AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಆದಾಯ ಪ್ರಮಾಣಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​, ಹಿಂದೂ ವ್ಯಕ್ತಿಯನ್ನ ಮುಸ್ಲಿಂ ಜಾತಿಗೆ ಸೇರಿಸಿದ ಅಧಿಕಾರಿಗಳು

ಕಲಬುರಗಿ ತಹಶೀಲ್ದಾರ್​ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ರಾಮತೀರ್ಥನಗರದ ಕುಟುಂಬ ಒಂದು ಕಂಗಾಲಾಗಿದೆ. ಆದಾಯ ಪ್ರಮಾಣ ಪತ್ರ ಪಡೆಯಲು ಹೋಗಿದ್ದ ವ್ಯಕ್ತಿಗೆ ನಿಜಕ್ಕೂ ಶಾಕ್​ ಉಂಟಾಗಿದೆ. ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸುವ ಮೂಲಕ ದೊಡ ಅನಾಹುತಕ್ಕೆ ಕಾರಣವಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕಲಬುರಗಿ: ಆದಾಯ ಪ್ರಮಾಣಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​, ಹಿಂದೂ ವ್ಯಕ್ತಿಯನ್ನ ಮುಸ್ಲಿಂ ಜಾತಿಗೆ ಸೇರಿಸಿದ ಅಧಿಕಾರಿಗಳು
ಪ್ರಮಾಣಪತ್ರ, ಮಹಾಂತಪ್ಪ ಕೊತ್ಲೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 27, 2025 | 10:39 AM

Share

ಕಲಬುರಗಿ, ಜುಲೈ 27: ಕೆಲ ಸಂದರ್ಭಗಳಲ್ಲಿ ಪ್ರಮಾಣಪತ್ರದಲ್ಲಿ ಹೆಸರು, ವಿಳಾಸ ಅಥವಾ ಫೋಟೋ ಬದಲಾವಣೆ ಆಗಿರುವುದನ್ನು ನಾವು ನೋಡಿದ್ದೇವೆ. ಆದರೆ ಕಲಬುರಗಿಯಲ್ಲಿ (Kalaburagi) ವಿಚಿತ್ರ ಘಟನೆ ನಡೆದಿದೆ. ತಹಶೀಲ್ದಾರ್​ ಕಚೇರಿ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ವ್ಯಕ್ತಿಯನ್ನು ಮುಸ್ಲಿಂ (Muslim) ಧರ್ಮಕ್ಕೆ ಸೇರಿಸಿ ಪ್ರಮಾಣಪತ್ರ ವಿತರಣೆ ಮಾಡಲಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲವೆಂದು ಆರೋಪ ಕೇಳಿಬಂದಿದೆ.

ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖ

ಕಲಬುರಗಿಯ ರಾಮತೀರ್ಥನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು ತಮ್ಮ ಪುತ್ರನ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆದು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರಮಾಣ ಪತ್ರದ ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖಿಸಿ ಅಧಿಕಾರಿಗಳು ವಿತರಿಸಿದ್ದಾರೆ.

ಇದನ್ನೂ ಓದಿ: ಜೀವಂತ ವ್ಯಕ್ತಿಯ ನಕಲಿ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ಜಮೀನು ಕಬಳಿಕೆ: ಪತ್ನಿ ಸಮಾಧಿ ಮುಂದೆ ನಿಂತು ಗೋಳಾಡಿದ ರೈತ

ಆದಾಯ ಪ್ರಮಾಣ ಪತ್ರ ಪಡೆದು ನೋಡಿದ ಮಹಾಂತಪ್ಪ ನಿಜಕ್ಕೂ ಶಾಕ್ ಆಗಿದ್ದಾರೆ. ಸದ್ಯ ತಹಶೀಲ್ದಾರ್​ ಕಚೇರಿ ಅಧಿಕಾರಿಗಳು ಎಡವಟ್ಟಿನಿಂದ ಮಹಾಂತಪ್ಪ ಕೊತ್ಲೆ ಪುತ್ರನ ಶಿಕ್ಷಣಕ್ಕೆ ತೊಂದರೆ ಉಂಟಾಗಿದ್ದು, ಕುಟುಂಬ ಕಂಗಾಲಾಗಿದೆ.

ಜನರ ಪಾಲಿಗೆ ಜೀವಂತ: ದಾಖಲೆಗಳಲ್ಲಿ ಮರಣ

ಇನ್ನು ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಇಂತಹದ್ದೆ ಒಂದು ಘಟನೆ ನಡೆದಿತ್ತು. ಓರ್ವ ವ್ಯಕ್ತಿ ಸಮಾಜದಲ್ಲಿ ಇನ್ನೂ ಜೀವಂತವಾಗಿದ್ದಾರೆ. ಆದರೆ ಸರ್ಕಾರದ ದಾಖಲೆಯಲ್ಲಿ ಈಗಾಗಲೇ ಮರಣ ಹೊಂದಿದ್ದಾರೆ. ಅಷ್ಟು ಮಾತ್ರವಲ್ಲದೇ ಅವರು ಅಸುನೀಗಿದ್ದಾರೆ ಅಂತ ಹೇಳಿ ಅವರ ಮಕ್ಕಳ ಬದಲಾಗಿ ಇನ್ನಾರದ್ದೋ ಮಕ್ಕಳಿಗೆ  ಜಮೀನನ್ನು ಕಂದಾಯ ಇಲಾಖೆ ಖಾತೆ ಮಾಡಿಕೊಟ್ಟಿತ್ತು. ಈ ಎಡವಟ್ಟಿನ ವಿರುದ್ಧ ವ್ಯಕ್ತಿಯ ಕುಟುಂಬ ಮತ್ತು ಊರಿನವರು ನಾಡ ಕಚೇರಿಗೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 am, Sun, 27 July 25

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್