ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ

Kalaburagi News: ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ
ವಿದ್ಯಾರ್ಥಿನಿ ಮಹಂತಮ್ಮ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Nov 16, 2023 | 10:59 PM

ಕಲಬುರಗಿ, ನವೆಂಬರ್​​ 16: ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ (Student) ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ದುರ್ಘಟನೆ ಸಂಭವಿಸಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಬಾಲಕಿ. ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಾಳೆ. ಮಧ್ಯಾಹ್ನ 1.30 ಕ್ಕೆ ಊಟದ ಸಮಯದಲ್ಲಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ.

ಇದನ್ನೂ ಓದಿ: ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

ಸಾಂಬಾರ್ ಪಾತ್ರೆಗೆ ಬಿದ್ದ ಪರಿಣಾಮ ಬಾಲಕಿ ಮಹಾಂತಮ್ಮ ಗಂಭೀರ ಗಾಯಗೊಂಡಿದ್ದು, ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಿಸಿಯೂಟ ಸಿಬ್ಬಂದಿ ನಿರ್ಲಕ್ಷದಿಂದಲೇ ದುರ್ಘಟನೆ ಸಂಭವಿಸಿದ್ದು, ಸಿಬ್ಬಂದಿಯ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಎರಡನೇ ತರಗತಿ ಓದುತ್ತಿದ್ದ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆರೋಪ ಮಾಡುತ್ತಿದ್ದಾರೆ. ಇನ್ನೂ ಶಾಲೆಯಲ್ಲಿ ಅಡುಗೆ ಕೋಣೆ ಕಡೆ ಯಾರೊಬ್ಬ ಮಕ್ಕಳನ್ನ ಬಿಡಬಾರದು.

ಇದನ್ನೂ ಓದಿ: ವಿದ್ಯಾಕಾಶಿ ಧಾರವಾಡದಲ್ಲಿ ಈಗ ಹಾಸ್ಟೆಲ್ ಸಮಸ್ಯೆ: ಬಾಡಿಗೆ ಕಟ್ಟಡಗಳ ಮೊರೆಹೋದ ಜಿಲ್ಲಾಡಳಿತ

ಮಕ್ಕಳು ಅಡುಗೆ ಕೋಣೆಯತ್ತ ಬರದಂತೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ಆದರೆ ಇಲ್ಲಿ ಮಾತ್ರ ಇಬ್ಬರ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿ ಆಯಾ ತಪ್ಪಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದು, ತೀವ್ರ ತರದ ಸುಟ್ಟ ಗಾಯಗಳೊಂದಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ.

ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿಯೋರ್ವಳು ಸಾಂಬಾರ್ ಪಾತ್ರೆಗೆ ಬಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಂಡು ಮುಂದೆ ಇಂತಹ ಅನಾಹುತ ಸಂಭವಿಸದಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ