AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ಭದ್ರತಾ ವ್ಯವಸ್ಥೆಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಜೈಲು ಆವರಣದ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಯ ನೆರವಿನಿಂದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.

ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್
ಕಲಬುರಗಿ ಜೈಲಿನಿಂದ ಪರಾರಿಯಾಗಿರುವ ಸಜಾ ಕೈದಿಗಳುImage Credit source: tv9
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 14, 2026 | 11:22 AM

Share

ಮುಖ್ಯಾಂಶಗಳು

  • ಮೂವರು ಸಜಾ ಕೈದಿಗಳ ಪರಾರಿ
  • ಜೈಲು ಭದ್ರತೆ ಕುರಿತು ಹೆಚ್ಚಿದ ಪ್ರಶ್ನೆಗಳು
  • ಪೊಲೀಸ್ ತಂಡದಿಂದ ತೀವ್ರ ಶೋಧ

ಕಲಬುರಗಿ, ಜುಲೈ 14: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದು, ಈ ಘಟನೆ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಜೈಲಿನ ಸುಮಾರು 15 ರಿಂದ 20 ಅಡಿ ಎತ್ತರದ ಕಾಂಪೌಂಡ್ ಗೋಡೆ ಹಾರಿ ಕೈದಿಗಳು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಹಾಗೂ ಸಾಗರ್ ಎಂದು ಗುರುತಿಸಲಾಗಿದೆ. ಇವರು ಬೀದರ್ ಜಿಲ್ಲೆಯ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕೈದಿಗಳ ಕರೆದೊಯ್ಯಲು ಮೊದಲೇ ಸಿದ್ಧವಾಗಿತ್ತೇ ಕಾರು?

ಪ್ರಾಥಮಿಕ ಮಾಹಿತಿಯ ಪ್ರಕಾರ, ಕೈದಿಗಳು ಬ್ಯಾರಕ್‌ನ ಕಬ್ಬಿಣದ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಯನ್ನು ಬಳಸಿಕೊಂಡು ಕಾಂಪೌಂಡ್ ಗೋಡೆ ದಾಟಿದ್ದಾರೆ ಎನ್ನಲಾಗಿದೆ. ಅಲ್ಲದೆ, ಜೈಲಿನ ಹೊರಭಾಗದಲ್ಲಿ ಕಾರೊಂದು ಮೊದಲೇ ಸಿದ್ಧವಾಗಿದ್ದು, ಅದರಲ್ಲಿ ಪರಾರಿಯಾಗಿರುವ ಶಂಕೆಯೂ ವ್ಯಕ್ತವಾಗಿದೆ.

ಜೈಲು ಭದ್ರತೆ ಬಗ್ಗೆ ಅನುಮಾನ

ಈ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೈದಿಗಳು ಹಲವು ದಿನಗಳಿಂದಲೇ ಯೋಜನೆ ರೂಪಿಸಿ ಪರಾರಿಯಾಗಿದ್ದಾರೆಯೇ? ಜೈಲಿನೊಳಗೆ ಇಷ್ಟೊಂದು ಸಿದ್ಧತೆ ನಡೆದರೂ ಸಿಬ್ಬಂದಿಗೆ ಮಾಹಿತಿ ಇರಲಿಲ್ಲವೇ? ಅಥವಾ ಭದ್ರತಾ ಲೋಪ ಸಂಭವಿಸಿದ್ದೇ? ಎಂಬ ಅನುಮಾನಗಳು ಮೂಡಿವೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಜೈಲಿಗೆ ಭೇಟಿ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ನೇತೃತ್ವದ ತಂಡ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜೈಲಿನ ವಿವಿಧ ಬ್ಯಾರಕ್‌ಗಳು, ಕಾಂಪೌಂಡ್ ಗೋಡೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಪರಾರಿಯಾದ ಕೈದಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ.

ಪ್ರಿಯಾಂಕ್ ಖರ್ಗೆ ಇರಾನ್-ಅಮೆರಿಕ ಯುದ್ಧದಲ್ಲಿ ಬ್ಯುಸಿ: ವಿಜಯೇಂದ್ರ ವ್ಯಂಗ್ಯ

ಈ ಘಟನೆ ಸದ್ಯ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಕಲಬುರಗಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ‘ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಇರಾನ್-ಅಮೆರಿಕ ಯುದ್ಧದಲ್ಲಿ ವ್ಯಸ್ತರಾಗಿದ್ದಾರೆ. ಅದನ್ನು ಮುಗಿಸಿ ಇಲ್ಲಿಗೆ ಬರುತ್ತಾರೆ’ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!

ಗಮನಾರ್ಹ ಸಂಗತಿಯೆಂದರೆ, ಇತ್ತೀಚೆಗಷ್ಟೇ ಜುಲೈ 3ರಂದು ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಕೈಕೋಳವನ್ನು ಬಿಚ್ಚಿಕೊಂಡು ಪರಾರಿಯಾಗಿದ್ದ ಘಟನೆ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಕಾರಾಗೃಹದಿಂದಲೇ ಮೂವರು ಶಿಕ್ಷಿತ ಕೈದಿಗಳು ತಪ್ಪಿಸಿಕೊಂಡಿರುವುದು ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಸದ್ಯ ಪರಾರಿಯಾದ ಕೈದಿಗಳ ಬಂಧನಕ್ಕೆ ಪೊಲೀಸರು ರಾಜ್ಯದ ವಿವಿಧ ಭಾಗಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!