ಉಗ್ರ ಸಂಘನೆಗಳೊಂದಿಗೆ ನಂಟಿನ ಆರೋಪದಲ್ಲಿ ಕಲಬುರಗಿಯಲ್ಲಿ ಬಂಧನಕ್ಕೊಳಗಾದ ಮಲಿಕ್ ಮೊಬೈಲ್​ನಲ್ಲಿ ಸಿಕ್ತು ಸ್ಫೋಟಕ ಸುಳಿವು

ಕಲಬುರಗಿಯಲ್ಲಿ ಶಂಕಿತ ಉಗ್ರ ಸಂಪರ್ಕದ ಆರೋಪದ ಮೇಲೆ ಭಾನುವಾರ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ಮಲಿಕ್‌ನ ಮೊಬೈಲ್ ಪರಿಶೀಲನೆ ವೇಳೆ ಪಾಕಿಸ್ತಾನ ಮೂಲದ ವ್ಯಕ್ತಿಗಳು, ವಾಟ್ಸ್‌ಆ್ಯಪ್ ಗ್ರೂಪ್‌ಗಳು ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಿಗೆ ಸಂಬಂಧಿಸಿದ ಮಾಹಿತಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರ ಸಂಘನೆಗಳೊಂದಿಗೆ ನಂಟಿನ ಆರೋಪದಲ್ಲಿ ಕಲಬುರಗಿಯಲ್ಲಿ ಬಂಧನಕ್ಕೊಳಗಾದ ಮಲಿಕ್ ಮೊಬೈಲ್​ನಲ್ಲಿ ಸಿಕ್ತು ಸ್ಫೋಟಕ ಸುಳಿವು
ಮಮ್ತಾಜ್ ಮಲಿಕ್
Image Credit source: tv9
Edited By:

Updated on: Oct 19, 2026 | 9:44 AM

ಮುಖ್ಯಾಂಶಗಳು

  • ಮಮ್ತಾಜ್ ಮಲಿಕ್ ಮೊಬೈಲ್‌ನಲ್ಲಿ ಪಾಕ್‌ ಸಂಘಟನೆಗಳ ಸಂಪರ್ಕದ ಸುಳಿವು
  • ವಾಟ್ಸ್‌ಆ್ಯಪ್ ಗ್ರೂಪ್, ಇನ್‌ಸ್ಟಾಗ್ರಾಂ ಖಾತೆಗಳ ಬಗ್ಗೆ ತನಿಖೆ
  • ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಅಡಿಯಲ್ಲಿ ಎಫ್‌ಐಆರ್

ಕಲಬುರಗಿ, ಅಕ್ಟೋಬರ್ 19: ಕಲಬುರಗಿಯಲ್ಲಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ ಮಲಿಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಮ್ತಾಜ್ ಮಲಿಕ್‌ನ ಮೊಬೈಲ್ ಪರಿಶೀಲನೆ ವೇಳೆ ಪಾಕಿಸ್ತಾನ ಮೂಲದ ವ್ಯಕ್ತಿಗಳು ಹಾಗೂ ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ವಾಟ್ಸ್‌ಆ್ಯಪ್ ಗ್ರೂಪ್‌ಗಳು ಮತ್ತು ಇನ್‌ಸ್ಟಾಗ್ರಾಂ ಖಾತೆಗಳ ಸಂಪರ್ಕದ ಮಾಹಿತಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಾಕ್ ಮೂಲದ ವ್ಯಕ್ತಿ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರಿಸಿದ್ದ ಆರೋಪ

ಪೊಲೀಸರು ದಾಖಲಿಸಿರುವ ದೂರಿನ ಪ್ರಕಾರ, ಮಮ್ತಾಜ್ ಮಲಿಕ್ ಉರ್ದು ಭಾಷೆಯ ‘ಇಮಾಮ್ ಮೇಂದಿ’ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನ ಸದಸ್ಯನಾಗಿದ್ದ. ಪಾಕಿಸ್ತಾನದ ಜೈನುಲ್ ಅಬ್ದಿನ್ ಎಂಬ ವ್ಯಕ್ತಿ ತನ್ನನ್ನು ಈ ಗ್ರೂಪ್‌ಗೆ ಸೇರಿಸಿದ್ದಾಗಿ ಮಮ್ತಾಜ್ ಹೇಳಿದ್ದಾನೆ. ಈ ವ್ಯಕ್ತಿ ಲಷ್ಕರ್‌-ಎ-ತೊಯ್ಬಾ ಸಂಘಟನೆಯ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ ಆರೋಪವೂ ಇದೆ. ಈ ಸಂಬಂಧವೂ ತನಿಖೆ ನಡೆಯುತ್ತಿದೆ.

Loading...

ಇದಲ್ಲದೆ, ‘Kashmiri Tiger 313’, ‘I Love Pakistan I Love Kashmir’ ಹಾಗೂ ‘major_iqbal_isi’ ಸೇರಿದಂತೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಇನ್‌ಸ್ಟಾಗ್ರಾಂ ಖಾತೆಗಳನ್ನು ಮಮ್ತಾಜ್ ಫಾಲೋ ಮಾಡುತ್ತಿದ್ದ ಎಂಬ ಆರೋಪವಿದೆ. ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ರೀಲ್ಸ್‌ಗಳಿಗೆ ಲೈಕ್ ಮಾಡಿರುವ ಮಾಹಿತಿಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮೊಬೈಲ್‌ನಲ್ಲಿದ್ದ ಫೋಟೋ, ವಿಡಿಯೋ ವಶಕ್ಕೆ

ಮಮ್ತಾಜ್ ಮಲಿಕ್‌ನ ಮೊಬೈಲ್‌ನಲ್ಲಿದ್ದ ಕೆಲವು ಫೋಟೋಗಳು ಮತ್ತು ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಡಿಜಿಟಲ್ ಸಾಕ್ಷ್ಯಗಳ ಸ್ವರೂಪ ಹಾಗೂ ಅವುಗಳಿಗೂ ಶಂಕಿತನಿಗೂ ಇರುವ ಸಂಬಂಧದ ಬಗ್ಗೆ ತನಿಖೆ ಮುಂದುವರಿದಿದೆ.

ಬ್ರಹ್ಮಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಶೀಲ್ ಕುಮಾರ್ ನೀಡಿದ ದೂರಿನ ಮೇರೆಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಮಮ್ತಾಜ್ ಮಲಿಕ್ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 113(3) ಮತ್ತು 197(1) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಉಗ್ರ ಸಂಘನೆಗಳೊಂದಿಗೆ ನಂಟು ಆರೋಪ: ಕಲಬುರಗಿಯಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್​

ಶಂಕಿತ ಉಗ್ರ ಸಂಪರ್ಕದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರ ತನಿಖೆ ಮುಂದುವರಿದಿದ್ದು, ವಶಪಡಿಸಿಕೊಂಡಿರುವ ಮೊಬೈಲ್‌ನಲ್ಲಿನ ಮಾಹಿತಿ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯವಾಗಬಹುದೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us