪೂಜೆಗೆ ಕೋರ್ಟ್ ನೀಡಿರುವ ಸೂಚನೆಗಳೇನು? ಎನ್ನುವ ವಿವರ ಇಲ್ಲಿದೆ.

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌
Ladle Mashak Darga
Edited By:

Updated on: Feb 11, 2026 | 5:23 PM

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಫೆಬ್ರವರಿ 15ರಂದು ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡಲು 15 ಜನರಿಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರನೆ ನಡೆಸಿದ ಕೋರ್ಟ್, ಕೇವಲ ಒಬ್ಬರಿಗೆ ಅದು ದೂರುದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶನ ನೀಡಿ ಆದೇಶಿಸಿದೆ. ಇದರೊಂದಿಗೆ 15 ಜನರಿಗೆ ಅನುಮತಿ ಕೋರಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

Published On - 5:17 pm, Wed, 11 February 26

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us