ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 07, 2024 | 10:55 PM

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆಲುವಿನ ಓಟ ಮುಂದುವರಿದಿದೆ. ಲೋಕಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಭರ್ಜರಿ ಸಾಧನೆ ಮಾಡಿರುವ ಕಾಂಗ್ರೆಸ್ ಈಗ ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ
ಚಂದ್ರಶೇಖರ ಪಾಟೀಲ್
Follow us on

ಕಲಬುರಗಿ, ಜೂನ್ 7: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ (North East Graduate) ಕಾಂಗ್ರೆಸ್​​ಗೆ (Congress) ಭರ್ಜರಿ ಜಯ ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ಗೆ (Chandrasekhara Patil) ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾದಂತಾಗಿದೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಸದ್ಯ ಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದೆ.

ಮತ್ತೊಂದೆಡೆ ಸೋಲಿನ ಸುಳಿವು ದೊರೆಯುತ್ತಿದ್ದಂತೆಯೇ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್, ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ, ಈಶಾನ್ಯ ಪದವಿಧರ ಕ್ಷೇತ್ರದಲ್ಲಿ ಕಾಂಗ್ರಸ್ ಗೆಲ್ಲುತ್ತಿದ್ದಂತೆಯೇ ಕೈ ಕಾರ್ಯಕರ್ತರು ಮತ ಏಣಿಕೆ ಕೇಂದ್ರ ಬಳಿ ಸಂಭ್ರಮಾಚರಿಸಿದರು. ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.

ಇದನ್ನೂ ಓದಿ: ಕಲಬುರಗಿ ಮರಳಿ ಕಾಂಗ್ರೆಸ್ ತೆಕ್ಕೆಗೆ: ಮಾವನ ಸೋಲಿನ ಸೇಡು ತೀರಿಸಿಕೊಂಡ ಅಳಿಯ

ಇನ್ನು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ಆನೆ ಬಲ ಬಂದಾಂತಾಗಿದೆ. ಅಷ್ಟಕ್ಕೂ 2019 ರ ಲೋಕಸಭಾ ಚುನಾವಣೆಯಲ್ಲಿ ಈ ಭಾಗದಲ್ಲಿ ಬಿಜೆಪಿ ಐದಕ್ಕೆ ಐದು ಸ್ಥಾನಗಳನ್ನ ಗೆದ್ದು ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರಛಿದ್ರ ಮಾಡಿತ್ತು. ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದುಕೊಂಡ ಐದು ಸ್ಥಾನಗಳನ್ನ ಗೆಲ್ಲುವುದರ ಮೂಲಕ ಕ್ಲೀನ್’ಸ್ವಿಪ್ ಮಾಡಿಕೊಂಡಿದೆ.  ಜೊತೆಗೆ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ಜಯಭೇರಿ ಬಾರಿಸಿ ಇದೀಗ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸಹ ಪದವೀಧರ ಮತದಾರರು ಕಾಂಗ್ರೆಸ್ ಕೈಹಿಡಿದಿದ್ದು ಗಮನಾರ್ಹವಾಗಿದೆ.

ಅದೆನೇ ಇರಲಿ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ಜರಿ ಯಶಸ್ಸಿನ ಬಳಿಕ ಈಶಾನ್ಯ ಪದವೀಧರ ಚುನಾವಣೆಯಲ್ಲಿ ಸಹ ಕಾಂಗ್ರೆಸ್ ವಿಜಯಯಾತ್ರೆ ಮುಂದುವರಿಸಿದ್ದು, ಬಿಜೆಪಿಯ ಅತಿಯಾದ ಆತ್ಮವಿಶ್ವಾಸವೇ ನಾಯಕರಿಗೆ ಮುಳುವಾಗಿದ್ದು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Fri, 7 June 24