Kalaburagi News: ಆಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ, ಅತ್ಯಾಚಾರ (Rape Convict) ಎಸಗಿದ್ದ ವ್ಯಕ್ತಿಗೆ, ಕಲಬುರಗಿ ಜಿಲ್ಲಾ ಅಪರ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ ಇಪ್ಪತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ, ನ್ಯಾಯಾಧೀಶರಾದ ಯಮನಪ್ಪ ಬಮ್ಮಣಗಿ ಅವರು, ಸಾಕ್ಷ್ಯಾಧಾರಗಳು ಸಾಭಿತಾದ ಹಿನ್ನೆಲೆಯಲ್ಲಿ, ಐಪಿಸಿ ಸೆಕ್ಷನ್ 4,6,8,12, ಪೋಕ್ಸೋ ಕಾಯ್ದೆಯಡಿ ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆರೋಪಿಗೆ ಇಪ್ಪತ್ತೈದು ಸಾವಿರ ದಂಡ ವಿಧಿಸಿದ್ದಾರೆ.
ಘಟನೆ ವಿವರ
ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 17, 2022 ರಂದು, ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಬಂದಿದ್ದ ಆರೋಪಿ, ಮನೆಯಲ್ಲಿ ನಾನು ನಿನ್ನ ಪ್ರೀತಿಸುತ್ತೇನೆ ಅಂತ ಹೇಳಿದ್ದ. ಆಗ ಬಾಲಕಿ, ನಾನು ಇನ್ನೂ ಅಪ್ರಾಪ್ತಳಿದ್ದೇನೆ, ಪ್ರೀತಿ, ಮದುವೆ ಮಾತು ಮಾತನಾಡಬೇಡಿ ಅಂತ ಹೇಳಿದ್ದಳಂತೆ. ಆದೆ ದುಷ್ಕರ್ಮಿ, ಕೋಣೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಬಾಲಕಿ ಮತ್ತು ಕುಟುಂಬದವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯದೀಶರು ಆರೋಪಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ್ ತುಪ್ಪದ ಅವರು ವಾದ ಮಂಡಿಸಿದ್ದು, ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದಾರೆ.
ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರಕ್ಕೆ ಆದೇಶ
ಇನ್ನು ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರವನ್ನು ಕಾನೂನು ಪ್ರಾಧಿಕಾರ ವತಿಯಿಂದ ನೀಡಬೇಕು ಅಂತ ನ್ಯಾಯಧೀಶರು ಆದೇಶ ನೀಡಿದ್ದಾರೆ. ತೀರ್ಪು ಪ್ರಕಟವಾದ ದಿನದಿಂದ ಒಂದು ತಿಂಗಳೊಳಗೆ ನೊಂದ ಬಾಲಕಿಗೆ ಪರಿಹಾರ ಮೊತ್ತವನ್ನು ನೀಡಬೇಕು ಅಂತ ಆದೇಶದಲ್ಲಿ ತಿಳಿಸಿದ್ದಾರೆ.