AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.8ರಂದು ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ: ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ

ಈಗಾಗಲೇ ಹೈಕೋರ್ಟ್ ವಿಭಾಗೀಯ ಪೀಠ ಶಿವರಾತ್ರಿ ದಿನದಂದು 2 ಸಮುದಾಯಕ್ಕೂ ಪೂಜೆ ಹಾಗೂ ಪ್ರಾರ್ಥನೆ ಮಾಡಲು ಅವಕಾಶ ನೀಡಿರುವ ಹಿನ್ನಲೆ ಕಲಬುರಗಿ ಜಿಲ್ಲೆಯ ಆಳಂದ (Aland) ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

ಮಾ.8ರಂದು ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ: ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ
ಲಾಡ್ಲೇ ಮಶಾಕ್ ದರ್ಗಾವಿವಾದ; ಆಳಂದ ತಾಲೂಕಿನಲ್ಲಿ ಮದ್ಯ ನಿಷೇಧ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 07, 2024 | 10:45 PM

Share

ಕಲಬುರಗಿ, ಮಾ.07: ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ನಾಳೆ(ಮಾ.08) ಮಹಾ ಪೂಜೆ ಹಿನ್ನೆಲೆ ಕಲಬುರಗಿ ಜಿಲ್ಲೆಯ ಆಳಂದ (Aland) ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಾ.7ರ ರಾತ್ರಿ 11‌ರಿಂದ ಮಾ.9ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ. ಈಗಾಗಲೇ ಹೈಕೋರ್ಟ್ ವಿಭಾಗೀಯ ಪೀಠ 2 ಸಮುದಾಯಕ್ಕೂ ಪೂಜೆ ಹಾಗೂ ಪ್ರಾರ್ಥನೆ ಮಾಡಲು ಅವಕಾಶ ನೀಡಿರುವ ಹಿನ್ನಲೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

2 ಸಮುದಾಯದ ಪೂಜೆ, ಪ್ರಾರ್ಥನೆಗೆ ಅವಕಾಶ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ

ಆಳಂದ ತಾಲೂಕಿನ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಶಿವಲಿಂಗ ಪೂಜೆ ಮಾಡಲು ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್​ ಅವಕಾಶ ನೀಡಿದ್ದು, ಶಿವರಾತ್ರಿಯ ದಿನ ಮಧ್ಯಾಹ್ನದ ನಂತರ ಪೂಜೆಗೆ 15 ಜನ ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್‌ ಪೀಠ ಅವಕಾಶ ನೀಡಿದೆ. ಇದರ ಜೊತೆಯಲ್ಲಿ ಮುಸ್ಲಿಂ ಸಮುದಾಯದ 15 ಜನರಿಗೂ ಪ್ರಾರ್ಥನೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಆದ್ರೆ, ನ್ಯಾಯಾಲಯಲಕ್ಕೆ ಪೂಜೆ ಸಲ್ಲಿಸುವವರ ಪಟ್ಟಿ ಸಲ್ಲಿಸಿದ ಬಳಿಕವೇ ಅನುಮತಿ ಎಂದು ಷರತ್ತು ಹಾಕಿದೆ.

ಇದನ್ನೂ ಓದಿ:ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಹಿಂದೂಗಳಿಗೆ ಪೂಜೆ ಸಲ್ಲಿಸಲು ಸಿಕ್ತು ಅವಕಾಶ

ಪೂಜೆ ವಿಚಾರಕ್ಕೆ ಹಿಂದೂ ಮುಸ್ಲಿಂ ನಡುವೆ ಹಗ್ಗಜಗ್ಗಾಟ

ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಶಿವಲಿಂಗದ ಮೇಲೆ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿದ್ದನ್ನು ಖಂಡಿಸಿ, ಅಲ್ಲಿಂದ ಈ ದರ್ಗಾದಲ್ಲಿ ಪೂಜೆ ವಿಚಾರಕ್ಕೆ ಹಿಂದೂ ಮುಸ್ಲಿಂ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು