ಕಲಬುರಗಿ, (ಮಾರ್ಚ್ 06): ಜಿಲ್ಲೆಯ ಆಳಂದ ತಾಲೂಕಿನ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ(ladle mashak darga) ಶಿವರಾತ್ರಿಯಂದು ಶಿವಲಿಂಗ ಪೂಜೆ ಮಾಡಲು ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್ (Kalaburagi High Court) ಅವಕಾಶ ನೀಡಿದೆ. ಮಾರ್ಚ್ 8 ಶಿವರಾತ್ರಿಯ ದಿನ ಮಧ್ಯಾಹ್ನದ ನಂತರ ಪೂಜೆಗೆ 15 ಜನ ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್ ಪೀಠ ಅವಕಾಶ ನೀಡಿದ್ದು, ಪೂಜೆ ಸಲ್ಲಿಸುವವರ 15 ಜನರ ಪಟ್ಟಿ ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಮುಸ್ಲಿಂ ಸಮುದಾಯದ 15 ಜನರಿಗೂ ಪ್ರಾರ್ಥನೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಆದ್ರೆ, ನ್ಯಾಯಾಲಯಲಕ್ಕೆ ಪೂಜೆ ಸಲ್ಲಿಸುವವರ ಪಟ್ಟಿ ಸಲ್ಲಿಸಿದ ಬಳಿಕವೇ ಅನುಮತಿ ಎಂದು ಷರತ್ತು ಹಾಕಿದೆ.
ಕಳೆದ ವರ್ಷವು ಸಹ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಪೂಜೆ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿತ್ತು. ಅದರಂತೆ ಶ್ರೀ ರಾಮ ಸೇನೆ ರಾಷ್ಟ್ರೀಯ ಗೌರವ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಒಟ್ಟು 15 ಹಿಂದೂಗಳು ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ್ದರು. ಇದೀಗ ಈ ವರ್ಷವೂ ಸಹ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿದೆ.
ಇದನ್ನೂ ಓದಿ: ಆಳಂದ ಪಟ್ಟಣದ ಮಶಾಕ್ ದರ್ಗಾ-ಶಿವಲಿಂಗ ವಿವಾದ: ಶಿವರಾತ್ರಿಗೆ ಪೂಜೆ ನಡೆಯುತ್ತದಾ?
ಆಳಂದ ಪಟ್ಟಣದಲ್ಲಿ ಸುಪ್ರಸಿದ್ದ ಸೂಪಿ ಸಂತ ಲಾಡ್ಲೆ ಮಶಾಕ್ ದರ್ಗಾವಿದೆ. 14 ನೇ ಶತಮಾನದಲ್ಲಿಯೇ ತನ್ನ ತತ್ವ ವಿಚಾರಗಳಿಂದ ಲಾಡ್ಲೆ ಮಶಾಕ್ ಸುಪ್ರಸಿದ್ದಿಯನ್ನು ಹೊಂದಿದ್ದರು. ಇದೇ ದರ್ಗಾದ ಆವರಣದಲ್ಲಿ, 15ನೇ ಶತಮಾನದಲ್ಲಿ ಆಗಿಹೋಗಿರುವ ಸಂತ, ಶಿವಾಜಿ ಮಹಾರಾಜರ ಗುರು, ಸಮರ್ಥ ರಾಮದಾಸರ ರಾಘವ ಚೈತನ್ಯರ ಸಮಾಧಿಯಿದೆ. ಸಮಾಧಿ ಮೇಲೆ ಶಿವಲಿಂಗವಿದೆ. ದರ್ಗಾಕ್ಕೆ ಹೋಗುತ್ತಿದ್ದ ಅನೇಕ ಹಿಂದೂ ಭಕ್ತರು, ರಾಘವ ಚೈತನ್ಯ ಸಮಾಧಿ ಮತ್ತು ಶಿವಲಿಂಗಕ್ಕೆ ನಮಸ್ಕರಿಸಿ, ಪೂಜೆ ಮಾಡಿ ಬರುತ್ತಿದ್ದರು. ಜೊತೆಗೆ ಜೋಶಿ ಅನ್ನೋ ಕುಟುಂಬದವರು ಲಿಂಗಕ್ಕೆ ಪ್ರತಿದಿನ ಪೂಜೆ ಸಲ್ಲಿಸುತ್ತಿದ್ದರು. ಇತ್ತೀಚಿನವರೆಗೆ ಅಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಕೂಡ ಇತ್ತು.
ಆದರೆ, ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಶಿವಲಿಂಗದ ಮೇಲೆ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿದ್ದನ್ನು. ಅಲ್ಲಿಂದ ಈ ದರ್ಗಾದಲ್ಲಿ ಪೂಜೆ ವಿಚಾರಕ್ಕೆ ಹಿಂದೂ ಮುಸ್ಲಿಂ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:57 pm, Wed, 6 March 24