
ಕಲಬುರಗಿ, ಆಗಸ್ಟ್ 14: ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪ (Sharanabasappa appa) (92) ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ತಿಳಿದುಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ (ಆ.14) ಡಾ. ಶ್ರೀ ಶರಣಬಸಪ್ಪ ಅಪ್ಪ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶರಣಬಸಪ್ಪ ಅಪ್ಪ ಅವರನ್ನು ಮಠಕ್ಕೆ ಶಿಫ್ಟ್ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಮಠದಲ್ಲೇ ವೆಂಟಿಲೇಷನ್ ಮೂಲಕ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಡಾ. ಶರಣಬಸಪ್ಪ ಅಪ್ಪ ಆರೋಗ್ಯವನ್ನು ವಿಚಾರಿಸಲು ಚಿರಾಯು ಆಸ್ಪತ್ರೆಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಡಾ. ಶರಣಬಸಪ್ಪ ಅಪ್ಪ ಅವರು ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಗೂ ಹೆಸರುವಾಸಿಯಾಗಿದ್ದಾರೆ. ಶರಣಬಸವೇಶ್ವರ ಸಂಸ್ಥಾನ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ದಾಸೋಹ ವ್ಯವಸ್ಥೆಗೆ ಹೆಸರುವಾಸಿಯಾಗಿದೆ.
Published On - 9:40 pm, Thu, 14 August 25