ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; 4.1 ರಷ್ಟು ತೀವ್ರತೆ ದಾಖಲು
Kalaburagi News: ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಪದೇ ಪದೆ ಭೂಮಿ ಕಂಪಿಸುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.
ಕಲಬುರಗಿ: ಜಿಲ್ಲೆಯ ಹಲವೆಡೆ ಭೂಮಿ ಮತ್ತೆ ಕಂಪಿಸಿದೆ. ಚಿಂಚೋಳಿ, ಕಾಳಗಿ ತಾಲೂಕಿನಲ್ಲಿ ಲಘು ಭೂಕಂಪನ ಉಂಟಾಗಿದೆ. ಕೋಡ್ಲಿ, ಹೊಡೆಬಿರನಳ್ಳಿ, ಗಡಿಕೇಶ್ವರ, ಹೊಸಳ್ಳಿ ಸೇರಿ, 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಪದೇ ಪದೆ ಭೂಮಿ ಕಂಪಿಸುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಾಗಿದೆ.
ಜಿಲ್ಲೆಯ ಹಲವೆಡೆ ನಿನ್ನೆ ಭೂಕಂಪನವಾಗಿತ್ತು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ಹಲಚೇರಾ, ತೇಗಲತಿಪ್ಪಿ, ಬೆನಕನಳ್ಳಿ, ಭೂತನೂರ, ಹೊಸಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು. ಪದೇ ಪದೇ ಭೂಮಿ ಕಂಪಿಸುತ್ತಿದ್ದರು ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ಸಿಟ್ಟಿಗೆದ್ದ ಗ್ರಾಮಸ್ಥರು ಇಂದು (ಅಕ್ಟೋಬರ್ 11) ಹೋರಾಟಕ್ಕೆ ಮುಂದಾಗಿದ್ದರು.
ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ. ನಮಗೆ ನಿಖರವಾದ ಮಾಹಿತಿ ಯಾರು ಹೇಳುವುದಿಲ್ಲ. ಅಪಾಯದ ಮುನ್ಸೂಚನೆ ಇದ್ದರೆ ಗ್ರಾಮಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ ಎಂದು ಭೀತಿಗೊಳಗಾದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಅಕ್ಟೋಬರ್ 9 ರಂದು ಕೂಡ ಭೂಮಿ ಕಂಪಿಸಿದೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಅಕ್ಟೋಬರ್ 9ರಂದು ಕೂಡ ಲಘು ಭೂಕಂಪದ ಅನುಭವವಾಗಿತ್ತು. ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿತ್ತು. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದರು.
ಇದನ್ನೂ ಓದಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲು
ಇದನ್ನೂ ಓದಿ: ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು
Published On - 10:53 pm, Mon, 11 October 21