ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಆಕರ್ಷಕ‌ ಡ್ರೋನ್ ಶೋ ಗೆ ಸಿಎಂ‌ ಫಿದಾ!

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ ಮನೆಮಾಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅದ್ಧೂರಿ ಡ್ರೋನ್ ಶೋ ಮತ್ತು ಸ್ಟ್ರೀಟ್ ಫೆಸ್ಟಿವಲ್‌ಗೆ ಚಾಲನೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 1,775 ಕೋಟಿ ರೂಪಾಯಿ ವೆಚ್ಚದ 801 ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಆಕರ್ಷಕ‌ ಡ್ರೋನ್ ಶೋ ಗೆ ಸಿಎಂ‌ ಫಿದಾ!
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ
Edited By:

Updated on: Sep 17, 2026 | 1:54 PM

ಮುಖ್ಯಾಂಶಗಳು

  • ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಕಲಬುರಗಿಯಲ್ಲಿ ಸಿಎಂ ಡಿಕೆಶಿ ಅದ್ಧೂರಿ ಚಾಲನೆ.
  • ಆಕರ್ಷಕ ಡ್ರೋನ್ ಶೋ ಮತ್ತು ಸ್ಟ್ರೀಟ್ ಫೆಸ್ಟಿವಲ್ ವೀಕ್ಷಿಸಿ ಸಿಎಂ ಫಿದಾ.
  • 1,775 ಕೋಟಿ ವೆಚ್ಚದ 801 ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ.

ಕಲಬುರಗಿ, ಸೆಪ್ಟೆಂಬರ್ 17: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ 13 ತಿಂಗಳ ಬಳಿಕ ಅಂದರೆ 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ನಿಜಾಮನ ಕಪಿಮುಷ್ಟಿಯಿಂದ ಮುಕ್ತಿ ಪಡೆದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗ ಸ್ವಾತಂತ್ರ್ಯದ ಸಂಭ್ರಮ ಮನೆ ಮಾಡಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಗೆ ಆಗಮಿಸಿ ಎರಡು ದಿನಗಳ ಅದ್ದೂರಿ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಆಕರ್ಷಕ ಸ್ಟ್ರೀಟ್ ಫೆಸ್ಟಿವಲ್

ಕೆಕೆಆರ್‌ಡಿಬಿ ಆಯೋಜಿಸಿದ್ದ ಆಕರ್ಷಕ ಸ್ಟ್ರೀಟ್ ಫೆಸ್ಟಿವಲ್, ಪ್ರವಾಸೋದ್ಯಮ ಇಲಾಖೆಯ ಚಿತ್ರಸಂತೆ ಹಾಗೂ ಅಪ್ಪಾ ಕೆರೆಯ ದಡದಲ್ಲಿ ನಡೆದ ಲೈಟಿಂಗ್ ವಿತ್ ಮ್ಯೂಸಿಕ್ ಶೋ ಜನಮನ ಸೆಳೆದವು. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಾಹಿತ್ಯ, ಇತಿಹಾಸ ಹಾಗೂ ಪರಂಪರೆಯನ್ನು ಬಿಂಬಿಸುವ ಬೃಹತ್ ಡ್ರೋನ್ ಶೋ ವೀಕ್ಷಿಸಿದ ಸಿಎಂ ಡಿಕೆಶಿ, ಕಲಬುರಗಿಯ ಸ್ಟ್ರೀಟ್ ಫೆಸ್ಟಿವಲ್ ನೋಡಿದರೆ ಬೆಂಗಳೂರಿನ ಎಂ.ಜಿ. ರಸ್ತೆ ನೆನಪಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರಿಗೆ ಸಿಎಂ ಸನ್ಮಾನ

ಇಂದು ಬೆಳಗ್ಗೆ 8:30ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿರುವ ಮುಖ್ಯಮಂತ್ರಿಗಳು, ನಂತರ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ. ಈ ಸುಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಭಾಗವಹಿಸಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸಿಎಂ ಸನ್ಮಾನಿಸಿದ್ದಾರೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಏಳು ಜಿಲ್ಲೆಗಳ ಒಟ್ಟು 1,775 ಕೋಟಿ ರೂಪಾಯಿ ವೆಚ್ಚದ 801 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us