Kalaburagi News: ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಾರೆಂದು ಆರೋಪಿಸಿದ ಕಾನ್​ಸ್ಟೇಬಲ್​​ಗಳು, ಆತ್ಮಹತ್ಯೆಗೆ ಯತ್ನ

ಮರಳು ಹಪ್ತಾ, ವೈನ್ ಶಾಪ್ ಹಪ್ತಾ ವಸೂಲಿ ಮಾಡಿಸುತ್ತಾರೆ. ಪಿಎಸ್​​​ಐ, ಸಿಪಿಐ, ಡಿಎಸ್ಪಿ ಅವರು ಒತ್ತಡ ಹೇರುತ್ತಿದ್ದಾರೆ. ಬಳಿಕ ಲೀಡರ್​​ಗಳಿಗೆ ದುಡ್ಡು ಕೊಟ್ಟು ಬರುತ್ತಾರೆ ಎಂದು ಕಾನ್​ಸ್ಟೇಬಲ್​ಗಳು ಆರೋಪಿಸಿದ್ದಾರೆ.

Kalaburagi News: ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಾರೆಂದು ಆರೋಪಿಸಿದ ಕಾನ್​ಸ್ಟೇಬಲ್​​ಗಳು, ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on:Jul 06, 2023 | 6:19 PM

ಕಲಬುರಗಿ: ಹಿರಿಯ ಪೊಲೀಸ್ ಅಧಿಕಾರಿಗಳು, ಮೇಲಧಿಕಾರಿಗಳು ನಮ್ಮನ್ನು ಹಫ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ. ಹಾಗೆ ಸಂಗ್ರಹಿಸಿದ ಹಣವನ್ನು ನಾಯಕರಿಗೆ ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್ ಕಾನ್​ಸ್ಟೇಬಲ್​​ಗಳು (Police Constable) ಗುರುವಾರ ಆರೋಪಿಸಿದ್ದಾರೆ. ಕಲಬುರಗಿ ನಗರದ ಸಂಚಾರಿ ಠಾಣೆ 1 ರಲ್ಲಿ ಕಾನಸ್ಟೇಬಲ್ ಆಗಿರುವ ಚಂದ್ರಕಾಂತ್ ಎಂಬವರು, ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರುವ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮೇಲಾಧಿಕಾರಿಗಳು ನಮ್ಮನ್ನು ಹಪ್ತಾ ವಸೂಲಿ ಮಾಡಲು ಕಳುಹಿಸುತ್ತಾರೆ. ಮರಳು ಹಪ್ತಾ, ವೈನ್ ಶಾಪ್ ಹಪ್ತಾ ವಸೂಲಿ ಮಾಡಿಸುತ್ತಾರೆ. ಪಿಎಸ್​​​ಐ, ಸಿಪಿಐ, ಡಿಎಸ್ಪಿ ಅವರು ಒತ್ತಡ ಹೇರುತ್ತಿದ್ದಾರೆ. ಬಳಿಕ ಲೀಡರ್​​ಗಳಿಗೆ ದುಡ್ಡು ಕೊಟ್ಟು ಬರುತ್ತಾರೆ’ ಎಂದು ಕಾನ್​ಸ್ಟೇಬಲ್​ಗಳು ಆರೋಪಿಸಿದ್ದಾರೆ.

ಪಿಎಸ್​​​ಐ, ಸಿಪಿಐ, ಡಿಎಸ್ಪಿಗಳು ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದಾರೆ. ಅವರನ್ನು ಕಿತ್ತು ಹಾಕುವ ವರೆಗೆ ವ್ಯವಸ್ಥೆ ಸುಧಾರಣೆಯಾಗಲಾರದು ಎಂದು ಕಾನ್​ಸ್ಟೇಬಲ್​ಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಆತ್ಮಹತ್ಯೆಗೆ ಯತ್ನಿಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಕಾಂತ ಅವರನ್ನು ನಗರ ಪೊಲೀಸ್ ಆಯುಕ್ತ ಚೇತನ್ ಆರ್ ಫರಹತಾಬಾದ್ ಠಾಣೆಗೆ ವರ್ಗಾವಣೆ ಮಾಡಿದ್ದರು. ನಮ್ಮ ಮೇಲಾಧಿಕಾರಿಗಳೇ ಸುಳ್ಳು ಹೇಳಿ ವರ್ಗಾವಣೆ ಮಾಡಿಸಿದ್ದಾರೆ ಎಂದು ಚಂದ್ರಕಾಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 59 ಕಾನಸ್ಟೇಬಲ್​​ಗಳನ್ನು ವರ್ಗಾವಣೆ ಮಾಡಲಾಗಿದೆ. ತಮಗೆ ಬೇಡವಾದವರನ್ನು ವರ್ಗಾವಣೆ ಮಾಡಿಸಿದ್ದಾರೆ. ಮೇಲಾಧಿಕಾರಿಗಳು ವರ್ಗಾವಣೆ ಮಾಡಿಸಿದ್ದಾರೆ ಎಂದು ಕಾನಸ್ಟೇಬಲ್​ಗಳು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅವತ್ತು ಈಶ್ವರಪ್ಪ ರಾಜೀನಾಮೆ ಕೊಡುವಂತೆ ಮಾಡಿದ್ದಿರಿ, ಇವತ್ತೂ ಅದೇ ಪರಿಸ್ಥಿತಿ ಅಲ್ಲವಾ? ಚಲುವರಾಯಸ್ವಾಮಿನೂ ರಿಸೈನ್ ಮಾಡಲಿ: ಕುಮಾರಸ್ವಾಮಿ

ಮಂಡ್ಯದಲ್ಲಿ ಕೆಎಸ್​ಆರ್​​ಟಿಸಿ ಚಾಲಕ ಸಚಿವರ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವುದು ವಿಧಾನಸಭೆ ಅಧಿವೇಶನದಲ್ಲಿಯೂ ಭಾರೀ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪ ಮಾಡಿ ಕಾನ್​​ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜತೆಗೆ, ಮೇಲಧಿಕಾರಿಗಳು ವಸೂಲಿ ಮಾಡಿಸಿದ ಹಫ್ತಾ ಮೊತ್ತವನ್ನು ನಾಯಕರಿಗೆ ಕೊಟ್ಟು ಬರುತ್ತಾರೆ ಎಂದೂ ಆರೋಪ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Thu, 6 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ