ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

| Updated By: Ganapathi Sharma

Updated on: May 10, 2024 | 1:31 PM

ಕಲಬುರಗಿಯಲ್ಲಿ ರಾಜಕೀಯ ವೈಷಮ್ಯದ ಮತ್ತೊಂದು ಕೊಲೆ ವರದಿಯಾಗಿದೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ವ್ಯಕ್ತಿ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಮೀನಿನಲ್ಲಿ ಪಾರ್ಟಿ ಮಾಡಲೆಂದು ಕರೆದೊಯ್ದು ಹಲ್ಲೆ ಮಾಡಿದ ಮತ್ತೊಂದು ಪ್ರಕರಣ ಇದಾಗಿದೆ.

ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ
ಜಾವೀದ್ ಚಿನ್ನಮಳ್ಳಿ
Follow us on

ಕಲಬುರಗಿ, ಮೇ 10: ಕಲಬುರಗಿಯಲ್ಲಿ (Kalaburagi) ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ (Congress) ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ (Murder) ಮಾಡಿದ ಬಗ್ಗೆ ವರದಿಯಾಗಿದೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ.

ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯಲ್ಲಿ ಅಂಬೇಡ್ಕರ್ ಜಯಂತಿ ವೇಳೆ ಅಶೋಕ್ ಎಂಬ ವ್ಯಕ್ತಿಯನ್ನು ಬರಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ನಂತರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಇದಕ್ಕೂ ಕೆಲವು ಸಮಯ ಹಿಂದೆ ಕಲಬುರಗಿಯ ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಗಿರೀಶ್ ಚಕ್ರ ಎಂಬವರನ್ನು ಪಾರ್ಟಿ ಮಾಡುವ ನೆಪದಲ್ಲಿ ಕರೆದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಬಿಎಸ್​ಎನ್​ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಅವರನ್ನು ಹತ್ಯೆ ಮಾಡಲಾಗಿತ್ತು.

ರವಿಕುಮಾರ್ (45) ಎಂಬವರನ್ನು ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿತ್ತು.

ಇದನ್ನೂ ಓದಿ: ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಯುವಕನ ಹತ್ಯೆ ಪ್ರಕರಣ! ಮೂವರು ಆರೋಪಿಗಳ ಬಂಧನ

ಸಚಿವ ಪ್ರಿಯಾಂಕ್ ಖರ್ಗೆ ತವರೂರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಹಲ್ಲೆ, ಕೊಲೆ ಮತ್ತಿತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಈಗಾಗಲೇ ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಅಪರಾಧ ಕೃತಿಗಳು ಮುಂದುವರಿದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Fri, 10 May 24