AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲ್ಯಾಣ ರಥ ಐಷಾರಮಿ ಬಸ್

ರಾಯಚೂರು ಜಿಲ್ಲೆಯ ಸಿಂಧನೂರು-ಬೆಂಗಳೂರು ನಡುವೆ ಮೊದಲ “ಕಲ್ಯಾಣ ರಥ” ಐಷರಾಮಿ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಇದೇ ಆಗಸ್ಟ್ 28 ರಂದು ಸಿಂಧನೂರಿನಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಲಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲ್ಯಾಣ ರಥ ಐಷಾರಮಿ ಬಸ್
ಕಲ್ಯಾಣ ರಥ
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 26, 2023 | 9:20 PM

Share

ಕಲಬುರಗಿ, ಆಗಸ್ಟ್​​ 26: ಕಲ್ಯಾಣ ಕರ್ನಾಟಕ ಕೆಲ ಭಾಗಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿಗೆ ಹೋಗಲು ಇನ್ನು ಕೂಡಾ ಸಮರ್ಪಕ ಮತ್ತು ಹೈಟೆಕ್ ಬಸ್ ವ್ಯವಸ್ಥೆ ಇಲ್ಲಾ. ಮಧ್ಯಮ ಮತ್ತು ಬಡ ವರ್ಗದವರು ಹೆಚ್ಚಾಗಿ ಹೋಗುವ ಬಸ್ ಮತ್ತು ರೈಲಿನ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಇದೀಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲ್ಯಾಣ ರಥ ವಿಶೇಷ ಬಸ್ ನ್ನು ಪರಿಚೆಯಿಸಲು ಮುಂದಾಗಿದೆ. ಸಂಸ್ಥೆಯ ವ್ಯಾಪ್ತಿಯ ರಾಯಚೂರು ಜಿಲ್ಲೆಯ ಸಿಂಧನೂರು-ಬೆಂಗಳೂರು ನಡುವೆ ಮೊದಲ “ಕಲ್ಯಾಣ ರಥ” (Kalyana Ratha luxury bus) ಐಷರಾಮಿ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಇದೇ ಆಗಸ್ಟ್ 28 ರಂದು ಸಿಂಧನೂರಿನಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಸಂಸ್ಥೆಗೆ “ಕಲ್ಯಾಣ ರಥ” ಬ್ರ್ಯಾಂಡಿನ ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಸೇರ್ಪಡೆಯಾಗಿದ್ದು, ರೈಲು ಸೇವೆ ಇಲ್ಲದ ಸಿಂಧನೂರಿನಿಂದ ಆರಂಭಿಕವಾಗಿ ಸೇವೆಯನ್ನು ಆರಂಭಿಸಲಾಗುತ್ತಿದೆ. ತದನಂತರ ಪ್ರದೇಶದ ಇತರೆ ಭಾಗಕ್ಕೂ ಈ ಸೇವೆ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರವರಲ್ಲೇ ಮುಚ್ಚಿದ ಇಂದಿರಾ ಕ್ಯಾಂಟೀನ್​ಗಳು

ಸಿಂಧನೂರು-ಬೆಂಗಳೂರು ನಡುವಿನ ಈ ಐಷರಾಮಿ ಬಸ್ ಪ್ರತಿ ದಿನ ಸಿಂಧನೂರಿನಿಂದ ರಾತ್ರಿ 10 ಗಂಟೆಗೆ ಹೊರಟು ಕಾರಟಗಿ-ಗಂಗಾವತಿ- ಬೂದುಗುಂಪ ಕ್ರಾಸ್-ಹೊಸಪೇಟೆ- ಕೂಡ್ಲಿಗಿ-ಹಿರಿಯೂರು-ತುಮಕೂರು ಮಾರ್ಗವಾಗಿ ಮರುದಿನ ಬೆಂಗಳೂರಿಗೆ 5.30 ಗಂಟೆಗೆ ತಲುಪಲಿದೆ. ಅದೇ ರೀತಿ ಇದೇ ಮಾರ್ಗದಲ್ಲಿ ಬೆಂಗಳೂರಿನಿಂದ ರಾತ್ರಿ 10.15 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 5.45 ಗಂಟೆಗೆ ಸಿಂಧನೂರು ತಲುಪಲಿದೆ.

ಕಲ್ಯಾಣ ರಥದ ವಿಶೇಷತೆ:

“ಕಲ್ಯಾಣ ರಥ” ಹೆಸರಿನ ಈ ವೋಲ್ವೋ ಮಲ್ಟಿ ಎಕ್ಸಲ್ ಬಸ್ ನಲ್ಲಿ ಸ್ಲೀಪರ್ ಕ್ಲಾಸ್ 40 ಆಸನಗಳಿವೆ. ಐಷರಾಮಿ ಬಸ್ 350 ಬಿ.ಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆನ್ಸನ್‍ಗಳನ್ನು ಅಳವಡಿಸಲಾಗಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಇದ್ದು, ಸ್ವಯಂ ಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಬೆಂಕಿ ನಂದಿಸುವ ಉಪಕರಣಗಳ ವ್ಯವಸ್ಥೆ, ವಾಹನದ ಟ್ರ್ಯಾಕಿಂಗ್ ಗುರುತು ವ್ಯವಸ್ಥೆ, ಮೋಬೈಲ್ ಚಾರ್ಜಿಂಗ್ ಪಾಯಿಂಟ್, ಬೆಡ್ ಲೈಟ್, ಲ್ಯಾಪ್ ಟಾಪ್ ಬ್ಯಾಗ್ ಇಡುವ ವ್ಯವಸ್ಥೆ ಇದೆ. ಒಟ್ಟಾರೆಯಾಗಿ ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕೆ ಹೇಳಿ ಮಾಡಿಸಿದಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.