ಶಾಲಾ ಬಾಲಕನ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಕಲಬುರಗಿ ಪೊಲೀಸರು

ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಸಿನಿಮಾ ಶೈಲಿಯಲ್ಲಿ ಅಪಹರಣ ಮಾಡಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸಿಂಗಂ ಸ್ಟೈಲ್​ನಲ್ಲಿ ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸಿದ್ದರು. ಪ್ರಕರಣ ಸಂಬಂಧ ತಡರಾತ್ರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಾಲಾ ಬಾಲಕನ ಅಪಹರಣ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಕಲಬುರಗಿ ಪೊಲೀಸರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jan 06, 2023 | 9:20 AM

ಕಲಬುರಗಿ: ಶಾಲೆಗೆ ಹೋಗುತ್ತಿದ್ದ ಬಾಲಕನನ್ನು (School Boy Kidnap Case) ಆಟೋದೊಳಗೆ ಬಲವಂತವಾಗಿ ತುಂಬಿಸಿ ಅಪಹರಿಸಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕಲಬುರಗಿಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರುಣ್ ಭಜಂತ್ರಿ ಮತ್ತು ಲಕ್ಷ್ಮಣ ಭಜಂತ್ರಿ ಬಂಧಿತ ಆರೋಪಿಗಳಾಗಿದ್ದು, ಕಲಬುರಗಿ ನಗರದ ಸಂತ್ರಸವಾಡಿ ನಿವಾಸಿಗಳಾಗಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕನ ಮಗ ಸುರ್ಶನನನ್ನು ಸಿದ್ದೇಶ್ವರ ಕಾಲೋನಿಯಲ್ಲಿ ಜನವರಿ 4ರಂದು ಕಿಡ್ನಾಪಲ್ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್ ಇಡಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ಕಾರ್ಯಾಚರಣೆಗೆ ನಡೆಸಿ ಬಾಲಕನ್ನು ರಕ್ಷಿಸಿ ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.

ಏನಿದು ಪ್ರಕರಣ?

ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿರುವ ಗುರುನಾಥ್ ರಾಠೋಡ್ ಅನ್ನೋರು, ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮೂರು ಜನ ಮಕ್ಕಳಿದ್ದು, ಹಿರಿಯ ಮಗ, ಕಲಬುರಗಿ ನಗರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾನೆ. ಜನವರಿ 4ರಂದು ಬೆಳಗ್ಗೆ 9 ಗಂಟೆ ಸಮಯದಲ್ಲಿ ಗುರುನಾಥ್ ಅವರ ಪುತ್ರ ಸುದರ್ಶನ ಶಾಲೆಗೆ ಹೋಗಲು ಮನೆಯಿಂದ ಹೊರಬಂದಿದ್ದ. ಮನೆಯಿಂದ ಹೊರಬಂದು ಶಾಲಾ ಬಸ್​​ಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದಿದ್ದ ದುರುಳರು, ಇಎಸ್ಐ ಆಸ್ಪತ್ರೆಯ ವಿಳಾಸ ಕೇಳುವ ನೆಪದಲ್ಲಿ ಬಾಲಕನನ್ನು ಮಾತನಾಡಿಸಿ ಆಟೋದಲ್ಲಿ ಅಪಹರಿಸಿಕೊಂಡು ಹೋಗಿದ್ದರು.

ಇದನ್ನೂ ಓದಿ: ಚೀನಾದ ಯಾಂಗ್ ಶಿನ್ಹಾಯ್​ನನ್ನು ಬಂಧಿಸಿದ್ದು 5 ಕೊಲೆ, 2 ಅತ್ಯಾಚಾರದ ಪ್ರಕರಣಗಳಲ್ಲಿ; ಅವನು ತಪ್ಪೊಪ್ಪಿಕೊಂಡಿದ್ದು 67 ಕೊಲೆ ಮತ್ತು 23 ಅತ್ಯಾಚಾರದ ಅಪರಾಧಗಳು!

ಆಟೋದಲ್ಲಿ ಬಾಲಕನನ್ನು ಕರೆದುಕೊಂಡು ಹೋದ ದುಷ್ಕರ್ಮಿಗಳು, ಕೆಲ ಹೊತ್ತಿನ ನಂತರ, ಶಿಕ್ಷಕ ಗುರುನಾಥ್ ಅವರ ಮೊಬೈಲ್ ಗೆ ಕರೆ ಮಾಡಿ, ಹತ್ತು ಲಕ್ಷ ಹಣವನ್ನು ನೀಡಬೇಕು. ಪೊಲೀಸರಿಗೆ ಮಾಹಿತಿ ನೀಡಿದರೆ, ನಿಮ್ಮ ಮಗ ಜೀವಂತ ಉಳಿಯಲ್ಲಾ ಅಂತ ಬೆದರಿಕೆ ಹಾಕಿದ್ದರು. ಈ ಬಗ್ಗೆ ಗುರುನಾಥ್ ಅವರು ಕಲಬುರಗಿ ನಗರದಲ್ಲಿರುವ ವಿಶ್ವವಿದ್ಯಾಲಯ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆಗೆ ಇಳಿದರು. ಈ ವಿಚಾರ ತಿಳಿಯುತ್ತಿದ್ದಂತೆ ಆರೋಪಿಗಳು ಬಾಲಕನನ್ನು ಪಾಳಾ ಗ್ರಾಮದ ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಇತ್ತ ಬಾಲಕ ಓಡೋಡಿ ಬರ್ತಾಯಿರೋದನ್ನು ನೋಡಿದ್ದ ಕೃಷಿಕನೋರ್ವ, ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ನೋಡಿ, ಶಿಕ್ಷಕ ಗುರುನಾಥ್ ಗೆ ಕರೆ ಮಾಡಿ, ತಮ್ಮ ಮಗ ಇರೋ ಬಗ್ಗೆ ಹೇಳಿದ್ದ. ಕೂಡಲೇ ಸ್ಥಳಕ್ಕೆ ಹೋದ ಪೊಲೀಸರು, ಬಾಲಕನನ್ನು ರಕ್ಷಿಸಿ, ಹೆತ್ತವರಿಗೆ ಒಪ್ಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Fri, 6 January 23

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್