ಕಲಬುರಗಿ: ಒಂದು ದಿನದ ಹಸುಗೂಸು ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬದ ಆಕ್ರೋಶ

| Updated By: ಆಯೇಷಾ ಬಾನು

Updated on: Feb 24, 2023 | 11:02 AM

ನೌಶಾದ್ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದ್ರೆ ಕಳೆದ ರಾತ್ರಿ ನವಜಾತ ಶಿಶು ಮೃತಪಟ್ಟಿದೆ. ಇದಕ್ಕೆ ಅಫಜಲಪುರ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಕುಟುಂಬದವರು ಆರೋಪಿಸಿದ್ದಾರೆ.

ಕಲಬುರಗಿ: ಒಂದು ದಿನದ ಹಸುಗೂಸು ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬದ ಆಕ್ರೋಶ
ಸಾಂದರ್ಭಿಕ ಚಿತ್ರ
Follow us on

ಕಲಬುರಗಿ: ವೈದ್ಯೋ ನಾರಾಯಣ ಹರಿ ಅಂತಾರೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಒಂದು ದಿನದ ಹಸುಗೂಸು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಅಫಜಲಪುರ ಪಟ್ಟಣದ ನಿವಾಸಿಯಾಗಿದ್ದ ನೌಶಾದ್ ಎಂಬ ಮಹಿಳೆ, ಹೆರಿಗೆಗಾಗಿ ಇದೇ ಪೆಬ್ರವರಿ 22 ರಂದು ಅಫಜಲಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಳು.

ಅಂದೇ ನೌಶಾದ್ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದ್ರೆ ಕಳೆದ ರಾತ್ರಿ ನವಜಾತ ಶಿಶು ಮೃತಪಟ್ಟಿದೆ. ಇದಕ್ಕೆ ಅಫಜಲಪುರ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಅಂತ ಕುಟುಂಬದವರು ಆರೋಪಿಸಿದ್ದಾರೆ. ಕಳೆದ ರಾತ್ರಿ ಮಗುವಿನ ಬಿಪಿಯಲ್ಲಿ ತುಸು ವ್ಯತ್ಯಾಸ ಕಂಡುಬಂದಿದೆ. ಜೊತೆಗೆ ಮಗು ತಾಯಿಯ ಹಾಲು ಕುಡಿಯುತ್ತಿರಲಿಲ್ಲವಂತೆ. ಆಗ ಕುಟುಂಬದವರು ವೈದ್ಯರನ್ನು ಸಂಪರ್ಕಿಸುವ ಕೆಲಸ ಮಾಡಿದ್ದಾರೆ. ಆದ್ರೆ ನೈಟ್ ಶಿಫ್ಟ್​ನಲ್ಲಿ ವೈದ್ಯರು ಇಲ್ಲದೇ ಇದ್ದಿದ್ದರಿಂದ ಮಗುವಿಗೆ ಚಿಕಿತ್ಸೆ ಸಿಗದೇ ಮೃತಪಟ್ಟಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಇನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಖಂಡಿಸಿ ಕುಟುಂಬದವರು ಮತ್ತು ಸಾರ್ವಜನಿಕರು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡಾ ವೈದ್ಯರ ನಿರ್ಲಕ್ಷ್ಯಕ್ಕೆ ಅನೇಕರ ಜೀವ ಹೋಗಿವೆ. ಆದ್ರು ಕೂಡ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರು ಸಿಗ್ತಾಯಿಲ್ಲಾ ಅಂತ ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:02 am, Fri, 24 February 23