ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್
ಶಾಸಕ ಅಲ್ಲಮಪ್ರಭು ಪಾಟೀಲ್, ಆರೋಪಿ ಸಂಗಮೇಶ
Edited By:

Updated on: Jan 25, 2024 | 10:38 AM

ಕಲಬುರಗಿ, ಜ.25: ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಅಪಮಾನ ಮಾಡಿದ್ದ ಪ್ರಕರಣ‌ ಸಂಬಂಧ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದು ಕಾಂಗ್ರೆಸ್ ಕಾರ್ಯಕರ್ತನಾ? (Congress Worker) ಎಂಬ ಪ್ರಶ್ನೆ ಎದ್ದಿದೆ. ಆರೋಪಿ ಸಂಗಮೇಶ, ಶಾಸಕ ಅಲ್ಲಮಪ್ರಭು ಪಾಟೀಲ್ (Allama Prabhu Patil) ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಡಾ. ಬಿಆರ್ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. 26 ವರ್ಷದ ಕಿರಣ್, 25 ವರ್ಷದ ಹನುಮಂತ, 31 ವರ್ಷದ ಮಾನು ಹಾಗೂ 38 ವರ್ಷದ ಸಂಗಪ್ಪ ಅಲಿಯಾಸ್ ಸಂಗಮೇಶ್ ಸೇರಿದಂತೆ ನಾಲ್ವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪೈಕಿ ಆರೋಪಿ ಸಂಗಮೇಶ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಜೊತೆಗಿನ ಫೋಟೋಗಳು ವೈರಲ್ ಆಗಿವೆ. ಇನ್ನುಳಿದ ಬಂಧಿತ ಆರೋಪಿಗಳಾದ ಹಣಮಂತ, ಕಿರಣ್ ಮತ್ತು ಮಾನು ಸಹ ಕೋಟನೂರ ಗ್ರಾಮಸ್ಥರು. ಆದರೆ ತನ್ನ ಜೊತೆಗೆ ಫೋಟೋ ತೆಗೆಸಿಕೊಂಡ ಆರೋಪಿ ಕೈ ಕಾರ್ಯಕರ್ತ ಅಲ್ಲ ಎಂದು ಶಾಸಕರು ತಿಳಿಸಿದ್ದಾರೆ.

ಚುನಾವಣೆ ವೇಳೆ ಪ್ರಚಾರ, ಓಡಾಡೋ ಫೋಟೋ ಬಳಸಿ ಅಪಪ್ರಚಾರ‌ ಮಾಡಲಾಗುತ್ತಿದೆ. ನನ್ನ ತೆಜೋವಧೆ ಮಾಡುವಂತ ಕೆಲಸ ಮಾಡಲಾಗುತ್ತಿದೆ. ನನ್ನ ಅನುಯಾಯಿ ಅಂತ ಬಿಂಬಿಸೋ ಪ್ರಯತ್ನ ಮಾಡಲಾಗುತ್ತಿದೆ. ಇಂತದೆಕ್ಕೆಲ್ಲಾ ನಾನು ಆಸ್ಪದ ನೀಡೋದಿಲ್ಲ. ನಾನು ಬುದ್ದ, ಬಸವ, ಅಂಬೇಡ್ಕರ್ ಅನುಯಾಯಿ‌‌. ಅಂಬೇಡ್ಕರ್ ಪ್ರತಿಮೆಗೆ ಯಾರೇ ಅಪಮಾನ ಮಾಡಿದ್ರು. ಅವರಿಗೆ ಉಗ್ರವಾದ ಶಿಕ್ಷೆಯಾಗಬೇಕು ಅಂತ ಹೇಳಿದ್ದೇನೆ. ನನ್ನ ಪುತ್ರನೇ ಇಂತಹ ಕೆಲಸ ಮಾಡಿದ್ರು ನಾನು ಸಹಿಸೋದಿಲ್ಲ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ, ಕೋಲಾರದಲ್ಲಿ ಸಿದ್ದರಾಮಯ್ಯನನ್ನು ಸೋಲಿಸಲು ಮಾಹಾ ಪ್ಲಾನ್

ಡಾ ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ ಘಟನೆ ಖಂಡಿಸಿ ನಗರದಲ್ಲಿ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಇನ್ನು ಈ ಘಟನೆ ಸಂಬಂಧ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿರೋ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿವಿ ಠಾಣೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ನಿನ್ನೆ ಕೆಲವೆಡೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲು ತೂರಾಟ ನಡೆಸಿದವರು ಅಂಬೇಡ್ಕರ್ ಅಭಿಮಾನಿಗಳಲ್ಲ ಅಂತಾ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಧರಣಿ ಮಾಡೋಕೆ ಅವಕಾಶವಿದ್ದು, ಅದು ಬಿಟ್ಟು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವುದು ಸರಿಯಲ್ಲವೆಂದಿದ್ದಾರೆ. ಅಂಬೇಡ್ಕರ್‌ರನ್ನ ಅವಮಾನ ಮಾಡಿದ್ದವರನ್ನ ಬಂಧಿಸಲಾಗಿದ್ದು, ಪ್ರತಿಭಟನೆ ವೇಳೆ ಆಸ್ತಿಪಾಸ್ತಿ ಹಾನಿ ಮಾಡಿದವರನ್ನ ಸಹ ಅರೆಸ್ಟ್ ಮಾಡುತ್ತೇವೆಂದು ಹೇಳಿದ್ದಾರೆ. ಇನ್ನೂ ಬಸವಣ್ಣ ಹಾಗೂ ಅಂಬೇಡ್ಕರ್‌ರನ್ನ ಅವಮಾನಿಸೋದು ಮನುವಾದಿಗಳ ಕೆಲಸವೆಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us