AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡ್ತಿದ್ದ ಲಾರಿ ಜಪ್ತಿ: ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ?

ಕಲಬುರಗಿ ಜಿಲ್ಲೆಯಲ್ಲಿ ಸಾಕಷ್ಟು ರೀತಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲು ಕೊಂಡ್ಯೊಯುವಾಗ ಸಿಜ್ ಮಾಡಲಾಗಿತ್ತು. ಬಡವರಿಗೆ ವಿತರಣೆ ಆಗಬೇಕಾಗಿರುವ ಪಡಿತರ ಅಕ್ಕಿಯನ್ನ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೋಟ್ಯಾಂತರ ರೂ. ಕೊಳ್ಳೆ ಹೊಡೆಯುವ ಕೆಲಸ ಇಂದಿಗೂ ನಿಂತಿಲ್ಲ.

ಕಲಬುರಗಿ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡ್ತಿದ್ದ ಲಾರಿ ಜಪ್ತಿ: ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ?
ಅನ್ನಭಾಗ್ಯ ಅಕ್ಕಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 11, 2024 | 10:03 PM

ಕಲಬುರಗಿ, ಫೆಬ್ರವರಿ 11: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ (rice) ಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಜಟಾಪಟಿ ನಡಿತಾನೇ ಇದೆ. ಆದರೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆಗೆ ಮಾತ್ರ ಬ್ರೇಕ್ ಬಿಳುತ್ತಿಲ್ಲ. ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಖುದ್ದು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದಂತಹ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಖಜೂರಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯಲ್ಲಿ ಬಡವರ ಹೊಟ್ಟೆ ಸೇರಬೇಕಿರುವ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕಳೆದ ತಡರಾತ್ರಿ ಖಜೂರಿ ಗ್ರಾಮದ ಬಳಿ ಕೆಎ 56 6546 ಸಂಖ್ಯೆಯ ಲಾರಿಯಲ್ಲಿ ಸುಮಾರು 20 ಟನ್‌ಗಳಿಗೂ ಅಧಿಕ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡ್ಯೊಯಲಾಗುತ್ತಿತ್ತು. ಈ ವೇಳೆ ಖಜೂರಿ‌ ಗ್ರಾಮದ ಬಳಿ ಲಾರಿ ಅಡ್ಡಗಟ್ಟಿದ ಗ್ರಾಮಸ್ಥರು ಪರಿಶೀಲನೆ ನಡೆಸಿದ್ದು, ಆಗ ಸ್ಥಳದಿಂದ ಲಾರಿ ಚಾಲಕ ಎಸ್ಕೆಪ್ ಆಗಿದ್ದಾನೆ. ಸದ್ಯ ಲಾರಿಯನ್ನ ಆಳಂದ ಠಾಣೆ ಪೊಲೀಸರು ಸಿಜ್ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸಾಕಷ್ಟು ರೀತಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲು ಕೊಂಡ್ಯೊಯುವಾಗ ಸಿಜ್ ಮಾಡಲಾಗಿತ್ತು. ಬಡವರಿಗೆ ವಿತರಣೆ ಆಗಬೇಕಾಗಿರುವ ಪಡಿತರ ಅಕ್ಕಿಯನ್ನ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆಯುವ ಕೆಲಸ ಇಂದಿಗೂ ನಿಂತಿಲ್ಲ.

ಇದನ್ನೂ ಓದಿ: ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದ ಗಡಿಯಲ್ಲಿ ಹೇಗೆ ಸಿಜ್ ಆಯಿತು. ರಾಜ್ಯದಿಂದ ಮಹಾರಾಷ್ಟ್ರಕ್ಕೆ ಸರಬರಾಜು ಆಗುತ್ತಿತ್ತಾ ಎಂಬಿತ್ಯಾದಿ ವಿಷಯಗಳ ಬಗ್ಗೆ ತನಿಖೆ ನಡೆಸಲು ಎಸ್ಪಿಗೆ ಸೂಚಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಅದೆನೇ ಇರಲಿ ಒಂದು ಕಡೆ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ಕೊರತೆಯಿಂದ ಕೇಂದ್ರ ಸರ್ಕಾರದೊಂದಿಗೆ ನಿರಂತರ ಜಟಾಪಟ್ಟಿ ಮಾಡುತ್ತಿದ್ದರೆ, ಇತ್ತ ಅದೇ ಅಕ್ಕಿಯನ್ನ ದಂಗೆಕೋರರ ಕಾಳಸಂತೆಯಲ್ಲಿ ಮಾರಾಟ ಮಾಡ್ತಿರೋದು ಸರ್ಕಾರದ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಬಂಧನ

ಗದಗ ಜಿಲ್ಲೆಯಲ್ಲೇ ಮಾತ್ರವಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಸಹ ಅನ್ನಭಾಗ್ಯ ಅಕ್ಕಿ ಎಗ್ಗಿಲ್ಲದೇ ಸಾಗಾಟ ನಡೆಯುತ್ತಿದ್ದು, ಇದಕ್ಕೆ ಆಹಾರ ಇಲಾಖೆ ಕಡಿವಾಣ ಹಾಕಿಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.