AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಕವಿ ಲಕ್ಕೂರು ಆನಂದ ಅನುಮಾನಾಸ್ಪದ ಸಾವು, ರಸ್ತೆ ಬದಿಯಲ್ಲಿ ಶವ ಪತ್ತೆ

ಯುವ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ವಿಶ್ವವಿದ್ಯಾಲಯದ ರಸ್ತೆ ಪಕ್ಕದಲ್ಲಿ ಆನಂದ ಅವರ ಶವ ಪತ್ತೆಯಾಗಿದೆ. ಹೀಗಾಗಿ ಪೊಲೀಸರು ಇದೊಂದು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಯುವ ಕವಿ ಲಕ್ಕೂರು ಆನಂದ ಅನುಮಾನಾಸ್ಪದ ಸಾವು, ರಸ್ತೆ ಬದಿಯಲ್ಲಿ ಶವ ಪತ್ತೆ
ಆನಂದ ಲಕ್ಕೂರ್
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:May 20, 2024 | 5:36 PM

ಕಲಬುರಗಿ/ಕೋಲಾರ, (ಮೇ 20): ಪ್ರತಿಭಾವಂತ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ (Central Sahitya Akademy) ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ (Lakkuru Ananda) ಅವರು ಮೇ 20ರಂದು ನಿಧನ (Death news) ಹೊಂದಿದ್ದಾರೆ. ಕಲಬುರಗಿಯ ಕಡಗಂಚಿ ಬಳಿ ಇರುವ ಕೇಂದ್ರಿಯ ವಿವಿ (Kalaburagi, Central university ) ಪಿಎಚ್​ಡಿ ವಿದ್ಯಾರ್ಥಿಯಾಗಿದ್ದ ಆನಂದ್ ಶವ ವಿಶ್ವವಿದ್ಯಾಲಯ ರಸ್ತೆ ಬದಿಯ ಕಟ್ಟೆ ಮೇಲೆ ಪತ್ತೆಯಾಗಿದೆ. ಹೀಗಾಗಿ ನರೋಣಾ ಠಾಣೆ  ಪೊಲೀಸರು ಇದೊಂದು ಅನುಮಾನಾಸ್ಪದ ಸಾವು (UDR Case) ಎಂದು ‌ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರು ಗ್ರಾಮದವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. 2013 ರಲ್ಲಿ  ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ. ಇನ್ನು ಇವರ ರಚನೆಯ ದೇವರಿಗೊಂದು ಪತ್ರ ಪದ್ಯವನ್ನು ಪ್ರಥಮ ಪಿಯುಸಿ ಕನ್ನಡ ಪಠ್ಯದಲ್ಲಿ ಅಳವಡಿಕೆ ಮಾಡಲಾಗಿದೆ.

ಆದ್ರೆ, ಇಂದು (ಮೇ 20) ಕೇಂದ್ರ ವಿಶ್ವವಿದ್ಯಾಲಯದ ರಸ್ತೆ ಪಕ್ಕದ ಕಟ್ಟೆಯ ಮೇಲೆ ಆನಂದ ಅವರ ಶಮ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ನರೋಣಾ ಠಾಣೆ  ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Mon, 20 May 24

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್