ಕಲಬುರಗಿ ಮಹಾನಗರ ಪಾಲಿಕೆ ರಿಸಲ್ಟ್ ಅತಂತ್ರ: ಹೆಚ್​ಡಿ ದೇವೇಗೌಡರ ಜೊತೆ ಮೈತ್ರಿ ಮಾಡಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅಖಾಡಕ್ಕೆ?

ಕಲಬುರಗಿ ಪಾಲಿಕೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಲೆಕ್ಕಾಚಾರ ಶುರು ಮಾಡಿಕೊಂಡಿದೆ. ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿ ಮೈತ್ರಿ ಕುದುರಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸುತ್ತಿದ್ದಾರೆ. ಹಾಗಾದ್ರೆ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮೈತ್ರಿ ಮಾಡಿಸ್ತಾರಾ ಮಲ್ಲಿಕಾರ್ಜುನ ಖರ್ಗೆ? ಎಂಬ ಪ್ರಶ್ನೆ ಎದ್ದಿದೆ.

ಕಲಬುರಗಿ ಮಹಾನಗರ ಪಾಲಿಕೆ ರಿಸಲ್ಟ್ ಅತಂತ್ರ: ಹೆಚ್​ಡಿ ದೇವೇಗೌಡರ ಜೊತೆ ಮೈತ್ರಿ ಮಾಡಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅಖಾಡಕ್ಕೆ?
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ಆಯೇಷಾ ಬಾನು

Updated on:Sep 07, 2021 | 12:28 PM

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಮಹಾನಗರ ಪಾಲಿಕೆಗೆ ಸೆಪ್ಟೆಂಬರ್ 3ರಂದು ಜಿದ್ದಾಜಿದ್ದಿನ ಫೈಟ್ ನಡೆದಿತ್ತು. ಈ ಪ್ರತಿಷ್ಠೆ ಫೈಟ್ನಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ ನಡೆದಿದ್ದು, ಅತಂತ್ರ ಫಲಿತಾಂಶ ಹೊರಬಿದ್ದಿದೆ. ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದ್ರೆ ಜೆಡಿಎಸ್ ಅಚ್ಚರಿಯ ಸಾಧನೆಯಿಂದ ಕಿಂಗ್ಮೇಕರ್ ಆಗಿ ಹೊರಹೊಮ್ಮಿದೆ. ಕಲಬುರಗಿ ಮಹಾನಗರ ಪಾಲಿಕೆ ರಿಸಲ್ಟ್ ಅತಂತ್ರ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡುತ್ತಿದ್ದು ಮೈತ್ರಿ ಅಖಾಡಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ? ಇಳಿಯುವ ಸಾಧ್ಯತೆ ಹೆಚ್ಚಿದೆ.

ಕಲಬುರಗಿ ಪಾಲಿಕೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಲೆಕ್ಕಾಚಾರ ಶುರು ಮಾಡಿಕೊಂಡಿದೆ. ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿ ಮೈತ್ರಿ ಕುದುರಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸುತ್ತಿದ್ದಾರೆ. ಹಾಗಾದ್ರೆ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮೈತ್ರಿ ಮಾಡಿಸ್ತಾರಾ ಮಲ್ಲಿಕಾರ್ಜುನ ಖರ್ಗೆ? ಎಂಬ ಪ್ರಶ್ನೆ ಎದ್ದಿದೆ.

ಕಾಂಗ್ರೆಸ್, ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಇನ್ನು ಈ ಸಂಬಂಧ ಕಾಂಗ್ರೆಸ್, ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಲಬುರಗಿಯಲ್ಲಿ JDS ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಹೇಳಿಕೆ ನೀಡಿದ್ದಾರೆ. H.D.ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ. ನಮ್ಮ ನಾಯಕರು ಹೇಳಿದ ಪಕ್ಷಕ್ಕೆ ಬೆಂಬಲ ನೀಡುತ್ತೇವೆ. ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ರು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಅಂದ್ರೆ 27 ವಾರ್ಡ್ಗಳನ್ನು ಗೆದ್ದಿದೆ. ಇನ್ನು ಕಾಂಗ್ರೆಸ್ಗೆ ಫೈಟ್ ಕೊಟ್ಟಿರೋ ಬಿಜೆಪಿ 23 ಸ್ಥಾನಗಳನ್ನು ಗೆದ್ದಿದೆ. ಇತ್ತ ಜೆಡಿಎಸ್ 4 ವಾರ್ಡ್ಗಳನ್ನು ಗೆಲ್ಲೋ ಮೂಲಕ ಹೊಸ ಸಾಧನೆ ಮಾಡಿದೆ. ಇನ್ನು ಒಂದು ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆದ್ರೆ ಕಲಬುರಗಿ ಪಾಲಿಕೆ ಪಟ್ಟವೇರಬೇಕಾದ್ರೆ 32 ಸ್ಥಾನಗಳಲ್ಲಿ ಗೆದ್ದಿರಬೇಕು. ಹೀಗಾಗಿ ಪಾಲಿಕೆ ಸದ್ಯಕ್ಕೆ ಅತಂತ್ರವಾಗಿದೆ.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಅಧಿಕಾರ ಹಿಡಿಯಲು ಜೆಡಿಎಸ್ ಸಹಕಾರ ಕೇಳುತ್ತಿದ್ದೇವೆ: ರವಿಕುಮಾರ್

Published On - 12:01 pm, Tue, 7 September 21