AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಹಗಲಲ್ಲಿ ಕುರಾನ್ ಬೋಧಕ; ರಾತ್ರಿ ಮನೆಗಳಿಗೆ ಕನ್ನ, ಶಿಕ್ಷಕ ಅರೆಸ್ಟ್​​

ಕಲಬುರಗಿಯಲ್ಲಿ ಶಿಕ್ಷಕನೊಬ್ಬ ಸಾಲಬಾಧೆ ತಾಳಲಾರದೆ ಮನೆಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿರುವಂತಹ ಘಟನೆ ನಡೆದಿದೆ. ಹಗಲಿನಲ್ಲಿ ಮಸೀದಿಯಲ್ಲಿ ಕುರಾನ್ ಬೋಧಿಸುತ್ತಿದ್ದು, ರಾತ್ರಿ ಮನೆಗಳಿಗೆ ಕನ್ನ ಹಾಕುತ್ತಿದ್ದ ಶಿಕ್ಷಕನನ್ನು ವಿಶ್ವವಿದ್ಯಾಲಯ ಠಾಣಾ ಪೊಲೀಸರು ಬಂಧಿಸಿದ್ದಾರೆ. 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ಬೈಕ್ ಸೇರಿ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕಲಬುರಗಿ: ಹಗಲಲ್ಲಿ ಕುರಾನ್ ಬೋಧಕ; ರಾತ್ರಿ ಮನೆಗಳಿಗೆ ಕನ್ನ, ಶಿಕ್ಷಕ ಅರೆಸ್ಟ್​​
ಬಂಧಿತ ಶಿಕ್ಷಕ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 08, 2025 | 4:17 PM

Share

ಕಲಬುರಗಿ, ನವೆಂಬರ್​ 08: ಆತ ಮಸೀದಿಯೊಂದರಲ್ಲಿ ಕುರಾನ್ (Quran) ಬೋಧನೆ ಮಾಡುವ ಶಿಕ್ಷಕರಾಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಮಾಡಿದ ಸಾಲವನ್ನ ತೀರಿಸಲಾಗದಕ್ಕೆ ಹುಡುಕಿಕೊಂಡಿದ್ದು ಕಳ್ಳತನದ (theft) ಮಾರ್ಗ. ಮಸೀದಿಯಲ್ಲಿ ಕುರಾನ್ ಬೋಧನೆ ಮಾಡುತ್ತಾ ಅತ್ತ ಮನೆಗಳಿಗೂ ಕನ್ನ ಹಾಕುತ್ತಿದ್ದ ಖದೀಮನನ್ನು ಕಲಬುರಗಿ ಸಿಟಿ ಪೊಲೀಸರು ಬಲೆಗೆ ಕೆಡವಿದ್ದಾರೆ. ಅಷ್ಟಕ್ಕೂ ಇತನ ಕಳ್ಳತನ ದಂಧೆ ಹೇಗಿತ್ತು ಅಂತಾ ತಿಳಿಯಲು ಮುಂದೆ ಓದಿ.

ಮಹ್ಮದ್ ಆರೀಫ್ ಅಲಿ ಬಂಧಿತ ಶಿಕ್ಷಕ. ವಿಶ್ವವಿದ್ಯಾಲಯ ಠಾಣಾ ಪೊಲೀಸರು ಬಂಧಿತನಿಂದ 100 ಗ್ರಾಂ ಚಿನ್ನಾಭರಣ, 16 ಸಾವಿರ ರೂ ಮೌಲ್ಯದ ಬೆಳ್ಳಿ, ಬೈಕ್ ಸೇರಿದಂತೆ 13.41 ಲಕ್ಷ ರೂ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.

ಶಿಕ್ಷಕ ವೃತ್ತಿ ಬಿಟ್ಟು ಕಳ್ಳತನಕ್ಕೆ ಇಳಿದ ವ್ಯಕ್ತಿ

ಕಲಬುರಗಿ ನಗರದ ಬಿಲಾಲಬಾದ್ ಕಾಲೋನಿಯ ನಿವಾಸಿ ಮಹ್ಮದ್ ಆರೀಫ್ ಅಲಿ ಮಸೀದಿಯೊಂದರಲ್ಲಿ ಕುರಾನ್ ಬೋಧಿಸುವ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ತಾವಾಯಿತು ತಮ್ಮ ಕೆಲಸವಾಯಿತು ಅಂತಾ ಇದ್ದಿದ್ದರೆ ಇಂದು ಕಲಬುರಗಿ ಪೊಲೀಸರ ಅತಿಥಿಯಾಗುತ್ತಿರಲಿಲ್ಲ. ಆದರೆ ತಮ್ಮ ಶಿಕ್ಷಕ ವೃತ್ತಿ ಬಿಟ್ಟು ಕಳೆದ ಏಳೆಂಟು ತಿಂಗಳಿನಿಂದ ಕಳ್ಳತನ ವೃತ್ತಿಗೆ ಇಳಿದಿದ್ದರು.

ಇದನ್ನೂ ಓದಿ: ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್​ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್​ಟೈಮ್​ ಕೆಲಸ

ಅದರಂತೆ ಬೆಳಗ್ಗೆ ಮಸೀದಿಯಲ್ಲಿ ಕುರಾನ್ ಬೋಧಿಸಿ ಮಧ್ಯಾಹ್ನ ಮತ್ತು ಸಂಜೆ ಕೆಲಸದ ಬಿಡುವಿನ ವೇಳೆ ನಗರದ ತಮ್ಮ ಬಡಾವಣೆಗಳಲ್ಲಿ ಬೈಕ್ ಮೇಲೆ ಸುತ್ತಾಡ ಬೀಗ ಹಾಕಿರುವ ಮನೆಗಳನ್ನು ವಾಚ್ ಮಾಡುತ್ತಿದ್ದರು. ನಸುಕಿನ ಜಾವ 3 ಗಂಟೆ ಬಳಿಕ ಜನ ಗಾಡ ನಿದ್ರೆಯಲ್ಲಿದ್ದಾಗ ಕಬ್ಬಿಣದ ರಾಡ್‌ನಿಂದ ಮನೆ ಬೀಗ ಒಡೆದು ಕನ್ನ ಹಾಕುತ್ತಿದ್ದರು.

ಮನೆಗಳಿಗೆ ಕನ್ನ

ಇನ್ನು ಬಂಧಿತ ಕುಖ್ಯಾತ ಮನೆಗಳ್ಳ ಮಹ್ಮದ್ ಆರೀಫ್ ಅಲಿ ಕಳೆದ ಅನೇಕ ವರ್ಷಗಳಿಂದ ಮಸೀದಿಯೊಂದರಲ್ಲಿ ಕುರಾನ್ ಬೋಧನೆ ವೃತ್ತಿಯಲ್ಲಿ ಇದ್ದರು. ಆದರೆ ಇತ್ತೀಚಿಗೆ ಮಹ್ಮದ್ ಆರೀಫ್ ಅಲಿಗೆ ಸಾಲಬಾಧೆ ಮತ್ತು ಕೌಟುಂಬಿಕ ಹಣಕಾಸು ತೊಂದರೆಯಿಂದ ಸಿಕ್ಕಾಪಟೆ ಬಳಲುತ್ತಿದ್ದರು. ಹಾಗಾಗಿ ಬರುತ್ತಿದ್ದ 10ರಿಂದ 12 ಸಾವಿರ ರೂ. ಸಂಬಳದಲ್ಲಿ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗದ ಹಿನ್ನೆಲೆ ಮನೆಗಳಿಗೆ ಕನ್ನ ಹಾಕುವ ಕೆಲಸಕ್ಕೆ ಕೈಹಾಕಿದ್ದರು.

ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಮುಸ್ಲಿಮರು ವಾಸಿಸುವ ಬಡಾವಣೆಗಳಿರೋ ಕಾರಣ, ತಾಜ್ ನಗರ, ರಾಜಪುರ ರೋಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಧ್ಯಾಹ್ನ ಮತ್ತು ಸಂಜೆ ವೇಳೆ ಯಾವ ಮನೆಗಳಿಗೆ ಬೀಗ ಹಾಕಲಾಗಿದೆ ಎಂದು ಗಮನಿಸುತ್ತಿದ್ದರು. ಬಳಿಕ ನಸುಕಿನ ಜಾವ ಬಂದು ಕನ್ನ ಹಾಕುತ್ತಿದ್ದ‌‌‌ರು.

ಇದನ್ನೂ ಓದಿ: ಆನೇಕಲ್​: ಆಹ್ವಾನ ಪತ್ರಿಕೆ ನೀಡುವ ನೆಪದದಲ್ಲಿ ಬಂದು ಚಿನ್ನ ಕದ್ದ ಖತರ್ನಾಕ್​ ಜೋಡಿ

ವಿವಿ ಠಾಣಾ ವ್ಯಾಪ್ತಿಯಲ್ಲಿ ನಿರಂತರ ಮನೆಗಳ ಕಳ್ಳತನ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಪ್ರಕರಣದ ತನಿಖೆಗಿಳಿದ ಖಾಕಿ ಪಡೆ ಬಡಾವಣೆಗಳಲ್ಲಿನ ಸಿಸಿ ಟಿವಿ ದೃಶ್ಯಗಳನ್ನ ಸಂಗ್ರಹಿಸಿದಾಗ ಸಿಕ್ಕಿದ್ದೆ ಈ ಅನುಮಾನಸ್ಪದ ವ್ಯಕ್ತಿ. ಅದರಂತೆ ಮಸೀದಿಯಲ್ಲಿ ಕುರಾನ್ ಪಠಣ ಮಾಡುತ್ತಿದ್ದ ಮಹ್ಮದ್ ಆರೀಫ್ ಅಲಿಯನ್ನ ವಶಕ್ಕೆ ಪಡೆದು ವಿಚಾರಣೆ ವೇಳೆ ಶಿಕ್ಷಕನ ಅಸಲಿ ಬಣ್ಣ ಬಯಲಾಗಿದೆ.

ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಖದೀಮನನ್ನು ಕೊನೆಗೂ ಲಾಕ್ ಮಾಡಲಾಗಿದ್ದು, ವಿವಿ ಠಾಣೆ ಪೊಲೀಸರ ಕಾರ್ಯಾಚರಣೆಗೆ ಕಲಬುರಗಿ ನಗರ ಪೊಲೀಸ್ ಇಲಾಖೆ ಪ್ರಶಂಸನೀಯ ಪತ್ರ ನೀಡಿ ಸತ್ಕರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Sat, 8 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ