ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ, ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
ಕಲಬುರಗಿಯ ಡಾ. ಶ್ರೀ ಶರಣಬಸಪ್ಪ ಅಪ್ಪ
Edited By:

Updated on: Aug 14, 2025 | 10:52 PM

ಕಲಬುರಗಿ, ಆಗಸ್ಟ್​ 14: ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ (Sharanabasappa appa) ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.14) ಲಿಂಗೈಕ್ಯರಾಗಿದ್ದಾರೆ. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.

ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಆ.14) ಡಾ.ಶರಣಬಸಪ್ಪ ಅಪ್ಪ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಶರಣಬಸವೇಶ್ವರ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠಕ್ಕೆ ಶಿಫ್ಟ್‌ ಆಗುತ್ತಿದ್ದಂತೆ ಡಾ.ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ.

ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು. ಶರಣಬಸವೇಶ್ವರ ಸಂಸ್ಥಾನ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ದಾಸೋಹ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಡಾ. ಶ್ರೀ ಶರಣಬಸಪ್ಪ ಅವರು 1988ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಮಠದ ಆವರಣದಲ್ಲಿ ಅಂತ್ಯಕ್ರಿಯೆ

ಇಂದು ರಾತ್ರಿ 9.20ರ ಸುಮಾರಿಗೆ ಶರಣಬಸವಪ್ಪ ಅಪ್ಪ ಅವರು ಲಿಂಗೈಕರಾಗಿದ್ದಾರೆ. ದೇವಸ್ಥಾನದ ಮುಂಭಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.  ಸಾವಿರಾರು ಸಂಖ್ಯೆಯಲ್ಲಿ ಭಕ್ತರ ಆಗಮನ ಹಿನ್ನೆಲೆಯಲ್ಲಿ ಬಂದೋಬಸ್ತ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜೊತೆ ಸಮಾಲೋಚನೆ‌ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 pm, Thu, 14 August 25