AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಹೈಕೋರ್ಟ್

ಸುಕ್ಷೇತ್ರ ನರೋಣಾ ಗ್ರಾಮದಿಂದ ಆಳಂದ್ ಪಟ್ಟಣದ ಮಶಾಕ್ ದರ್ಗಾದವರೆಗೆ ಹಮ್ಮಿಕೊಂಡಿರುವ ರಥಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಸದ್ಯ ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಕಲಬುರಗಿ: ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದ ಹೈಕೋರ್ಟ್
ಕಳೆದ ವರ್ಷ ನಡೆದ ಗಲಾಟೆ ದೃಶ್ಯಗಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 03, 2024 | 1:53 PM

Share

ಕಲಬುರಗಿ, ಮಾರ್ಚ್.03: ರಾಘವ ಚೈತನ್ಯ ರಥಯಾತ್ರೆಗೆ (Raghava Chaitanya Rath Yatra) ಷರತ್ತು ಬದ್ಧ ಅನುಮತಿ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದೆ. ಶಿವರಾತ್ರಿಯಂದು (Shivratri) ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿ ನಡೆಯಲಿರುವ ರಥಯಾತ್ರೆಗೆ ಅನುಮತಿ ಕೋರಿ ಹಿಂದೂ ಮುಖಂಡರು ಅರ್ಜಿ ಸಲ್ಲಿಸಿದ್ದರು. ಸದ್ಯ ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ರಥಯಾತ್ರೆ ವೇಳೆ ಡಿಜೆ, ಟ್ರಾಫಿಕ್ ನಿಯಮ ಉಲ್ಲಂಘಿಸುವಂತಿಲ್ಲ. ಅನ್ಯ ಸಮುದಾಯದ ವಿರುದ್ಧ ಯಾರೂ ಘೋಷಣೆ‌ ಕೂಗುವಂತಿಲ್ಲ. ವಿವಾದಿತ ಸ್ಥಳದ ಕಡೆ ರಾಘವ ಚೈತನ್ಯ ರಥಯಾತ್ರೆ ಹೋಗುವಂತಿಲ್ಲ. ಸೂರ್ಯಾಸ್ತದ ನಂತರ ರಥಯಾತ್ರೆ ಮಾಡದಂತೆ ಕೋರ್ಟ್​​ ಷರತ್ತು ಬದ್ಧ ಅನುಮತಿ ನೀಡಿದೆ. ಕಳೆದ ಬಾರಿ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ದಿನ ಗಲಾಟೆ ನಡೆದಿತ್ತು.ಶಿವಲಿಂಗ ಪೂಜೆಗೆ ತೆರಳಿದ ಸಮಯದಲ್ಲಿ ದೊಡ್ಡ ಗಲಾಟೆಯಾಗಿತ್ತು. ಹೀಗಾಗಿ ಈ ಬಾರಿ ಈ ಅನಾಹುತ ತಡೆಯಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ರಾಘವ ಚೈತನ್ಯ ಶಿವಲಿಂಗ ದೇವಸ್ಥಾನಕ್ಕೆ ಶಿವರಾತ್ರಿಯಂದು ಅಡಿಗಲ್ಲು: ಪ್ರಮೋದ್ ಮುತಾಲಿಕ್</a

ಕಲಬುರಗಿ ಜಿಲ್ಲೆಯ ಆಳಂದ್ ಪಟ್ಟಣದ ಪ್ರಸಿದ್ಧ ಸೂಫಿ ಸಂತ್ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ಇದೆ. ಇಲ್ಲಿನ ಶಿವಲಿಂಗದ ಪೂಜೆಗಾಗಿ ಹಮ್ಮಿಕೊಂಡಿರುವ ರಥಯಾತ್ರೆಗೆ ಇಲ್ಲಿನ ಉಚ್ಛ ನ್ಯಾಯಾಲಯವು ಷರತ್ತು ಬದ್ಧ ಅನುಮತಿ ನೀಡಿದೆ. ಸುಕ್ಷೇತ್ರ ನರೋಣಾ ಗ್ರಾಮದಿಂದ ಆಳಂದ್ ಪಟ್ಟಣದ ಮಶಾಕ್ ದರ್ಗಾದವರೆಗೆ ಹಮ್ಮಿಕೊಂಡಿರುವ ರಥಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಆಳಂದ್ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷನಂದ್ ಗುತ್ತೇದಾರ್, ಹಿಂದೂ ಜಾಗರಣ ವೇದಿಕೆಯ ನಾಗೇಂದ್ರ ಕಬಾಡೆ ಹಾಗೂ ಎಸ್.ಎ. ಪಾಟೀಲ್ ಅವರನ್ನು ಒಳಗೊಂಡು ಮೂವರು ಅರ್ಜಿದಾರರು ಸ್ಥಳೀಯ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಲಯ ಪೀಠವು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ರಥಯಾತ್ರೆ ನಡೆಸಲು ಪ್ರಮುಖ ಐದು ಶರತ್ತುಗಳನ್ನು ವಿಧಿಸಿ ಅವಕಾಶ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:16 am, Sun, 3 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್