Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ
ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ (Women Falls Down From Train) ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಹಳಿಗೆ ಬೀಳುವುದರಲ್ಲಿ ಕೂದಲೆಳೆಯಲ್ಲಿ ಬಚಾವ್ ಆಗಿದ್ದಾರೆ. ಈ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30ಕ್ಕೆ ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ ಕಾಣುವಂತೆ, ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುತ್ತಿದ್ದಳು. ಈ ವೇಳೆ ಸಾಧ್ಯವಾಗದಿದ್ದಾಗ ಭದ್ರತಾ ಸಿಬ್ಬಂದಿ ಆಕೆಯನ್ನು ರೈಲಿಗೆ ಹತ್ತುವುದನ್ನು ತಡೆದು ಪಕ್ಕಕ್ಕೆ ಕೊಂಡೊಯ್ದರು. ಇದೇ ಹೊತ್ತಿಗೆ ಹಿಂಬದಿಯಲ್ಲಿ ಸುಮಾರು 50 ವರ್ಷದ ಮಹಿಳೆಯೊಬ್ಬರು ಅದೇ ರೈಲಿಗೆ ಹತ್ತಲು ಮುಂದಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲು
ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆಯನ್ನು ರಕ್ಷಣೆ ಮಾಡುವ ಸಾಹಸದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರ್‌ಪಿಎಫ್ ಪೇದೆ ಆರ್.ಡಿ ಶೇರಖಾನೆ ಮಹಿಳೆಯನ್ನು ರಕ್ಷಣೆ ಮಾಡಿದ ಸಿಬ್ಬಂದಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:23 am, Mon, 2 January 23