ಕಲಬುರಗಿ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಗ್ರಾಮದ ಹೊರವಲಯದ ಕಬ್ಬಿನಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. 9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು. ಅತ್ಯಾಚಾರವೆಸಗಿ ಬಾಲಕಿ ಕೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಿಗಾಗಿ ಆಳಂದ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಮೃತ ಬಾಲಕಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಹೈಸ್ಕೂಲ್ಗೆ ಹೋಗಿ ಓದುತ್ತಿದ್ದಳು. ಪರಿಚಿತರಿಂದ ಆಗಿರುವ ಕೃತ್ಯವಾ? ಅಪರಿಚಿತರು ಮಾಡಿರೋದಾ ಅನ್ನೋ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ದುಬಾರಿ ಬೆಲೆಗೆ ಬಾರ್ಗಳಿಗೆ ಕನ್ನಡಾಂಬೆ ಫೋಟೊ ಮಾರಿದ ಅಬಕಾರಿ ಇಲಾಖೆ: ಫೋಟೊಗಳಲ್ಲಿ ಅನ್ಯ ಬಾವುಟ: ವ್ಯಾಪಕ ಆಕ್ರೋಶ
ಕಾಡಾನೆ ಅನುಮಾನಾಸ್ಪದ ಸಾವು
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ವಿ.ಕೋಟ ತಾಲೂಕಿನ ನಾಗರೆಡ್ಡಿಪಲ್ಲಿ ಬಳಿ ಜಮೀನಿನಲ್ಲಿ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ರೈತರೊಬ್ಬರ ವ್ಯವಸಾಯ ಭೂಮಿಯಲ್ಲಿ ಆನೆ ಸಾವನ್ನಪ್ಪಿದ್ದು ರೈತರ ಬೆಳೆ ಹಾನಿ ಮಾಡುತ್ತಿದ್ದರಿಂದ ಆನೆ ಕೊಂದಿರುವ ಅನುಮಾನ ಕೂಡ ವ್ಯಕ್ತವಾಗಿದೆ. ಕಾಡಾನೆ ಮೃತಪಟ್ಟ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:10 am, Wed, 2 November 22