AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ ಪೊಲೀಸ್ ಕಮಿಷನರೇಟ್​ಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಆ ಮೂಲಕ ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿನ ಸುಧಾರಣೆಗಳನ್ನ ಎತ್ತಿಹಿಡಿದಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಇಳಿಮುಖವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಸಿಬ್ಬಂದಿಗಳನ್ನು ಅಭಿನಂದಿಸಿ, ಇನ್ನಷ್ಟು ಜನಸ್ನೇಹಿಯಾಗುವಂತೆ ಪ್ರೇರೇಪಿಸಿದರು.

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಪೊಲೀಸ್ ಕಮಿಷನರ್​​ಗೆ ಪ್ರಶಸ್ತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jan 12, 2026 | 9:33 PM

Share

ಕಲಬುರಗಿ, ಜನವರಿ 12: ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಕಲಬುರಗಿ (Kalaburagi) ನಗರ ಪೊಲೀಸ್ ಕಮಿಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO 9001: 2015 ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರು ಮತ್ತಷ್ಟು ಜನಸ್ನೇಹಿಯಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಅವರಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪೊಲೀಸ್ ಆಯುಕ್ತಾಲಯಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸಿಕ್ಕಿದೆ. ಆದರೆ ಜನರಿಂದ ಹೊಗಳಿಕೆಯ ಪ್ರಶಸ್ತಿ ಪಡೆಯುವಲ್ಲಿ ಪೊಲೀಸರು ಮತ್ತಷ್ಟು ಜನಸ್ನೇಹಿ ಆದಾಗ ಮಾತ್ರ ಪೊಲೀಸರಿಗೆ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು.

ಇದನ್ನೂ ಓದಿ: ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ

ಜಿಲ್ಲೆಯಲ್ಲಿ ಕ್ರೈಂನಲ್ಲಿ ಸಾಕಷ್ಟು ಇಳಿಮುಖವಾಗಿದೆ. ಎಸ್ಸಿ-ಎಸ್.ಟಿ ಸಂಬಂಧಿಸಿದ ಕೇಸ್, ಸಾಮಾನ್ಯ ಅಪರಾಧ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಿವೆ. ಚೈನ್ ಕಳ್ಳತನಗಳು ಕೂಡಾ ಕಡಿಮೆಯಾಗಿವೆ ಎಂದ ಸಚಿವರು ಡ್ರಗ್ಸ್​​ಗೆ ಸಂಬಂಧಿಸಿದಂತೆ ಕೇಸ್​ಗಳು ಏರಿಕೆ ಆಗಿವೆ. ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟ ಚಟುವಟಿಕೆಯ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಡ್ರಗ್ಸ್​ಗೆ ಸಂಬಂಧಿಸಿದ ಕೇಸ್​ಗಳು ಹೆಚ್ಚಳವಾಗಿವೆ. ಡ್ರಗ್ಸ್ ವಿರುದ್ದದ‌ ಮತ್ತಷ್ಟು ಕಠಿಣ ಕ್ರಮವಹಿಸಬೇಕಾಗಿದೆ ಎಂದರು.

ಸಕಾಲ, ಅಟಲ್‌ ಜನಸ್ನೇಹಿ ಕೇಂದ್ರದಿಂದ ಸಾರ್ವಜನಿಕ ಸೇವೆ ವಿಲೇವಾರಿಯಲ್ಲಿ ರಾಜ್ಯಕ್ಕೆ ಕಲಬುರಗಿ ಮೊದಲ ಸ್ಥಾನ, ಜಿಲ್ಲಾ ಪಂಚಾಯತನಲ್ಲಿ ತೆರಿಗೆ ವಸೂಲಾತಿಯಲ್ಲಿ ಕಲಬುರಗಿ ಜಿಲ್ಲೆ 13ನೇ ಸ್ಥಾನ ಪಡೆದಿದೆ. ಈಗ ಪೊಲೀಸ್ ಕಮಿಷನರೇಟ್ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುವುದು ಅತ್ಯಂತ ಖಷಿಯ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಿಷ್ಟು 

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಲಶ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಕಲಬುರಗಿ ಪೊಲೀಸ್ ಕಮಿಷನರೇಟ್ ತನ್ನ ಅಮೂಲಾಗ್ರ ಬದಲಾವಣೆ, ಸಾರ್ವಜನಿಕರ ಸೇವೆ ವಿಸ್ತರಣೆ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ: ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಮಾತನಾಡಿ, ಸಾರ್ವಜನಿಕರ ಸೇವೆಗಳಲ್ಲಿ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದ ಹಿನ್ನೆಲೆಯಲ್ಲಿ ಐ.ಎಸ್.ಓ-9001 2021 ಪ್ರಶಸ್ತಿಯನ್ನು ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ನೀಡಲಾಗಿದೆ. ಸಾರ್ವಜನಿಕರ ಫೈಲ್​ಗಳು‌ ತ್ವರಿತವಾಗಿ ವಿಲೇವಾರಿಯಾಗುತ್ತಿವೆ. ಸಿಬ್ಬಂದಿಗಳ ರಜೆ,‌ ವೈದ್ಯಕೀಯ ಸೇವೆ, ವಿವಿಧ ವಿಭಾಗಗಳಲ್ಲಿ ಗಣನೀಯ ಬದಲಾವಣೆಯಾಗಿವೆ. ಕಮಿಷನರೇಟ್ ಅಡಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ ಕಂಡಿದೆ. ಸಾರ್ವಜನಿಕ ಸೇವೆ ಮುಖ್ಯವಾಗಿ ಪಾಸ್ ಪೋರ್ಟ್ ವೆರಿಫಿಕೇಶನ್​ನಲ್ಲಿ ಸುಧಾರಣೆ ತರಲಾಗಿದೆ. ಒಂದು ವಾರದ ಒಳಗಾಗಿ ವಿಲೇವಾರಿ ಮಾಡಲು‌ ಕ್ರಮವಹಿಸಲಾಗಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ