ಕಲಬುರಗಿ: 3 ತಿಂಗಳಿನಿಂದ ಸಂಬಳ ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಡೆತ್ ನೋಟ್ನಲ್ಲಿ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆಯೊಂದು ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಚಿಕ್ಕಮಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಕಲಬುರಗಿ, ಅಕ್ಟೋಬರ್ 13: ಕಳೆದ ಮೂರು ತಿಂಗಳನಿಂದ ಸಂಬಳ (salary) ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ. ಭಾಗ್ಯವಂತಿ (40) ಆತ್ಮಹತ್ಯೆ ಮಾಡಿಕೊಂಡ ಗ್ರಂಥಪಾಲಕಿ. ಸ್ಥಳಕ್ಕೆ ಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಡೆತ್ ನೋಟ್ನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು
ಮಳಖೇಡ ಗ್ರಾಮ ಪಂಚಾಯತಿ ಆವರಣದಲ್ಲಿರುವ ಅರಿವು ಕೇಂದ್ರದಲ್ಲಿ ಭಾಗ್ಯವಂತಿ ಗ್ರಂಥಪಾಲಕಿಯಾಗಿ ಕೆಲಸ ಮಾಡುತ್ತಿದ್ದರು. ಕಳೆದ ಮೂರು ತಿಂಗಳನಿಂದ ಭಾಗ್ಯವಂತಿ ಅವರಿಗೆ ಸಂಬಳ ನೀಡಿರಲಿಲ್ಲ. ಹೀಗಾಗಿ ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಪ್ಪನ ಸಾವಿನ ನೋವಿನಿಂದ ಹೊರಬಾರದ ಮಗಳು ಆತ್ಮಹತ್ಯೆಗೆ ಶರಣು
ತಂದೆಯ ಸಾವಿನಿಂದ ಮನನೊಂದ ಮಗಳು ತಂದೆಯಂತೆ ಆತ್ಮಹತ್ಯೆ ಮಾಡಿಕೊಂಡು ಸಾವಿನ ಮನೆ ಸೇರಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಮಗಳು.
ಇದನ್ನೂ ಓದಿ: ಹಾಸನ: ಕೈಕೊಟ್ಟ ಯುವತಿ; ಮದುವೆಯಾದರೆ ನಿನ್ನನ್ನೇ ಎಂದು ಕನಸು ಕಂಡಿದ್ದ ಪ್ರೇಮಿಯ ಹತ್ಯೆ!
ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ, ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ವರ್ಣ, ಕಾಲೇಜಿನ ಹಾಸ್ಟೆಲ್ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಗೌರಿಬಿದನೂರಿನ ಮನೆಗೆ ಬಂದಿದ್ದ ಸ್ವರ್ಣಳನ್ನು ಆಕೆಯ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ: ಮದುವೆಯಾದ 5 ತಿಂಗಳಿಗೇ ವಿಚ್ಛೇದನಕ್ಕೆ ಸಿದ್ಧತೆ: ಕೆರಳಿದ ಗಂಡನಿಂದ ಪತ್ನಿಯ ಕೊಚ್ಚಿ ಕೊಲೆ
ಚಿಕಿತ್ಸೆ ಫಲಕಾರಿಯಾಗದೆ ಮಗಳು ಸ್ವರ್ಣ ಸಾವನ್ನಪ್ಪಿದ್ದಾರೆ. ಇನ್ನೂ ಈಕೆಯ ತಂದೆ ಕಳೆದ 3 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು ಎನ್ನಲಾಗಿದೆ. ತಂದೆಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿ ಖಿನ್ನತೆಗೆ ಒಳಗಾಗಿದ್ದ ಸ್ವರ್ಣ, ಸೂಸೈಡ್ ಮಾಡಿಕೊಂಡು ಈಗ ತಂದೆಯ ಹಾದಿ ಹಿಡಿದಿದ್ದಾಳೆ. ಒಂದು ಕಡೆ ಗಂಡ, ಮತ್ತೊಂದೆಡೆ ಮಗಳು ಆತ್ಮಹತ್ಯೆ ಹಾದಿ ಹಿಡಿದಿದ್ದು ನೋಡಿ ತಾಯಿಗೆ ದಿಕ್ಕು ತೋಚದಂತಾಗಿದೆ.
ವರದಕ್ಷಿಣೆ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಸಾವು
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಶಿಡ್ಲಘಟ್ಟ ತಾಲೂಕಿನ ರಾಮಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಶಿರಿಷಾ.ಎಂ. (21) ಮೃತ ಗೃಹಿಣಿ. ಶ್ರೀನಾಥ್ ಹಾಗೂ ಶಿರಿಷಾ.ಎಂ. ಪ್ರೀತಿಸಿ ಮದುವೆಯಾಗಿದ್ದರು. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:49 pm, Mon, 13 October 25



