AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲೆಕ್ಕಪತ್ರ ಪರಿಶೋಧನೆಯಲ್ಲಿ ಬೆಳಕಿಗೆ ಬಂದರೂ, ಆರಂಭದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಕುಲಪತಿಗಳ ಹೇಳಿಕೆಗಳು ಬದಲಾಗುತ್ತಿರುವುದು ಮತ್ತು ತನಿಖೆಯಲ್ಲಿನ ಅನುಮಾನಗಳು ಪ್ರಕರಣದ ಸುತ್ತ ಮತ್ತಷ್ಟು ಗೊಂದಲ ಮೂಡಿಸಿವೆ.

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ
ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ
ದತ್ತಾತ್ರೇಯ ಪಾಟೀಲ್​
| Edited By: |

Updated on: Mar 23, 2026 | 2:37 PM

Share

ಕಲಬುರ್ಗಿ, ಮಾರ್ಚ್​ 23: ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್​ನಿಂದಲೇ ಈ ವಂಚನೆ (Fraud) ನಡೆದಿದೆ. ಆತ ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅನುಮಾನಕ್ಕೆ ಎಡೆಮಾಡಿಕೊಟ್ಟ ಕುಲಪತಿಗಳ ಹೇಳಿಕೆ!

ಕಲಬುರ್ಗಿ ವಿವಿಯ ಎಲ್ಲಾ ಸಿಬ್ಬಂದಿಗೆ ಸಂಬಳ ಕೊಡಬೇಕಾದ ಅಕೌಂಟೆಂಟ್ ಶರಣು, ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಅದಕ್ಕೂ ಹೆಚ್ಚಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಬಗ್ಗೆ ದೂರು ದಾಖಲಿಸದೆ ಕುಳಿತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಅಕೌಂಟಂಟ್ ಶರಣು ತನಗೆ ಬೇಕಾದ ವ್ಯಕ್ತಿಗಳಿಗೆ ಹೆಚ್ಚುವರಿ ಟಿಎ,ಡಿಎ ಹಾಕಿದ್ದೇನೆ ಎಂದು ವಿವಿಯ ಖಾತೆಯಿಂದ ಲಕ್ಷ ಲಕ್ಷ ಹಣ ಸಂದಾಯ ಮಾಡಿದ್ದ. ಬಳಿಕ ಅವರಿಗೆ ಪೋನ್ ಮಾಡಿ ಆ ಹಣವನ್ನು ವಾಪಸ್ ತನ್ನ ವಯುಕ್ತಿಕ ಖಾತೆಗೆ ಹಾಕಿಕೊಂಡು ಮೋಸ ಮಾಡಿದ್ದ. ಆ ಮೋಸದ ಹಣವೇ ಅಂದಾಜು ಬರೋಬ್ಬರಿ ಒಂದು ಕೋಟಿವರೆಗೂ ಆಗಬಹುದು ಎಂದು ಈ ಮೊದಲು ವಿವಿ ಕುಲಪತಿಗಳೇ ಹೇಳಿದ್ದರು. ವಿವಿಯ ಲೆಕ್ಕ ಪತ್ರ ಸಮೀತಿ ಅಡಿಟ್ ವೇಳೆ ಈ ಅಕ್ರಮ ಹಣದ ವರ್ಗಾವಣೆ ಬಹಿರಂಗರ ಗೊಂಡಿತ್ತು. ಹೀಗಿದ್ದರೂ ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಅನುಮಾನಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಘಟನೆ ನಡೆದಾಗ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿದೆ ಎಂದಿದ್ದ ಕುಲಪತಿಗಳು ಈಗ ತನಿಖೆಯಲ್ಲಿ ಕೇವಲ 24 ಲಕ್ಷ ರೂಪಾಯಿ ಅಕ್ರಮ ವರ್ಗಾವಣೆ ನಡೆದಿದೆ ಎಂದು ಹೇಳಿದ್ದಾರೆ ಎಂಬುದು ತಿಳಿದು ಬಂದಿದೆ. ಅಕೌಂಟಂಟ್ ಶರಣು ಈಗಾಗಲೇ ಕೆಲಸಿದಿಂದ ವಜಾಗೊಂಡಿದ್ದಾನೆ.ಆದರೆ ತನಿಖೆಯಲ್ಲಿ ಕುಲಸಚಿವರ ಹೇಳಿಕೆಗಳಿಂದ ಅನುಮಾನ ಹುಟ್ಟಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ