ಕಲಬುರಗಿ, ಮಾ.07: ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ನಾಳೆ(ಮಾ.08) ಮಹಾ ಪೂಜೆ ಹಿನ್ನೆಲೆ ಕಲಬುರಗಿ ಜಿಲ್ಲೆಯ ಆಳಂದ (Aland) ತಾಲೂಕಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಾ.7ರ ರಾತ್ರಿ 11ರಿಂದ ಮಾ.9ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ. ಈಗಾಗಲೇ ಹೈಕೋರ್ಟ್ ವಿಭಾಗೀಯ ಪೀಠ 2 ಸಮುದಾಯಕ್ಕೂ ಪೂಜೆ ಹಾಗೂ ಪ್ರಾರ್ಥನೆ ಮಾಡಲು ಅವಕಾಶ ನೀಡಿರುವ ಹಿನ್ನಲೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಆಳಂದ ತಾಲೂಕಿನ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಶಿವಲಿಂಗ ಪೂಜೆ ಮಾಡಲು ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್ ಅವಕಾಶ ನೀಡಿದ್ದು, ಶಿವರಾತ್ರಿಯ ದಿನ ಮಧ್ಯಾಹ್ನದ ನಂತರ ಪೂಜೆಗೆ 15 ಜನ ಹಿಂದೂಗಳಿಗೆ ಕಲಬುರಗಿ ಹೈಕೋರ್ಟ್ ಪೀಠ ಅವಕಾಶ ನೀಡಿದೆ. ಇದರ ಜೊತೆಯಲ್ಲಿ ಮುಸ್ಲಿಂ ಸಮುದಾಯದ 15 ಜನರಿಗೂ ಪ್ರಾರ್ಥನೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ಆದ್ರೆ, ನ್ಯಾಯಾಲಯಲಕ್ಕೆ ಪೂಜೆ ಸಲ್ಲಿಸುವವರ ಪಟ್ಟಿ ಸಲ್ಲಿಸಿದ ಬಳಿಕವೇ ಅನುಮತಿ ಎಂದು ಷರತ್ತು ಹಾಕಿದೆ.
ಇದನ್ನೂ ಓದಿ:ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಹಿಂದೂಗಳಿಗೆ ಪೂಜೆ ಸಲ್ಲಿಸಲು ಸಿಕ್ತು ಅವಕಾಶ
ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಶಿವಲಿಂಗದ ಮೇಲೆ ಅನ್ಯ ಕೋಮಿನ ಕೆಲವರು ಮಲಮೂತ್ರ ವಿಸರ್ಜನೆ ಮಾಡಿದ್ದರು. ಇದು ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿದ್ದನ್ನು ಖಂಡಿಸಿ, ಅಲ್ಲಿಂದ ಈ ದರ್ಗಾದಲ್ಲಿ ಪೂಜೆ ವಿಚಾರಕ್ಕೆ ಹಿಂದೂ ಮುಸ್ಲಿಂ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ