AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ

ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ನೀಟ್ ಪರೀಕ್ಷೆ ನಂತರ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ಪಿಯುಸಿಯಲ್ಲಿ 92% ಅಂಕ ಗಳಿಸಿದ್ದ ಆಕೆ, ಫಲಿತಾಂಶದ ಆತಂಕದಿಂದ ಈ ನಿರ್ಧಾರ ಕೈಗೊಂಡಿರಬಹುದೆಂದು ಶಂಕಿಸಲಾಗಿದೆ. ಪೋಷಕರು ದುಃಖದಲ್ಲಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಇದು ಪರೀಕ್ಷಾ ಒತ್ತಡದ ಗಂಭೀರ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ.

ಮಗಳೇ ಹೋಗಿದ್ದಾಳೆ, ಇನ್ಯಾರ ಮೇಲೆ ದೂರೋಣ!’: ನೀಟ್ ಪರೀಕ್ಷೆಯ ಒತ್ತಡಕ್ಕೆ ಬಲಿಯಾಯ್ತಾ ಮತ್ತೊಂದು ಜೀವ? ಕಣ್ಣೀರಿಟ್ಟ ತಂದೆ
ಭಾಗ್ಯಶ್ರೀ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:May 23, 2026 | 9:47 PM

Share

ಕಲಬುರಗಿ, ಮೇ,23: ವೈದ್ಯಕೀಯ ಶಿಕ್ಷಣದ (Medical Education) ದೊಡ್ಡ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಅತ್ಯಂತ ದಾರುಣ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಮೇ 2ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಬರೆದಿದ್ದ ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ. ಕಲಬುರಗಿ ನಗರದ ಕೋರ್ಟ್ ವೃತ್ತದ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ.

ಮೃತ ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಬಗ್ಗೆ ಅಪಾರ ಆಸಕ್ತಿ ಮತ್ತು ನಿರೀಕ್ಷೆ ಹೊಂದಿದ್ದ ಆಕೆ, ಇತ್ತೀಚೆಗಷ್ಟೇ ನೀಟ್ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪರೀಕ್ಷೆಯ ಫಲಿತಾಂಶದ ಕುರಿತಾದ ಆತಂಕ ಅಥವಾ ಒತ್ತಡವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ನೀಟ್ ಹಗರಣಕ್ಕೆ ಮತ್ತೊಂದು ಬಲಿ; ಪತ್ರಿಕೆ ಸೋರಿಕೆಯಿಂದ ಪರೀಕ್ಷೆ ರದ್ದಾಗಿದ್ದಕ್ಕೆ 22 ವರ್ಷದ ವಿದ್ಯಾರ್ಥಿ ಸಾವು

ಘಟನೆ ಕುರಿತು ಮಾಧ್ಯಮಗಳ ಎದುರು ಕಣ್ಣೀರು ಹಾಕಿದ ಮೃತಳ ತಂದೆ ರಾಜಶೇಖರ್, “ಮಗಳಿಗೂ ನಮಗೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ, ಕುಟುಂಬಸ್ಥರ ಜೊತೆ ಅತ್ಯಂತ ಚೆನ್ನಾಗಿಯೇ ಇದ್ದಳು. ಪಿಯುಸಿಯಲ್ಲಿ 92% ಅಂಕ ಬಂದಿತ್ತು, ಇವಾಗ ಆಕೆಯೇ ನಮ್ಮನ್ನು ಬಿಟ್ಟು ಹೋಗಿದ್ದಾಳೆ. ನಾವು ಯಾರ ಮೇಲೆಯೂ ಆಪಾದನೆ ಮಾಡುವುದಿಲ್ಲ ಮತ್ತು ಯಾರ ಮೇಲೂ ದೂರಲು ಹೋಗುವುದಿಲ್ಲ” ಎಂದು ಭಾವುಕರಾಗಿ ಹೇಳಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Sat, 23 May 26

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್