ಕಲಬುರಗಿ: ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು
ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಇನ್ನೊಂದೆಡೆ ಮೈಸೂರು ಮಿನಿ ವಿಧಾನಸೌಧದ ಹಿಂಭಾಗದ ಅನಧಿಕೃತ ಕಟ್ಟಡಗಳ ತೆರವಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಅಮಾನತು ಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್‌ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್‌ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು
ಮೈಸೂರು:ಮೈಸೂರು ಮಿನಿ ವಿಧಾನಸೌಧದ ಹಿಂಭಾಗದ ಅನಧಿಕೃತ ಕಟ್ಟಡಗಳ ತೆರವಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಅವರು ಆದೇಶಿಸಿದ್ದಾರೆ. ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಜೆಸಿಬಿಗಳ ಮೂಲಕ ಅಕ್ರಮ ಕಟ್ಟಡ ತೆರವು ಮಾಡಲಾಗುತ್ತಿದೆ. ಈ ವೇಳೆ ಕೆಲವರಿಂದ ವಿರೋಧ ನೋಟಿಸ್ ನೀಡಿಲ್ಲವೆಂದು ಕ್ಯಾತೆ ತೆಗೆದಿದ್ದು, ಯಾವುದಕ್ಕೂ ಕೇರ್ ಮಾಡದೆ ಅನಧಿಕೃತ ಕಟ್ಟಡ ನೆಲಸಮ ಮಾಡಲಾಗುತ್ತಿದೆ. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.
ಇದನ್ನೂ ಓದಿ:ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು
ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್ ಬೆನಿಟೊ ಅಮಾನತು
ಕೋಲಾರ: ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್ ಬೆನಿಟೊ ಅವರನ್ನು ಅಮಾನತು ಮಾಡಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ಬಂಟಿ ಶಿಲ್ಲಕೆ ಆದೇಶಿಸಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ ಆರು ತಾಲೂಕುಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಲಿಲ್ಲ, ಯುವ ಸಮಯದಾಯ ಸಂಘಟಿಸುವಲ್ಲಿ ವಿಫಲ, ಈ ಹಿನ್ನಲೆ ಫ್ರಾನ್ಸಿಸ್ ಬೆನಿಟೊ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:43 am, Sun, 18 February 24