AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು

ಕಲಬುರಗಿಯ ಜಿಮ್ಸ್ ಆಸ್ಪತ್ರೆಯಿಂದ ನವಜಾತ ಶಿಶುವಿನ ಅಪಹರಣ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಸೂಚನೆ ಮೇರೆಗೆ ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇವಲ 36 ಗಂಟೆಗಳಲ್ಲಿ ಶಿಶುವನ್ನು ಪತ್ತೆ ಮಾಡಿ ಮತ್ತೆ ಅಮ್ಮನ ಮಡಿಲು ಸೇರುವಂತೆ ಮಾಡಿದ್ದಾರೆ.

ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು
ಶಿಶುವನ್ನು ತಾಯಿ ಕಸ್ತೂರಿ ಕೈಗೊಪ್ಪಿಸಿದ ಪೊಲೀಸರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 27, 2024 | 7:50 AM

Share

ಕಲಬುರಗಿ, ನವೆಂಬರ್ 27: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರುವಂತಾಗಿದೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ನಾಲ್ಕು ವಿಶೇಷ ತನಿಖೆ ತಂಡ ರಚನೆ ಮಾಡಲಾಗಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಿದ್ದಾರೆ.

ಬುಧುವಾರ ನಸುಕಿನ ವೇಳೆ ಸ್ವತಃ ಕಮಿಷನರ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಮಗುವನ್ನು ತಾಯಿ ಕಸ್ತೂರಿಯವರಿಗೆ ಒಪ್ಪಿಸಿ ಬಂದಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಬೆಳಗ್ಗೆ ವೈದ್ಯಕೀಯ ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ತಾಯಿಗೆ ಸಾಂತ್ವನ ಹೇಳಿದ್ದರು. ಅಲ್ಲದೆ ಶೀಘ್ರವಾಗಿ ಮಗುವನ್ನು ಪತ್ತೆ ಹಚ್ಚಿ ಮರಳಿಸುವುದಾಗಿ ಅಭಯ ನೀಡಿದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ನಾನಾ ಹಂತಗಳಲ್ಲಿ ತನಿಖೆ, ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದೆ.

ಪ್ರಕರಣದ ಹಿನ್ನೆಲೆ

ಕಸ್ತೂರಿ ಎಂಬವರು ಸೋಮವಾರ (ನ. 25) ನಸುಕಿನ ಜಾವ 4 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಸಂಜೆ ನರ್ಸ್​ ವೇಷದಲ್ಲಿ ಸಂಪೂರ್ಣ ಮುಖ ಮುಚ್ಚಿಕೊಂಡು ಬಂದಿದ್ದ ಇಬ್ಬರು ಮಹಿಳೆಯರು ರಕ್ತ ತಪಾಸಣೆ ಮಾಡಬೇಕು ಮಗು ಕರೆದುಕೊಂಡು ಬನ್ನಿ ಎಂದು ಹೇಳಿದ್ದರು. ಹೀಗಾಗಿ, ಕಸ್ತೂರಿ ಅವರ ಸಂಬಂಧಿ ರಕ್ತ ತಪಾಸಣೆಗಾಗಿ ಮಗುವನ್ನು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆಯರು ಮಗುವನ್ನು ನಮಗೆ ಕೊಡಿ ಎಂದಿದ್ದರು. ನಂತರ, ಮಗುವನ್ನು ಎತ್ತಿಕೊಂಡು ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಕಲಬುರಗಿ ಜಿಮ್ಸ್​ ಆಸ್ಪತ್ರೆಯಲ್ಲಿನ ಗಂಡು ಮಗು ಅಪಹರಣ

ಈ ವಿಷಯ ಗೊತ್ತಾದ ಕೂಡಲೇ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಜಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಗೆ ಸಾಂತ್ವನ ಹೇಳಿದ್ದಲ್ಲದೆ, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದರು. ಅದರಂತೆ, ಮಗು ಈಗ ಅಮ್ಮನ ಮಡಿಲು ಸೇರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್