ಕಲಬುರಗಿಯಲ್ಲಿ ಅಸ್ಪಶ್ಯತೆ ಇನ್ನೂ ಜೀವಂತ? ದಲಿತರು ಎನ್ನುವ ಕಾರಣಕ್ಕೆ ಕಟಿಂಗ್ ನಿರಾಕರಣೆ

ಸೂಫಿ-ಸಂತರ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಆಚರಣೆಯಲ್ಲಿದೆಯಾ ಎಂಬ ಅನುಮಾನುಗಳಿಗೆ ಇದೊಂದು ಘಟನೆ ಸಾಕ್ಷಿಯಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತರು ಎನ್ನುವ ಕಾರಣಕ್ಕೆ ಮಕ್ಕಳಿಗೆ ಕಟ್ಟಿಂಗ್​ ಮಾಡಲು ನಿರಾಕರಿಸಿರುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಎಫ್​ಐಆರ್​ ಕೂಡ ದಾಖಲಾಗಿದೆ.

ಕಲಬುರಗಿಯಲ್ಲಿ ಅಸ್ಪಶ್ಯತೆ ಇನ್ನೂ ಜೀವಂತ? ದಲಿತರು ಎನ್ನುವ ಕಾರಣಕ್ಕೆ ಕಟಿಂಗ್ ನಿರಾಕರಣೆ
ಸಲೂನ್
Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2025 | 3:03 PM

ಕಲಬುರಗಿ, ಜೂನ್​ 30: ಜಿಲ್ಲೆಯ ಆಳಂದ (Aland) ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತ ಸಮುದಾಯದ ಶಾಲಾ ಮಕ್ಕಳಿಗೆ ಕ್ಷೌರ (haircut) ಮಾಡಲು ನಿರಾಕರಿಸಿದ ಅಮಾನವೀಯ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ. ಜೂ.27ರಂದು ಕಿಣ್ಣಿ ಸುಲ್ತಾನ್ ಗ್ರಾಮದ ಶಾಲಾ ಮಕ್ಕಳು ಕ್ಷೌರ ಮಾಡಿಸಲು ಗ್ರಾಮದ ಕ್ಷೌರ ಅಂಗಡಿಗೆ ಹೋಗಿದ್ದಾರೆ. ಈ ವೇಳೆ ಕ್ಷೌರಿಕ ‘ದಲಿತ ಮಕ್ಕಳಿಗೆ ಕ್ಷೌರ ಮಾಡುವುದಿಲ್ಲ. ನೀವು ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ’ ಎಂದು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಅನೇಕ ವರ್ಷಗಳಿಂದ ಕ್ಷೌರ ಮಾಡಲು ಹಿಂದೇಟು

ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕ್ಷೌರ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ, ದಲಿತ ಸಮುದಾಯದ ಜನರು 10 ಕಿಮೀ ದೂರದ ಆಳಂದ ಪಟ್ಟಣ ಅಥವಾ ತಡಕಲ್ ಗ್ರಾಮಗಳಿಗೆ ತೆರಳಿ ಕ್ಷೌರ ಮಾಡಿಕೊಂಡು ಬರುತ್ತಿದ್ದೇವೆ. ಗ್ರಾಮದಲ್ಲಿ ಮೇಲ್ಜಾತಿಯವರ ಪ್ರಭಾವದಿಂದ ನಮಗೆ ಕ್ಷೌರ ಮಾಡಲು ನಿರಾಕರಿಸುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ತಾಲೂಕು ಮತ್ತು ಜಿಲ್ಲೆಯ ಅಧಿಕಾರಿಗಳು ನಮ್ಮ ಗ್ರಾಮದ ಅಸ್ಪೃಶ್ಯತೆ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥ ಮಲ್ಲಿಕಾರ್ಜುನ್ ಶೃಂಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಇದನ್ನೂ ಓದಿ
ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರಿಂದ ಭಾರಿ ಮಳೆ
ಕಾಂಗ್ರೆಸ್ ಗೊಂದಲ, ಬಿಕ್ಕಟ್ಟು ಶಮನಕ್ಕೆ ಇಂದು ಬೆಂಗಳೂರಿಗೆ ಸುರ್ಜೇವಾಲ
ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಐಶ್ವರ್ಯಾ ಮಹಾದೇವ್ ನೂತನ ಮುಖ್ಯಸ್ಥೆ
ಬೆಳಗಾವಿಯಲ್ಲಿ ಗೋ ರಕ್ಷಕರನ್ನು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ

ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ 125 ದಲಿತ ಸಮುದಾಯದ ಮನೆಗಳಿದ್ದು, ಅನೇಕ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ. ಈವರೆಗೆ ಜಾತಿ ನೋಡಿಕೊಂಡು ನಮ್ಮ ಮಕ್ಕಳಿಗೆ ಗ್ರಾಮದಲ್ಲಿರುವ 3 ಸಲೂನ್‌ನವರು ಕಟಿಂಗ್ ಮಾಡಲು ನಿರಾಕರಿಸುತ್ತಿದ್ದಾರೆ ಎಂದು ಗ್ರಾಮಸ್ಥೆ ಚಂದ್ರಕಲಾ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ಕ್ಷೌರಿಕನೊಂದಿಗೆ ದಲಿತ ಮುಖಂಡರೊಬ್ಬರು ಮಾತನಾಡಿದ್ದು, ಶಿಕ್ಷಕರು ಕ್ಷೌರ ಮಾಡಿಕೊಂಡು ಬರಬೇಕು ಎಂದು ಹೇಳಿದ್ದಾರೆ. ಹಾಗಾಗಿ, ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಮಕ್ಕಳಿಗೆ ಏಕೆ ಕ್ಷೌರ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ‘ನಮ್ಮ ಹಿರಿಯರು ಹೊಲೆಯ ಮಾದಿಗರಿಗೆ ಕ್ಷೌರ ಮಾಡಿಲ್ಲ, ನಾವು ಕೂಡ ನಿಮಗೆ ಕ್ಷೌರ ಮಾಡುವುದಿಲ್ಲ’ ಎಂದು ಕ್ಷೌರಿಕ ಹೇಳಿರುವುದಾಗಿ ದೂರಿದರು.

ಪೊಲೀಸರ ಸೂಚನೆ ಬೆನ್ನಲ್ಲೇ ಕಟಿಂಗ್ ಮಾಡಿದ ಕ್ಷೌರಿಕ

ಘಟನಾ ಸ್ಥಳಕ್ಕೆ ಶುಕ್ರವಾರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ದಲಿತ ಸಮುದಾಯದವರಿಗೆ ಕಟಿಂಗ್​ ಮಾಡಲು ತಿಳಿಸಿದ್ದರು. ಅವರ ಸೂಚನೆಯನ್ನೂ ಧಿಕ್ಕರಿಸಿದ ಕ್ಷೌರಿಕ ಕ್ಷೌರ ಮಾಡಲು ಮೊದಲಿಗೆ ನಿರಾಕರಿಸಿದರು. ಈ ರೀತಿ ವರ್ತಿಸಿದರೆ ಪ್ರಕರಣ ದಾಖಲಿಸಬೇಕಾಗುತ್ತೆ ಎಂದು ಪೊಲೀಸ ಎಚ್ಚರಿಗೆ ಮೇರೆಗೆ ಕಟಿಂಗ್​ ಮಾಡಲು ಒಪ್ಪಿಕೊಂಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಕನಸ್ಸಿನಲ್ಲಿ ಕಾಡಿದ ಆಂಜನೇಯ್ಯ: ಕ್ರಿಶ್ಚಿಯನ್ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಘರ್ ವಾಪಸಿ ಮಾಡಿದ ಕುಟುಂಬ

ಘಟನೆಯ ಬಗ್ಗೆ ದಲಿತ ಸಮುದಾಯದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಸಲೂನ್ ಮಾಲೀಕ ಪ್ರೇಮನಾಥ ಶಿಂಧೆ ಎಂಬುವರ ಮೇಲೆ ಅಟ್ರಾಸಿಟಿ ಕಾಯ್ದೆಯಡಿ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ಹೋಳ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:01 pm, Mon, 30 June 25