ಪ್ರಿಯಾಂಕ್ ಖರ್ಗೆ ಹಿಟ್ ಆ್ಯಂಡ್ ರನ್‌ ಮಾಸ್ಟರ್: ಕಲಬುರಗಿ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ ಬಳಿಕ ಚಕ್ರವರ್ತಿ ಸೂಲಿಬೆಲೆ ಕಿಡಿ

ಚಕ್ರವರ್ತಿ ಸೂಲಿಬೆಲೆ ಅವರ ಕಲಬುರಗಿ ಪ್ರವೇಶಕ್ಕೆ ಬುಧವಾರ ತಡರಾತ್ರಿ ಪೊಲೀಸರು ತಡೆಯೊಡ್ಡಿದ್ದಾರೆ. ಇದರಿಂದ ಕೆರಳಿರುವ ಯುವ ಬ್ರಿಗೇಡ್ ಸಂಸ್ಥಾಪಕ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಹಾಗೂ ರಾಯಚೂರಿನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪರಿಗಣಿಸಿ ಸೂಲಿಬೆಲೆ ಅವರ ಜಿಲ್ಲೆ ಪ್ರವೇಶಕ್ಕೆ ಕಲಬುರಗಿ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಪ್ರಿಯಾಂಕ್ ಖರ್ಗೆ ಹಿಟ್ ಆ್ಯಂಡ್ ರನ್‌ ಮಾಸ್ಟರ್: ಕಲಬುರಗಿ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ ಬಳಿಕ ಚಕ್ರವರ್ತಿ ಸೂಲಿಬೆಲೆ ಕಿಡಿ
ಚಕ್ರವರ್ತಿ ಸೂಲಿಬೆಲೆ & ಪ್ರಿಯಾಂಕ್ ಖರ್ಗೆ
Follow us
| Updated By: ಗಣಪತಿ ಶರ್ಮ

Updated on:Feb 29, 2024 | 9:09 AM

ಕಲಬುರಗಿ, ಫೆಬ್ರವರಿ 29: ಕಲಬುರಗಿ (Kalaburagi) ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ ನಡೆದ ನಾಟಕೀಯ ಪ್ರಹಸನದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅವರನ್ನು ಪೊಲೀಸರು ತಡೆದಿದ್ದಾರೆ. ಬೀದರ್​​ನಿಂದ (Bidar) ಹೊರಟಿದ್ದ ಸೂಲಿಬೆಲೆಯನ್ನು ಮಧ್ಯರಾತ್ರಿ 1 ಗಂಟೆಗೆ ತಡೆದ ಪೊಲೀಸರು ವಾಪಾಸ್ ಕಳುಹಿಸಿದ್ದಾರೆ. ಮತ್ತೊಂದೆಡೆ, ಕಲಬುರಗಿ ಪ್ರವೇಶಿಸಲು ಪೊಲೀಸರು ಅನುಮತಿ ನಿರಾಕರಿಸಿದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಚಕ್ರವರ್ತಿ ಸೂಲಿಬೆಲೆ, ಅವರೊಬ್ಬ ಹಿಟ್ ಆ್ಯಂಡ್ ರನ್ ಮಾಸ್ಟರ್ ಎಂದು ಲೇವಡಿ ಮಾಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬೀದರ್ ಜಿಲ್ಲೆಯ ಬಾಲ್ಕಿಯಿಂದ ಕಲಬುರಗಿಗೆ ತೆರಳುತ್ತಿದ್ದರು. ಇಂದು (ಗುರುವಾರ) ಕಲಬುರಗಿಯ ಚಿತ್ತಾಪುರದ ಬಾಪೂ ರಾವ್ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ನಡೆಯಬೇಕಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಪ್ರಯಾಣಿಸುತ್ತಿದ್ದರು. ಪ್ರಧಾನಿ‌ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆ ಆಡಳಿತದ ಬಗ್ಗೆ ನಡೆಯಬೇಕಿದ್ದ ಕಾರ್ಯಕ್ರಮ ಇದಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಅನುಮತಿ‌ ನಿರಾಕರಣೆ ಮಾಡಲಾಗಿದೆ. ಚಿತ್ತಾಪುರ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ನಿರಾಕರಿಸಲಾಗಿದೆ. ಏಕಾಏಕಿ ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಂದ ಅನುಮತಿ‌ ನಿರಾಕರಣೆ ಮಾಡಲಾಗಿದೆ.

ಇದೇ ತಿಂಗಳು 8 ನೇ ತಾರೀಕಿನಂದು ಚಿಕ್ಕಮಗಳೂರು ಹಾಗೂ ಜನವರಿ 18 ರಂದು ರಾಯಚೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಾಕಾರಿಯಾಗಿ ವೈಯಕ್ತಿಕ ನಿಂದನೆ ಮಾಡಿದ ಆರೋಪ ಮತ್ತು ದೂರನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ತೆರಿಗೆದಾರರನ್ನು ಹೊಗಳಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್; ಕಾರಣ ಏನು?

ಈ ಮಧ್ಯೆ, ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲೆಗೆ ಪ್ರವೇಶ ನಿರ್ಭಂಧ ವಿಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದಾರೆ. ಚಕ್ರವರ್ತಿ ಸೂಲಿಬಲೆ ಪ್ರಚೋದನಾಕಾರಿ ಭಾಷಣದಿಂದ ಶಾಂತಿ ಧಕ್ಕೆ ಬರುವ ಸಾಧ್ಯತೆ ಎನ್ನುವ ಕಾರಣಕ್ಕೆ ಪ್ರವೇಶ ನಿರ್ಭಂಧ ಹೇರಲಾಗಿದೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಜಿಲ್ಲೆಯೊಳಗೆ ಆಗಮಿಸಲು ಪೊಲೀಸರು ಬಿಡಲಿಲ್ಲ. ಅವರನ್ನು ಮರಳಿ ಬೀದರ್ ಕಡೆಗೆ ಪೊಲೀಸರು ಕಳುಹಿಸಿದ್ದಾರೆ. ಇದೇ ವೇಳೆ, ಪೊಲೀಸರು ಮತ್ತು ಸೂಲಿಬಲೆ ಚಕ್ರವರ್ತಿ ನಡುವೆ ತೀವ್ರ ವಾಗ್ವಾದ ನಡೆಯಿತು.

ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ

ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಿಯಾಂಕ್ ಖರ್ಗೆ ಫೈಟರ್ ಅಂತ ತಿಳಿದಿದ್ದೆ. ಆದರೆ, ಈ ರೀತಿ ನನ್ನನ್ನು ಜಿಲ್ಲೆಯೊಳಗೆ ಬರದಂತೆ ತಡೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಚಿವ ಪ್ರಿಯಾಂಕ್ ಖರ್ಗೆ ಹಿಟ್ ಆ್ಯಂಡ್ ರನ್‌ ಮಾಸ್ಟರ್ ಎಂದು ಸೂಲಿಬೆಲೆ ಲೇವಡಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:08 am, Thu, 29 February 24