AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಯಲ್ಲಿ ಕಾಪಿ ಮಾಡುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ: ಪ್ರಶ್ನಿಸಿದ್ದಕ್ಕೆ ಮೇಲ್ವಿಚಾರಕರ ಮೇಲೆ ಹಲ್ಲೆ

ಕಲಬುರಗಿಯ ಡಾ. ಮಾಲಕರಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನ ಪ್ರಶ್ನಿಸಿದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಕಾಲೇಜು ಮಂಡಳಿ ವಿದ್ಯಾರ್ಥಿಗೆ ಮುಂದಿನ ಪರೀಕ್ಷೆಗೆ ಅವಕಾಶ ನೀಡದಿರಲು ನಿರ್ಧರಿಸಿದೆ.

ಪರೀಕ್ಷೆಯಲ್ಲಿ ಕಾಪಿ ಮಾಡುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ: ಪ್ರಶ್ನಿಸಿದ್ದಕ್ಕೆ ಮೇಲ್ವಿಚಾರಕರ ಮೇಲೆ ಹಲ್ಲೆ
ವಿದ್ಯಾರ್ಥಿಯಿಂದ ಮೇಲ್ವಿಚಾರಕರ ಮೇಲೆ ಹಲ್ಲೆImage Credit source: tv9 kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 20, 2026 | 7:05 PM

Share

ಕಲಬುರಗಿ, ಫೆಬ್ರವರಿ 20: ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ (Student) ಹಲ್ಲೆ (attacks) ಮಾಡಿರುವಂತಹ ಘಟನೆಯೊಂದು ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿ ಶಹಬಾಜ್​​ ಎಂಬಾತನಿಂದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್​ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ನಡೆದಿದ್ದೇನು? 

ಡಾ.ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಇಂದು ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್​ ನಡೆದಿತ್ತು. ಈ ವೇಳೆ ವಿದ್ಯಾರ್ಥಿ ಶಹಬಾಜ್​ ಮೊಬೈಲ್ ಬಳಸಿಕೊಂಡು ಕಾಪಿ ಮಾಡಲು ಮುಂದಾಗಿದ್ದ. ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್​, ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದುಕೊಂಡಿದ್ದರು.

ವಿದ್ಯಾರ್ಥಿ ಹಲ್ಲೆ ಮಾಡುತ್ತಿರುವ ವಿಡಿಯೋ

ವಿದ್ಯಾರ್ಥಿಯನ್ನು ತಕ್ಷಣವೇ ಪರೀಕ್ಷಾ ಹಾಲ್‌ನಿಂದ ಹೊರಹೋಗುವಂತೆ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ತಕ್ಷಣ ಪ್ರಾಧ್ಯಾಪಕ ಶಿವರಾಜಕುಮಾರ್ ಅವರ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ. ಈ ಆಕಸ್ಮಿಕ ಘಟನೆಯಿಂದ ಕೆಲಕಾಲ ಕಾಲೇಜು ಆವರಣದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!

ಇನ್ನು ವಿದ್ಯಾರ್ಥಿ ಶಹಬಾಜ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಆಡಳಿತ ಮಂಡಳಿ ಪಾಲಕರಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ಕಾಲೇಜು ಮಂಡಳಿ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು