ಕಲಬುರಗಿ: ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

| Updated By: ಆಯೇಷಾ ಬಾನು

Updated on: May 11, 2024 | 9:24 AM

ಆತ್ಮಹತ್ಯೆ ಮಾಡಿಕೊಂಡ ಯುವತಿ ಪುಷ್ಪಾ ಹಾಗೂ ಯುವಕ ಕಿರಣ್ ನಾಲ್ಕು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಅನ್ಯ ಜಾತಿ ಎಂಬ ಕಾರಣಕ್ಕೆ ಯುವಕನ ಮನೆಯಲ್ಲಿ ಇವರ ಪ್ರೀತಿಯನ್ನು ಒಪ್ಪಿರಲಿಲ್ಲ, ಹೀಗಾಗಿ ಯುವಕ ಕೂಡ ಮದುವೆ ಈಗಲೇ ಬೇಡ ಎಂದು ಹೇಳಿದ್ದು ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ: ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು
ಪುಷ್ಪಾ, ಕಿರಣ್
Follow us on

ಕಲಬುರಗಿ, ಮೇ.11: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ (ಮೇ.10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

UPSC ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಪುಷ್ಪಾ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್​ಗೆ ಮದುವೆ ಮಾಡಿಕೋ ಎಂದು ಒತ್ತಾಯ ಮಾಡ್ತಿದ್ದರು. ಆದರೆ ಪುಷ್ಪಾ ಹಾಗೂ ಕಿರಣ್​ಗೆ ಜಾತಿ ವಿಚಾರ ಅಡ್ಡ ಬಂದಿತ್ತು. ಅನ್ಯ ಜಾತಿ ಹಿನ್ನೆಲೆ ಯುವತಿ ಮದುವೆಗೆ ಕಿರಣ್ ಮನೆಯವರು ನಿರಾಕರಿಸಿದ್ದರು. ಹೀಗಾಗಿ ಕಿರಣ್ ಕೂಡ ಈಗಲೇ ಮದುವೆ ಬೇಡವೆಂದು ಪುಷ್ಪಾಗೆ ಸಮಾಧಾನ ಮಾಡಿದ್ದ. ಆದರೆ ಇದರಿಂದ ಮನನೊಂದ ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊಡಗು: SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಹಳೇ ದ್ವೇಷಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ದೊಡ್ಡಬಳ್ಳಾಪುರ ಹೊರವಲಯದ ನವೋದಯ ಶಾಲೆ ಬಳಿ ಭೀಕರ ಘಟನೆಯೊಂದು ನಡೆದಿದೆ. ಹಳೇ ದ್ವೇಷಕ್ಕೆ ಯುವಕರ ಗುಂಪೊಂದು ಹುಸ್ಕೂರು ನಿವಾಸಿ ಹೇಮಂತ್ ಗೌಡ (27) ಮೇಲೆ  ಅಟ್ಯಾಕ್ ಮಾಡಿ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ತಡರಾತ್ರಿ ಹೇಮಂತ್​ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳು ಕುತ್ತಿಗೆ ಎದೆಗೆ ಚಾಕುವಿನಿಂದ ಇರಿದಿದ್ದಾರೆ. 10 ಕ್ಕೂ ಹೆಚ್ಚು ಯುವಕರು ಅಟ್ಯಾಕ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಾಕಿಂಗ್ ಮಾಡುವ ವೇಳೆ ಹೆದ್ದಾರಿ ಬದಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಹ್ಯಾರಿಸ್(35) ಎಂಬುವವರು ಮೃತಪಟ್ಟಿದ್ದಾರೆ. ಕ್ರಿಕೆಟ್​ ಆಟದ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಸಾವು ಸಂಭವಿಸಿದೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:22 am, Sat, 11 May 24