ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ

TV9kannada Web Team

TV9kannada Web Team | Edited By: Vivek Biradar

Updated on: Nov 07, 2022 | 9:23 PM

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿ ಭಸ್ಮ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical short circuit) ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ (Kalburgi) ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲಿಕ ಶಿವಪ್ಪ ಬಂಡಪ್ಪ ಗಾಯಾಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ; ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ತಾಜಾ ಸುದ್ದಿ

 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ ನಡೆದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಅಣ್ಣೂರು ಗ್ರಾಮದ ಸಂತೋಷ್ (28) ಎನ್ನುವ ಯುವಕನ ವಿರುದ್ಧ ಆರೋಪ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ವಯೋ ಸಹಜ ಖಾಯಿಲೆಯಿಂದ ವೃದ್ದೆ ಬಳಲುತ್ತಿದ್ದು, ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಯುವಕ ಕೃತ್ಯವೆಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ವೃದ್ದೆಯನ್ನ ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ಆಳಂದ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಹೆಜ್ಜೇನು ದಾಳಿ

ಉತ್ತರ ಕನ್ನಡ: ಸಿನಿಮಾ ಶೂಟಿಂಗ್ ವೇಳೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಜಮಗೋಡು ಗ್ರಾಮದಲ್ಲಿ ನಡೆದಿದೆ. ಹೆಜ್ಜೇನು ಕಡಿತದಿಂದ  ಮಂಡ್ಯ ಮೂಲದ ರಮೇಶ್ ಮತ್ತು ರಾಮು ಸ್ಥಿತಿ ಗಂಭೀರ ಗಾಯಗಳಾಗಿದ್ದು,  ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮಗೋಡಿನ ರೈಲು ನಿಲ್ದಾಣ ರಸ್ತೆಯಲ್ಲಿ ಶೂಟಿಂಗ್  ಮಾಡುತ್ತಿದ್ದರು. ಈ ವೇಳೆ ಹೆಜ್ಜೇನು ದಾಳಿ ಮಾಡಿದವು. ಇದರಿಂದ ಲೈಟಿಂಗ್ ಸಹಾಯಕರು ತೀರ್ವ ಗಾಯಗೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada