AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು

ಸಾಮಾನ್ಯವಾಗಿ ಮೋಜು ಮಸ್ತಿಗಾಗಿ ಅದಕ್ಕೂ ಮಿಗಿಲಾಗಿ ಮಾಡಿದ ಸಾಲವನ್ನ ತೀರಿಸಲು ಕಳ್ಳತನ, ಸುಲಿಗೆ ಮಾಡಿದ ಪ್ರಕರಣಗಳನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಗೆಳೆತಿಯೊಂದಿಗೆ ಲಿವಿಂಗ್ ಟೂಗೆದರ್‌ಗಾಗಿ ಹಣ ಹೊಂದಿಸಲು ಕೂಲಿ ಕೆಲಸಕ್ಕೆಂದು ಹೋಗ್ತಿದ್ದ ಮಹಿಳೆಯರನ್ನ ಸುಲಿಗೆ ಮಾಡಿ ಖಾಕಿ ಕೈಗೆ ತಗಲಾಕೊಂಡಿದ್ದಾನೆ. ಅಷ್ಟಕ್ಕೂ ಖದೀಮನ ಸುಲಿಗೆ ಕೆಲಸ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಮಹಿಳೆ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ ಈಗ ಜೈಲು ಪಾಲು
Kalaburagi Robbers
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ|

Updated on: Dec 04, 2025 | 9:07 PM

Share

ಕಲಬುರಗಿ, (ಡಿಸೆಂಬರ್ 04): ತನ್ನ ಲಿವ್‌ ಇನ್‌  (Live in Relationship) ಗೆಳತಿ ಆಸೆ ಪೂರೈಸಲು, ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ವ್ಯಕ್ತಿ ಹಾಗೂ ಸಹಾಯ ಮಾಡಿದ್ದವ ಸಿಕ್ಕಿಬಿದ್ದಿದ್ದಾರೆ. ಹೌದು.. ಕೂಲಿ ಕೆಲಸ ಮಾಡುತ್ತಿದ್ದ ಬಡಪಾಯಿ ಮಹಿಳೆಯನ್ನ ಕರೆದುಕೊಂಡು ಹೋಗಿ ಹಲ್ಲೆ ಮಾಡಿ ಚಿನ್ನಾಭರಣಗಳನ್ನ ಸುಲಿಗೆ ಮಾಡಿದ್ದ ಇಬ್ಬರು ಕುಖ್ಯಾತ ಸುಲಿಗೆಕೋರರನ್ನ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು (Kalaburagi VV Police) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲ್ಲಪ್ಪ ಅಲಿಯಾಸ್ ಸಂಜು ಸೋಮಣ್ಣ (24) ಬಂಧಿತ ಪ್ರಮುಖ ಆರೋಪಿಯಾಗಿದ್ದು, ಇನ್ನು ಕಲ್ಲಪ್ಪನಿಗೆ ಸಹಾಯ ಮಾಡ್ತಿದ್ದ ಸಂತೋಷ್‌ ಎಂಬಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 22 ರಂದು ಓಂ ನಗರ ಗೇಟ್ ಬಳಿ ಕೂಲಿ ಕೆಲಸಕ್ಕೆಂದು ದಾರುನಾಯಕ್ ತಾಂಡಾ ನಿವಾಸಿ ಸುನೀತಾ ರಾಠೋಡ್‌ ಎನ್ನುವ ಮಹಿಳೆಯನ್ನು ಕಲ್ಲಪ್ಪ ಅಲಿಯಾಸ್ ಸಂಜು ಮತ್ತು ಸಂತೋಷ್, ಕಟ್ಟಡ ನಿರ್ಮಾಣ ಕಾಮಗಾರಿ ಇದೆ ಎಂದು ವಾಜಪೇಯಿ ಬಡಾವಣೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿ ಬೆದರಿಸಿ ಕೊರಳಲ್ಲಿನ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು.

ಇದನ್ನೂ ಓದಿ: ಗಂಡನನ್ನು ಬಿಟ್ಟು ಪ್ರಿಯಕರನ ಜತೆ ಲಿವಿಂಗ್​​​​​​​ ರಿಲೇಶನ್ ಶಿಪ್​: ಪ್ರೇಯಸಿಗಾಗಿ ಕಳ್ಳನಾದ ಪ್ರಿಯಕರ

ಈ ಪ್ರಕರಣ ದಾಖಲಸಿಕೊಂಡಿದ್ದ ಕಲಬುರಗಿ ವಿವಿ ಪೊಲೀಸರು, ವಾಜಪೇಯಿ ಬಡಾವಣೆಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದು, ಈ ವೇಳೆ ಕೂಲಿ ಮಹಿಳೆ ಸುನೀತಾಳನ್ನ ಕರೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಇದರ ಆಧಾರದ ಮೇಲೆ ಕಲ್ಲಪ್ಪ ಅಲಿಯಾಸ್ ಸಂಜು ಮತ್ತು ಸಂತೋಷ್ ಎಂಬಾತರನ್ನ ಬಂಧಿಸಿದ್ದಾರೆ. ಬಂಧಿತ ಸುಲಿಗೆಕೋರರಿಂದ 7.62 ಲಕ್ಷ ಮೌಲ್ಯದ 61 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ವಸ್ತುಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.

ಲಿವ್‌ ಇನ್‌ ಗೆಳತಿ ಆಸೆ ಪೂರೈಸಲು ಸುಲಿಗೆ

ಇನ್ನೂ ಕೂಲಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಅಲಿಯಾಸ್ ಸಂಜು, ಮಹಿಳೆಯೊಬ್ಬಳ ಜೊತೆ ಲಿವಿಂಗ್ ಟುಗೆದರ್ ರಿಲೆಷನ್‌ಶಿಪ್‌ನಲ್ಲಿದ್ದ. ಹೀಗಾಗಿ ಆಕೆಯೊಂದಿಗೆ ಮೋಜು ಮಸ್ತಿ ಮಾಡಲು ಹಣ ಕಡಿಮೆ ಬಿದ್ದಾಗ ಪಿಕ್ ಪಾಕೇಟ್ ದಂಧೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅದರಂತೆ ಕೂಲಿ ಮಾಡುವ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.

ಮೈ ಮುರಿದು ದುಡಿದು ಬದುಕುವುದು ಬಿಟ್ಟು ಮಹಿಳೆಯೊಂದಿಗೆ ಮೋಜು ಮಸ್ತಿಗಾಗಿ ಸುಲಿಗೆ ಮಾಡಿ ಇದೀಗ ಜೈಲುಪಾಲಾಗಿದ್ದರೆ, ಲಿವಿಂಗ್ ಟುಗೆದರ್​​ನಲ್ಲಿ ಮಹಿಳೆ ಅರಾಮ್ ಆಗಿ ಮನೆಯಲ್ಲಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ