ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ವಿಚಾರ: ಸಚಿವ ನಿರಾಣಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಆಕ್ರೋಶ

TV9kannada Web Team

TV9kannada Web Team | Edited By: Rashmi Kallakatta

Updated on: Jan 26, 2023 | 2:12 PM

ಟಿಕೆಟ್ ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಸ್ವತಃ ಸಚಿವ ಮುರುಗೇಶ್ ನಿರಾಣಿಗೆ ಬೀಳಗಿ ಟಿಕೆಟ್ ಕನ್ಪರ್ಮ್ ಇಲ್ಲ. ಸಚಿವ ಮುರುಗೇಶ್ ನಿರಾಣಿ ತಮ್ಮ ಇತಿಮಿತಿಯಲ್ಲಿ ಮಾತನಾಡಲಿ ಎಂದ ಮಾಲೀಕಯ್ಯ ಗುತ್ತೇದಾರ್

ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ವಿಚಾರ: ಸಚಿವ ನಿರಾಣಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಆಕ್ರೋಶ
ಮುರುಗೇಶ್ ನಿರಾಣಿ

ಕಲಬುರಗಿ: ಕಲಬುರಗಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ವಿಚಾರದಲ್ಲಿ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿರುದ್ಧ ಸ್ವಪಕ್ಷದ ನಾಯಕರಿಂದಲೇ ಆಕ್ರೋಶ ವ್ಯಕ್ತವಾಗಿದೆ. ನಿರಾಣಿ ಅವರು ಚಂದು ಪಾಟೀಲ್​​ಗೆ ಟಿಕೆಟ್ ಘೋಷಣೆ ಮಾಡಿದ್ದಕ್ಕೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ (Malikayya Guttedar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಸ್ವತಃ ಸಚಿವ ಮುರುಗೇಶ್ ನಿರಾಣಿಗೆ ಬೀಳಗಿ ಟಿಕೆಟ್ ಕನ್ಪರ್ಮ್ ಇಲ್ಲ. ಸಚಿವ ಮುರುಗೇಶ್ ನಿರಾಣಿ ತಮ್ಮ ಇತಿಮಿತಿಯಲ್ಲಿ ಮಾತನಾಡಲಿ. ಕಲಬುರಗಿ ಉತ್ತರ ಕ್ಷೇತ್ರಕ್ಕೆ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳು ಇದ್ದಾರೆ.ಹೀಗಿರುವಾಗ ಸಚಿವ ನಿರಾಣಿ ಅಭ್ಯರ್ಥಿ ಹೆಸರು ಹೇಳಿದ್ದು ಸರಿಯಲ್ಲ. ಈ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.

ಚಂದು ಪಾಟೀಲ್ ಅವರಿಗೆ ಟಿಕೆಟ್ ನೀಡ್ತೇವೆ ಎಂದಿದ್ದ ನಿರಾಣಿ

ಬುಧವಾರ ಕಲಬುರಗಿ ನಗರದ ಕಾರ್ಯಕ್ರಮದಲ್ಲಿ ಸ್ಥಳೀಯ ಸುದ್ದಿವಾಹಿನಿ ಜತೆ ಮಾತನಾಡಿದ್ದ ನಿರಾಣಿ, ಚಂದು ಪಾಟೀಲ್ ಅವರಿಗೆ ಟಿಕೆಟ್ ನೀಡ್ತೇವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಲೀಕಯ್ಯ ಗುತ್ತೇದಾರ್ ಟಿಕೆಟ್ ಘೋಷಣೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಹೀಗಿರುವಾಗ ಅವರ ಒಬ್ಬರ ಹೆಸರು ಹೇಳಿದ್ದು ಸರಿಯಲ್ಲ, ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾಡಿದ್ದು ಸರ್ಕಾರದ ಕೆಲಸಕ್ಕೆ.ಪಕ್ಷದ ಕೆಲಸಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಾಡಿಲ್ಲ ಎಂದಿದ್ದಾರೆ.

ತಾಜಾ ಸುದ್ದಿ

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada