ಕಲಬುರಗಿ: ಅಫಜಲಪುರ ಹಳ್ಳೋಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ಐವರ ಸಾವು

ಒಂದೇ ಬೈಕ್​​ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ದುದನಿಯಿಂದ ಅಫಪೂರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ: ಅಫಜಲಪುರ ಹಳ್ಳೋಳ್ಳಿ ಕ್ರಾಸ್ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ಐವರ ಸಾವು
ಸಾಂದರ್ಭಿಕ ಚಿತ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on:Nov 02, 2023 | 8:30 PM

ಕಲಬುರಗಿ, ನವೆಂಬರ್ 2: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ದುರ್ಮರಣ ಹೊಂದಿದ್ದಾರೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್​​ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ದುದನಿಯಿಂದ ಅಫಪೂರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಮೃತಪಟ್ಟವರೆಲ್ಲರೂ ಅಫಜಲಪೂರನಲ್ಲಿ ಫಾಸ್ಟ್ ಫುಡ್ ಮಾರಾಟ ಹೋಟೆಲ್ ನಡೆಸುತ್ತಿದ್ದರು.

ರತನ್‌ (25), ರತನ್ ಪತ್ನಿ ಅಶ್ಮಿತಾ (21), ಮಕ್ಕಳಾದ ಮಿಲನ್ (5), ಧರಕನ್‌ (2), ರತನ್ ತಮ್ಮನ ಹೆಂಡತಿ ಸ್ವಸ್ತಿಕಾ (18) ಮೃತ ದುರ್ದೈವಿಗಳು.

ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪೂರದಲ್ಲಿ ವಾಸವಿತ್ತು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಯಾದಗಿರಿಯಲ್ಲಿ ಸರ್ಕಾರಿ ಬಸ್​ ಡಿಕ್ಕಿ: ಇಬ್ಬರು ಸಾವು

ಸರ್ಕಾರಿ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ತಂದೆ-ಮಗ ದುರ್ಮರಣ ಹೊಂದಿದ ಘಟನೆ ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಶಿವಪುರ ಬಳಿ ನಡೆದಿದೆ. ತಂದೆ ಸಾಬಣ್ಣ ಶಿವಪುರ (38), ಮಗ ಮನೋಜ್ (7) ಮೃತಪಟ್ಟವರು. ಜಮೀನಿನಲ್ಲಿ ಕೃಷಿಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ. ಗಾಯಾಳು ರಂಜಿತಾ, ಚೈತ್ರಾಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ತುಮಕೂರು: ಕಾರು – ಬಸ್ಸು ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು

ಓಮಿನಿ‌ ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನ ಗೂಳೂರು ಬಳಿ ನಡೆದಿದೆ. ಓಮಿನಿಯಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮೃತರು‌ ತುಮಕೂರಿನ ‌ಮಾನಂಗಿಯವರು ಎನ್ನಲಾಗಿದೆ. ಖಾಸಗಿ ಬಸ್​​ನ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Thu, 2 November 23

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ