AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ‌ ಸದ್ದು: ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನ

Kalaburagi News: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಆತ್ಮರಕ್ಷಣೆಗಾಗಿ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರು ಕೈದಿಗಳಿಗಾಗಿ ಶೋಧ ಮುಂದುವರಿದಿದೆ.

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ‌ ಸದ್ದು: ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನ
ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನImage Credit source: tv9
ದತ್ತಾತ್ರೇಯ ಪಾಟೀಲ್​
| Edited By: |

Updated on:Jul 15, 2026 | 7:10 AM

Share

ಮುಖ್ಯಾಂಶಗಳು

  • ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ
  • ಹಲ್ಲೆಗೆ ಯತ್ನಿಸಿದಾಗ ಪೊಲೀಸ್ ಫೈರಿಂಗ್
  • ಇಬ್ಬರು ಕೈದಿಗಳಿಗಾಗಿ ಮುಂದುವರಿದ ಶೋಧ

ಕಲಬುರಗಿ, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೂ ಗಾಯಗಳಾಗಿದ್ದು, ಗಾಯಾಳು ಕೈದಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ತಡರಾತ್ರಿ ಕಲಬುರಗಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದ ಸಜಾ ಕೈದಿಗಳಾದ ಸಂತೋಷ್, ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ

ಶೋಧ ಕಾರ್ಯಾಚರಣೆ ವೇಳೆ ಕಲಬುರಗಿಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಆರೋಪಿ ಸಂತೋಷ್ ಇರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ಪೊಲೀಸರು ತೆರಳಿದಾಗ, ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಹಾಗೂ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಗಾಯ

ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕೈದಿ ಸಂತೋಷ್‌ನನ್ನೂ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದರು.

ವಿಡಿಯೋ ನೋಡಿ

ಮಂಗಳವಾರ ನಡೆದ ಕೈದಿಗಳ ಪರಾರಿ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸುಮಾರು 15ರಿಂದ 20 ಅಡಿ ಎತ್ತರದ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ, ಟವೆಲ್ ಮತ್ತು ಹಾಸಿಗೆಗಳನ್ನು ಬಳಸಿ ಮೂವರು ಕೈದಿಗಳು ಪರಾರಿಯಾಗಿದ್ದರು. ಬಳಿಕ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿತ್ತು.

ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್

ಇದೀಗ ಪರಾರಿಯಾಗಿದ್ದ ಮೂವರ ಪೈಕಿ ಸಂತೋಷ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಉಳಿದ ಇಬ್ಬರು ಕೈದಿಗಳಾದ ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 am, Wed, 15 July 26

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ