AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ

ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ.

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 08, 2021 | 5:23 PM

Share

ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕಾರ, ಮತದಾನಕ್ಕೆ ಕಲಬುರಗಿ ಪಾಲಿಕೆ ವಾರ್ಡ್ 24ರ ಸದಸ್ಯೆ ಪ್ರಿಯಾಂಕಾಗೆ ತಡೆಯಾಜ್ಞೆ ನೀಡಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ ಹಾಗೂ ಮೇಯರ್​ ಚುನಾವಣೆಯಲ್ಲಿ ಭಾಗಿಯಾಗದಂತೆ ತಡೆಯಾಜ್ಞೆ ಹೊರಡಿಸಲಾಗಿದೆ. ಕಲಬುರಗಿಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಈ ಬಗ್ಗೆ ಆದೇಶ ನೀಡಲಾಗಿದೆ. ಡಿಸೆಂಬರ್ 4 ರಂದು ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.

21 ವರ್ಷವಾಗದಿದ್ದರೂ ಪಾಲಿಕೆ ಚುನಾವಣೆಗೆ ಸ್ಪರ್ಧೆ ಆರೋಪ ಕೇಳಿಬಂದಿತ್ತು. ಪ್ರಿಯಾಂಕಾ ಸ್ಪರ್ಧೆಯನ್ನು ಸೈಯದ್ ನೂರ್ ಫಾತಿಮಾ ಪ್ರಶ್ನಿಸಿದ್ದರು. ವಾರ್ಡ್ ನಂಬರ್ 24ರ ಬಿಜೆಪಿ ಸದಸ್ಯೆಯಾಗಿರುವ ಪ್ರಿಯಾಂಕಾ, ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದಾರೆಂದು ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ, ಡಿಸೆಂಬರ್ 15ಕ್ಕೆ ಮತ್ತೆ ಸೆಷನ್ಸ್​ ಕೋರ್ಟ್​ ವಿಚಾರಣೆ ನಿಗದಿಪಡಿಸಿದೆ. ಸೆಷನ್ಸ್​ ಕೋರ್ಟ್​ ಆದೇಶ ಪ್ರಶ್ನಿಸಿ ಬಿಜೆಪಿ ಸದಸ್ಯೆ ಪ್ರಿಯಾಂಕಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ; ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ಎಪಿಪಿ ನೇಮಕದಲ್ಲಿ ಅಕ್ರಮ ಆರೋಪ ಹಿನ್ನೆಲೆ ಅಭಿಯೋಜಕರಾಗಿ ಆರೋಪಿತರ ಮುಂದುವರಿಸದಂತೆ ಆದೇಶ ನೀಡಲಾಗಿದೆ. ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 61 ಎಪಿಪಿಗಳ ವಿರುದ್ಧ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆ, 4 ತಿಂಗಳಲ್ಲಿ ಇಲಾಖಾ ವಿಚಾರಣೆ ಪೂರ್ಣಗೊಳಿಸಲು ಆದೇಶ ಹೊರಡಿಸಲಾಗಿದೆ. ಲೋಕಾಯುಕ್ತ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕ್ರಿಮಿನಲ್ ಪ್ರಕರಣದ ವಿಚಾರಣೆ ತ್ವರಿತಗೊಳಿಸಲು ಆದೇಶ ನೀಡಲಾಗಿದೆ. ಸಮಾಜ ಪರಿವರ್ತನಾ ಸಮುದಾಯ ಈ ಬಗ್ಗೆ ಪಿಐಎಲ್ ಸಲ್ಲಿಸಿತ್ತು. 2014ರಲ್ಲಿ ಎಎಪಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆಗಿತ್ತು ಎಂದು ಲೋಕಾಯುಕ್ತ ಪೊಲೀಸರು ಚಾರ್ಜ್​​ಶೀಟ್ ದಾಖಲಿಸಿದ್ದರು.

ಇದನ್ನೂ ಓದಿ: ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ; ಸಾಮಾಜಿಕ ಜಾಲತಾಣದ ಮೂಲಕ ಯುವತಿಯಿಂದ ಸಿಎಂಗೆ ದೂರು

ಇದನ್ನೂ ಓದಿ: ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ

Published On - 5:21 pm, Wed, 8 December 21

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು